Featured

ಪಕ್ಷದ ತೀವ್ರ ಹಿನ್ನಡೆಯಿಂದ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಮತ್ತು ಕಾರ್ಯಕರ್ತರಿಗೆ ತೀವ್ರ ಬೇಸರವಾಗಿದೆ : ರಾಜ್‍ಬಬ್ಬರ್ -Vishwanews24

ಲಕ್ನೋ,- ಉತ್ತರ ಪ್ರದೇಶದಲ್ಲಿ ತಮ್ಮ ಪಕ್ಷದ ತೀವ್ರ ಹಿನ್ನಡೆಯಿಂದ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಮತ್ತು ಕಾರ್ಯಕರ್ತರಿಗೆ ತೀವ್ರ ಬೇಸರವಾಗಿದೆ ಎಂದು ರಾಜ್ಯ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಾಜ್‍ಬಬ್ಬರ್ ವಿಷಾದಿಸಿದ್ದಾರೆ.

ರಾಹುಲ್ ಅವರು ಅಮೇಥಿ ಲೋಕಸಭಾ ಕ್ಷೇತ್ರವನ್ನು ತಮ್ಮ ಕುಟುಂಬವೆಂದು ಪರಿಗಣಿಸಿದರೂ ಈ ಕ್ಷೇತ್ರಕ್ಕಾಗಿ ಅನೇಕ ಜನಪರ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದರು. ಆದರೆ, ಈ ಕ್ಷೇತ್ರದ ಜನರು ಇಂತಹ ತೀರ್ಪು ನೀಡಿರುವುದರಿಂದ ಕಾಂಗ್ರೆಸ್ ಅಧ್ಯಕ್ಷರಿಗೆ ತೀವ್ರ ನೋವಾಗಿದೆ ಎಂದು ರಾಜ್‍ಬಬ್ಬರ್ ಬೇಸರಿಸಿದರು.

ಚುನಾವಣಾ ಫಲಿತಾಂಶದ ನಂತರ ಇದೇ ಮೊದಲ ಬಾರಿಗೆ ಸಂದರ್ಶನವೊಂದರಲ್ಲಿ ಮಾತನಾಡಿದ ಹಿರಿಯ ನಟ ಬಬ್ಬರ್ ಅಮೇಥಿ ಸೇರಿದಂತೆ ರಾಜ್ಯದಲ್ಲಿ ಕಾಂಗ್ರೆಸ್‍ಗೆ ಉಂಟಾಗಿರುವ ಸೋಲಿನಿಂದ ರಾಹುಲ್ ಅವರ ಮನಸ್ಸಿಗೆ ತುಂಬಾ ನೋವಾಗಿದೆ ಮತ್ತು ಕಾರ್ಯಕರ್ತರಿಗೆ ಅತೀವ ಬೇಸರವಾಗಿದೆ ಎಂದರು.

ರಾಹುಲ್ ಅವರು ವಯನಾಡ್ ಕ್ಷೇತ್ರದಿಂದ ಜಯ ಸಾಧಿಸಿದ್ದಾರೆ ನಿಜ. ಆದರೆ, ತಾವು ಕುಟುಂಬವೆಂದು ಭಾವಿಸಿದ್ದ ಅಮೇಥಿಯಲ್ಲಿ ಸೋಲುಂಟಾಗಿರುವುದಕ್ಕೆ ಅವರಿಗೆ ತುಂಬಾ ದುಃಖವಾಗಿದೆ ಎಂದರು.

 

Vishwa News 24

Recent Posts

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

8 minutes ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

22 minutes ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

28 minutes ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

42 minutes ago

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

24 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

1 day ago