Featured

ಪಕ್ಷಿಕೆರೆ  ಕೊಲೆ ಮತ್ತು‌ ಆತ್ಮಹತ್ಯೆ ಪ್ರಕರಣ : ಕಾರ್ತಿಕ್ ಭಟ್  ವಿರುದ್ಧ ಅವ್ಯವಹಾರ ಆರೋಪ – vishwanews24

ಪಕ್ಷಿಕೆರೆ  ಕೊಲೆ ಮತ್ತು‌ ಆತ್ಮಹತ್ಯೆ ಪ್ರಕರಣ : ಕಾರ್ತಿಕ್ ಭಟ್ ಕೆಲಸ ಮಾಡುತ್ದಿದ್ದ ಬ್ಯಾಂಕ್ ನಲ್ಲಿ ಅವ್ಯವಹಾರ ಆರೋಪ

ಕಿನ್ನಿಗೋಳಿ: ಪಕ್ಷಿಕೆರೆಯಲ್ಲಿ‌ ನಡೆದ ಕೊಲೆ ಮತ್ತು‌ ಆತ್ಮಹತ್ಯೆಗೆ ಸಂಬಂಧಿಸಿದಂತೆ ಕಾರ್ತಿಕ್ ಭಟ್ ನ ಮತ್ತೊಂದು ಅವ್ಯವಹಾರ ಪ್ರಕರಣ ಬೆಳಕಿಗೆ ಬಂದಿದೆ. ಕಾರ್ತಿಕ್ ಭಟ್ ತನ್ನ 10 ಪವನ್ ಚಿನ್ನವನ್ನು ಎಗರಿಸಿದ್ದಾನೆ ಎಂದು ಪಕ್ಷಿಕೆರೆ ಹೊಸಕಾಡು ನಿವಾಸಿ ಮಹಮ್ಮದ್ ಆರೋಪಿಸಿದ್ದಾರೆ.

ಎರಡು ವರ್ಷದ ಹಿಂದೆ ಪಕ್ಷಿಕೆರೆ ಬ್ಯಾಂಕ್ ವೊಂದರಲ್ಲಿ ತನ್ನ 10 ಪವನ್ ಚಿನ್ನವನ್ನು ಅಡವಿಟ್ಟು 1 ಲಕ್ಷ 60 ಸಾವಿರ ಸಾಲ ಪಡೆದಿದ್ದ ಮಹಮ್ಮದ್ ಅವರಿಗೆ ಇನ್ನೂ ಹೆಚ್ಚಿನ ಸಾಲದ ಅಗತ್ಯವಿದೆ ಎಂದು ಅರಿತ ಕಾರ್ತಿಕ್ ಭಟ್‌ ತಾನೂ ಮ್ಯಾನೇಜರ್ ಆಗಿರುವ ಸುಬ್ರಹ್ಮಣ್ಯ ಸಹಕಾರಿ ಸಂಘದಲ್ಲಿ ಅಡವಿಟ್ಟರೆ ಹೆಚ್ಚಿನ ಸಾಲ ನೀಡುವುದಾಗಿ ಭರವಸೆ ನೀಡಿದ್ದ. ಹೀಗಾಗಿ ಮಹಮ್ಮದ್ ಅವರು ಪಕ್ಷಿಕೆರೆ ಬ್ಯಾಂಕ್ ನಲ್ಲಿ ಅಡವಿಟ್ಟ ಚಿನ್ನವನ್ನು ಬಿಡಿಸಿ, ಕಾರ್ತಿಕ್ ಬ್ರಾಂಚ್‌ ಮ್ಯಾನೇಜರ್ ಆಗಿರುವ ಬ್ಯಾಂಕ್ ನಲ್ಲಿ ಇರಿಸಿ 3 ಲಕ್ಷ 4 ಸಾವಿರ ಸಾಲ ಪಡೆದಿದ್ದರು.

ಈ ನಡುವೆ ವೈಯಕ್ತಿಕ ಸಮಸ್ಯೆಯಿಂದ ಮಹಮ್ಮದ್ ಅವರು ಊರಲ್ಲಿ ಇರದ ಕಾರಣ ಬ್ಯಾಂಕ್ ಗೆ ಸರಿಯಾಗಿ ಭೇಟಿ ನೀಡಿರಲಿಲ್ಲ. ಕಾರ್ತಿಕ್ ಅತ್ಮಹತ್ಯೆ ಮಾಡಿದ ಕಾರಣ ಸಂಶಯಗೊಂಡ ಮಹಮ್ಮದ್ ಅವರು ಈ ಬಗ್ಗೆ ಬ್ಯಾಂಕಿನಲ್ಲಿ ವಿಚಾರಿಸಿದಾಗ 4 ತಿಂಗಳಲ್ಲೇ ಅಡವಿಟ್ಟ ಬಂಗಾರ ಬಿಡಿಸಿದ ಬಗ್ಗೆ ಬ್ಯಾಂಕ್ ಅಧಿಕಾರಿಗಳು ವಿವರ ನೀಡಿದ್ದಾರೆ.

ಕಾರ್ತಿಕ್ ಈ ಬಂಗಾರವನ್ನು ಅಲ್ಲಿಂದ ಎಗರಿಸಿ ಅದರ ಮೂಲ ಬೆಲೆಗೆ ಮಾರಿದ್ದಾನೆ ಎಂದು ಬಂಗಾರದ ಒಡವೆ ಕಳಕೊಂಡ ಮಹಮದ್ ಆರೋಪಿಸಿದ್ದಾರೆ. ಈ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

12 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

12 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

12 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

15 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

15 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

15 hours ago