ಲಕ್ನೋ,- ಉತ್ತರ ಪ್ರದೇಶದಲ್ಲಿ ತಮ್ಮ ಪಕ್ಷದ ತೀವ್ರ ಹಿನ್ನಡೆಯಿಂದ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಮತ್ತು ಕಾರ್ಯಕರ್ತರಿಗೆ ತೀವ್ರ ಬೇಸರವಾಗಿದೆ ಎಂದು ರಾಜ್ಯ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಾಜ್‍ಬಬ್ಬರ್ ವಿಷಾದಿಸಿದ್ದಾರೆ.
ರಾಹುಲ್ ಅವರು ಅಮೇಥಿ ಲೋಕಸಭಾ ಕ್ಷೇತ್ರವನ್ನು ತಮ್ಮ ಕುಟುಂಬವೆಂದು ಪರಿಗಣಿಸಿದರೂ ಈ ಕ್ಷೇತ್ರಕ್ಕಾಗಿ ಅನೇಕ ಜನಪರ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದರು. ಆದರೆ, ಈ ಕ್ಷೇತ್ರದ ಜನರು ಇಂತಹ ತೀರ್ಪು ನೀಡಿರುವುದರಿಂದ ಕಾಂಗ್ರೆಸ್ ಅಧ್ಯಕ್ಷರಿಗೆ ತೀವ್ರ ನೋವಾಗಿದೆ ಎಂದು ರಾಜ್‍ಬಬ್ಬರ್ ಬೇಸರಿಸಿದರು.
ಚುನಾವಣಾ ಫಲಿತಾಂಶದ ನಂತರ ಇದೇ ಮೊದಲ ಬಾರಿಗೆ ಸಂದರ್ಶನವೊಂದರಲ್ಲಿ ಮಾತನಾಡಿದ ಹಿರಿಯ ನಟ ಬಬ್ಬರ್ ಅಮೇಥಿ ಸೇರಿದಂತೆ ರಾಜ್ಯದಲ್ಲಿ ಕಾಂಗ್ರೆಸ್‍ಗೆ ಉಂಟಾಗಿರುವ ಸೋಲಿನಿಂದ ರಾಹುಲ್ ಅವರ ಮನಸ್ಸಿಗೆ ತುಂಬಾ ನೋವಾಗಿದೆ ಮತ್ತು ಕಾರ್ಯಕರ್ತರಿಗೆ ಅತೀವ ಬೇಸರವಾಗಿದೆ ಎಂದರು.
ರಾಹುಲ್ ಅವರು ವಯನಾಡ್ ಕ್ಷೇತ್ರದಿಂದ ಜಯ ಸಾಧಿಸಿದ್ದಾರೆ ನಿಜ. ಆದರೆ, ತಾವು ಕುಟುಂಬವೆಂದು ಭಾವಿಸಿದ್ದ ಅಮೇಥಿಯಲ್ಲಿ ಸೋಲುಂಟಾಗಿರುವುದಕ್ಕೆ ಅವರಿಗೆ ತುಂಬಾ ದುಃಖವಾಗಿದೆ ಎಂದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…