ಬೆಂಗಳೂರು; ಕಾಂಗ್ರೆಸ್ ಪಕ್ಷದ ಎಲ್ಲಾ ಶಾಸಕರು ಒಟ್ಟಿಗೆ ಇದ್ದೇವೆ ಹಾಗೂ ಬಹುಮತ ಸಾಬೀತುಪಡಿಸುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬಹುಮತ ಸಾಬೀತುಪಡಿಸುವ ಕುರಿತು ಇಂದು ವಿಧಾನಸೌಧದಲ್ಲಿ ಮಾತನಾಡಿದ ಜಿ. ಪರಮೇಶ್ವರ್, “ನಾವು ಎಲ್ಲಾ ಶಾಸಕರು ಒಟ್ಟಿಗೆ ಇದ್ದೇವೆ, ವಿಧಾನಸೌಧಕ್ಕೂ ಒಟ್ಟಿಗೆ ಬಂದಿದ್ದೇವೆ. ವಿಶ್ವಾಸಮತಕ್ಕೆ ಯಾವುದೇ ಅಡಚಣೆ ಬರುವುದಿಲ್ಲ. ಬಹುಮತ ಸಾಬೀತಿಗೂ ಮುನ್ನ ಸ್ಪೀಕರ್ ರಮೇಶ್ ಕುಮಾರ್ ಚರ್ಚೆಗೆ ಅವಕಾಶ ಕೊಟ್ಟರೆ, ಮುಖ್ಯಮಂತ್ರಿ ಕುಮಾರಸ್ವಾಮಿ ಚರ್ಚೆ ಮಾಡಬಹುದು. ಒಟ್ಟಾರೆ ಮೈತ್ರಿ ಸರ್ಕಾರ ಬಹುಮತ ಸಾಬೀತುಪಡಿಸುವುದು ಮಾತ್ರ ಖಚಿತ” ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸದನದಲ್ಲಿ ಬಹುಮತದ ಮೇಲೆ ನಡೆಯ ಬಹುದಾದ ಚರ್ಚೆಯ ಕುರಿತು ಮಾಹಿತಿ ನೀಡಿದ ಅವರು, “ಸರ್ಕಾರದ ಬಗ್ಗೆ, ವ್ಯವಸ್ಥೆಯ ಬಗ್ಗೆ, ಹಾಗೂ ಸುಪ್ರೀಂ ಕೋರ್ಟ್ ತೀರ್ಪಿನ ಬಗ್ಗೆ ಚರ್ಚೆಯಾಗುವ ಸಾಧ್ಯತೆ ಇದೆ” ಎಂದು ತಿಳಿಸಿದರು. ಅಲ್ಲದೆ ಸದನದ ನಂತರ ಶಾಸಕರ ರೆಸಾರ್ಟ್ ವಾಸ್ತವ್ಯ ಇರತ್ತೋ? ಇಲ್ವೋ? ಅಂತ ಎಲ್ಲಾ ನಾಯಕರು ಒಟ್ಟಾಗಿ ತೀರ್ಮಾನ ತೆಗೆದುಕೊಳ್ಳುತ್ತೇವೆ” ಎಂದು ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…