ಪಕ್ಷದ ಕಚೇರಿ ಸ್ಥಾಪನೆಗೆ ಭಿಕ್ಷೆ ಎತ್ತಲು ಕೂಡ ಸಿದ್ಧನಾಗಿರುವೆ : ಡಿ.ಕೆ.ಶಿವಕುಮಾರ್ -Vishwanews24

ಪಕ್ಷದ ಕಚೇರಿ ಸ್ಥಾಪನೆಗೆ ಭಿಕ್ಷೆ ಎತ್ತಲು ಕೂಡ ಸಿದ್ಧನಾಗಿರುವೆ : ಡಿ.ಕೆ.ಶಿವಕುಮಾರ್ -Vishwanews24

ಹೊಸಪೇಟೆ:  ಬಳ್ಳಾರಿ ಸೇರಿದಂತೆ ಪ್ರತಿ ತಾಲೂಕಿನಲ್ಲಿ ಪಕ್ಷದ ಕಚೇರಿ ಸ್ಥಾಪನೆಗೆ ಭಿಕ್ಷೆ ಎತ್ತಲು ಕೂಡ ಸಿದ್ಧನಾಗಿರುವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಹೇಳಿದರು.

ನಗರದ ಸಾಯಿಲೀಲಾ ಕಲ್ಯಾಣ ಮಂಟಪದಲ್ಲಿ  ನಡೆದ ಬಳ್ಳಾರಿ ಜಿಲ್ಲಾ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್‌ ಸ್ವಂತ ಕಚೇರಿ ಹೊಂದಬೇಕು. ಇದಕ್ಕಾಗಿ ದೇಣಿಗೆ ಸಂಗ್ರಹಿಸೋಣ. ಪಕ್ಷಕ್ಕಾಗಿ ಕಾರ್ಯಕರ್ತರಿಂದ ಇಟ್ಟಿಗೆ, ಸಿಮೆಂಟ್‌, ಐವತ್ತು, ನೂರು ರು. ಸಂಗ್ರಹಿಸೋಣ ಎಂದರು.

ಈ ವೇಳೆ ಹೊಸಪೇಟೆ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮಹಮ್ಮದ್‌ ಇಮಾಮ್‌ ನಿಯಾಜಿ ಅವರು, ಹೊಸಪೇಟೆಯಲ್ಲಿ 60/40 ಸೈಟ್‌ ದಾನವಾಗಿ ನೀಡುವೆ ಎಂದು ಅಧ್ಯಕ್ಷರಿಗೆ ತಿಳಿಸಿದರು. ಕೂಡಲೇ ಡಿ.ಕೆ. ಶಿವಕುಮಾರ ಅವರು ತಮ್ಮ ಹೆಗಲ ಮೇಲಿದ್ದ ಶಾಲು ಇಮಾಮ್‌ ಅವರಿಗೆ ಹೊದಿಸಿ ಶಹಬ್ಬಾಸ್‌ಗಿರಿ ನೀಡಿದರು.

ಶಾಸಕರಾದ ಪಿ.ಟಿ. ಪರಮೇಶ್ವರ ನಾಯ್ಕ, ಈ. ತುಕಾರಾಂ, ಬಿ. ನಾಗೇಂದ್ರ, ಭೀಮಾನಾಯ್ಕ, ಜೆ.ಎನ್‌. ಗಣೇಶ್‌, ಮಾಜಿ ಸಂಸದ ವಿ.ಎಸ್‌. ಉಗ್ರಪ್ಪ, ಮಾಜಿ ಸಚಿವ ಸಂತೋಷ್‌ ಲಾಡ್‌, ಮಾಜಿ ಶಾಸಕರಾದ ಅನಿಲ್‌ ಲಾಡ್‌, ಸಿರಾಜ್‌ ಶೇಕ್‌, ರಾಜ್ಯಸಭೆ ಸದಸ್ಯ ಸೈಯದ್‌ ನಾಸೀರ್‌ ಹುಸೇನ್‌, ಬಳ್ಳಾರಿ ಜಿಲ್ಲಾಧ್ಯಕ್ಷ ಮಹಮ್ಮದ್‌ ರಫೀಕ್‌, ಗ್ರಾಮೀಣ ಕಾಂಗ್ರೆಸ್‌ ಅಧ್ಯಕ್ಷ ಬಿ.ವಿ. ಶಿವಯೋಗಿ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷರಾದ ಇಮಾಮ್‌ ನಿಯಾಜಿ, ವಿ. ಸೋಮು, ಮುಖಂಡರಾದ ವೆಂಕಟರಾವ್‌ ಘೋರ್ಪಡೆ, ದೀಪಕ್‌ ಸಿಂಗ್‌, ಭರತ್‌ ರೆಡ್ಡಿ, ಗುಜ್ಜಲ ನಾಗರಾಜ್‌, ಗುಜ್ಜಲ ರಘು ಮತ್ತಿತರರಿದ್ದರು.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

15 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

16 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

16 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

17 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

18 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

18 hours ago