ಪಕ್ಷದ ಅಧ್ಯಕ್ಷರು ಅನುಮತಿ ನೀಡಿದರೆ ಮೋದಿ ವಿರುದ್ಧ ಸ್ಪರ್ಧಿಸಲು ಸಿದ್ಧ :ಪ್ರಿಯಾಂಕಾ ಗಾಂಧಿ -Vishwanews24
ವಯನಾಡ್, : ವಾರಾಣಸಿಯಿಂದ ಸ್ಪರ್ಧಿಸಲು ನನಗೆ ಯಾವುದೇ ಹಿಂಜರಿಕೆ ಇಲ್ಲ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅನುಮತಿ ನೀಡಿದರೆ ತಾವು ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ ಸಂತಸದಿಂದ ಸ್ಪರ್ಧಿಸುವುದಾಗಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕಾ ಗಾಂಧಿ, ಕಾಂಗ್ರೆಸ್ ಅಧ್ಯಕ್ಷರು ನನಗೆ ವಾರಣಾಸಿಯಿಂದ ಸ್ಪರ್ಧಿಸಲು ಹೇಳಿದರೆ ನಾನು ಸಂತಸದಿಂದ ಸ್ಪರ್ಧಿಸುತ್ತೇನೆ ಎಂದು ಹೇಳಿದರು.
ಕಳೆದ ಐದು ವರ್ಷಗಳಲ್ಲಿ ಪ್ರಧಾನಿ ಮೋದಿ ದೇಶವನ್ನು ವಿಭಜಿಸಿದ್ದಾರೆ. ಅವರು ಕೇವಲ ಶ್ರೀಮಂತರ ಹಿತವನ್ನು ರಕ್ಷಿಸಿ ದೇಶದ ಅತಿ ದೊಡ್ಡ ಸಮುದಾಯವಾಗಿರುವ ರೈತರನ್ನು ಕಡೆಗಣಿಸಿದ್ದಾರೆ. ಬಿಜೆಪಿ ರೈತರ ಆದಾಯವನ್ನು ದ್ವಿಗುಣಗೊಳಿಸುವುದಾಗಿ ಹೇಳಿತ್ತು. ಪ್ರತಿಯೊಬ್ಬ ವ್ಯಕ್ತಿಯ ಖಾತೆಗೆ 15 ಲಕ್ಷ ರೂಗಳನ್ನು ಹಾಕುವುದಾಗಿ ಆಶ್ವಾಸನೆ ನೀಡಿತ್ತು. ಆದರೆ ಅದನ್ನು ಮಾಡಿಲ್ಲ ಎಂದು ಹೇಳಿದರು.
ರಾಹುಲ್ ಗಾಂಧಿಯವರಿಗೆ ಸತ್ಯ ಮತ್ತು ನ್ಯಾಯ ಮಹತ್ವದ್ದಾಗಿರುತ್ತದೆ. ಮೋದಿ ಸರ್ಕಾರವು ಜನರಿಗೆ ಸುಳ್ಳು ಭರವಸೆಗಳನ್ನು ನೀಡಿ ಅವುಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ ಎಂದು ಕಿಡಿಕಾರಿದ್ದಾರೆ.
