ಬೆಂಗಳೂರು: ಪಕ್ಷದ ನಾಯಕರು ಚಿಕ್ಕ ವಯಸ್ಸಿನಲ್ಲಿ ನನಗೆ ದೊಡ್ಡ ಜವಾಬ್ದಾರಿ ನೀಡಿದ್ದಾರೆ. ಅದನ್ನು ಸಮರ್ಥವಾಗಿ ನಿಭಾಯಿಸುತ್ತೇನೆ. ದೇವೇಗೌಡರು ಇಳಿ ವಯಸ್ಸಿನಲ್ಲಿಯೂ ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡಿದ್ದಾರೆ. ನಾನು ಪಕ್ಷ ಕಟ್ಟಲು ಅವರೇ ಸ್ಪೂರ್ತಿ’ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಜೆಡಿಎಸ್ ಯುವ ಘಟಕದ ಅಧ್ಯಕ್ಷರಾಗಿ ನೇಮಕಗೊಂಡ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ನಿಖಿಲ್, ಪಕ್ಷವನ್ನು ಮುಂದಕ್ಕೆ ಕೊಂಡೊಯ್ಯಲು ಸಮರ್ಥನಿದ್ದೇನೆ ಎಂಬ ಭಾವನೆಯೊಂದಿಗೆ ಯುವ ಘಟಕದ ಅಧ್ಯಕ್ಷ ಸ್ಥಾನ ನೀಡಿದ್ದಾರೆ. ಆದರೆ ಇಂದಿಗೂ ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಗುರುತಿಸಿಕೊಳ್ಳಲು ಇಷ್ಟಪಡುತ್ತೇನೆ. ನನಗೆ ಈ ಸ್ಥಾನಮಾನ ಮುಖ್ಯವಾಗುವುದಿಲ್ಲ. ಮಧು ಬಂಗಾರಪ್ಪ ಅವರು ಹಲವು ವರ್ಷದಿಂದ ಈ ಸ್ಥಾನವನ್ನು ಸಂಪೂರ್ಣವಾಗಿ ತುಂಬಿದ್ದಾರೆ.
ಅವರು ಮಾಡಿದ ಒಳ್ಳೆ ಕೆಲಸ ಕಾರ್ಯಗಳನ್ನು ಉಳಿಸಿಕೊಂಡು ಹೋಗಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.
ನನ್ನ ಎಲ್ಲ ಮತದಾರ ಬಂಧುಗಳಿಗೆ ಧನ್ಯವಾದ ಸಲ್ಲಿಸುತ್ತೇನೆ. ಐದೂ ಮುಕ್ಕಾಲು ಲಕ್ಷ ಜನರು ನಿಖಿಲ್ ಕುಮಾರಸ್ವಾಮಿ ಅಥವಾ ಜನತಾದಳದ ಪರವಾಗಿ ಮತ ಹಾಕಿದ್ದೀರಿ. ಇದು ತಮಾಷೆಯ ಸಂಗತಿ ಅಲ್ಲ. ಐದೂ ಮುಕ್ಕಾಲು ಲಕ್ಷ ಜನ ನನ್ನ ಪರವಾಗಿದ್ದಾರೆ. ನನ್ನ ವಿರುದ್ಧ ಮತಹಾಕಿದವರ ಮನ ಗೆಲ್ಲಲು ಮುಂದಿನ ವರ್ಷಗಳಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.
ಜೆಡಿಎಸ್ ಪಕ್ಷ ಉಳಿದಿರುವುದು ದೇವೇಗೌಡ ಸಾಹೇಬರ ಶ್ರಮದಿಂದ ಮಾತ್ರ. ಸಂಘಟನೆ ಮಾಡುವ ವಿಚಾರದಲ್ಲಿ ನಿರಂತರವಾಗಿ ಅವರ ದುಡಿಮೆಯನ್ನು ಮಾಡಿದ್ದರು. ಇಂದು ನಮ್ಮ ಪಕ್ಷದ ಕಾರ್ಯಕರ್ತರೊಂದಿಗೆ ಅದೇ ಹಾದಿಯಲ್ಲಿ ನಾನೂ ಹೆಜ್ಜೆ ಹಾಕಬೇಕು ಎಂಬ ನಿರ್ಧಾರ ಮಾಡಿದ್ದೇನೆ ಎಂದು ತಿಳಿಸಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…