ಬೆಂಗಳೂರು: ಸ್ವತಂತ್ರವಾಗಿ ನಿಲ್ಲುವ ಬೆಂಬಲಿಗರ ನಿರ್ಣಯವನ್ನು ಮಾಜಿ ಕೇಂದ್ರ ಸಚಿವ, ದಿವಂಗತ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಅವರು ತಳ್ಳಿಹಾಕಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ ಸ್ವತಂತ್ರವಾಗಿ ನಿಲ್ಲುವುದಿಲ್ಲ. ನಾವು ಪಕ್ಷದ ಜತೆಗಿದ್ದೇವೆ. ಪ್ರಚಾರದ ಜವಾಬ್ದಾರಿ ನಮ್ಮ ಮೇಲಿದೆ. ಮೋದಿಯವರು ಮತ್ತೊಮ್ಮೆ ನಮ್ಮ ಪ್ರಧಾನಿಯಾಗಬೇಕು. ಪಕ್ಷಕ್ಕಾಗಿ ನಾವು ಕೆಲಸ ಮಾಡುತ್ತೇವೆ. ಹೀಗಾಗಿ ಸಮಾಧಾನದಿಂದ ವರ್ತಿಸಬೇಕು ಎಂದು ಕಾರ್ಯಕರ್ತರಿಗೆ ಮನವಿ ಮಾಡಿದರು.
ದೇಶ ಮೊದಲು ಪಕ್ಷ ಆಮೇಲೆ ಎಂಬುದು ಮುಖ್ಯ. ನಮ್ಮ ಪ್ರಬುದ್ಧತೆಯನ್ನು ತೋರಿಸುವ ಸಂದರ್ಭ ಇದಾಗಿದ್ದು, ಪಕ್ಷದ ಮುಖಂಡರ ತೀರ್ಮಾನಕ್ಕೆ ನಾನು ಬದ್ಧಳಾಗಿರುತ್ತೇನೆ. ಬೇರೆ ರೀತಿಯಲ್ಲಿ ಯೋಚನೆ ಮಾಡುವುದು ಬೇಡ. ಯಾವುದೇ ಊಹಾಪೋಹಗಳಿಗೆ ಯಾರು ಕಿವಿಗೊಡಬೇಡಿ. ಮೋದಿಯನ್ನು ಮತ್ತೆ ಪ್ರಧಾನಿಯನ್ನಾಗಿ ಮಾಡೋಣ ಎಂದು ತಿಳಿಸಿದರು.
ಅನಂತಕುಮಾರ್ ಹಾದಿಯಲ್ಲಿ ನಾವೆಲ್ಲ ಮುನ್ನಡೆಯಬೇಕು. ಹಾಗೆ ಮಾಡಿದರೆ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದಂತಾಗುತ್ತದೆ ಎಂದು ಹೇಳಿದ ಅವರು ಕುಟುಂಬ ರಾಜಕಾರಣದಲ್ಲಿ ನಮಗೆ ನಂಬಿಕೆಯಿಲ್ಲ. ಆದರೆ, ಬಿಜೆಪಿ ಅಧಿಕಾರಕ್ಕೆ ಬರುವುದಕ್ಕೆ ನಮ್ಮ ಪ್ರಚಾರ ನಿರಂತರವಾಗಿರುತ್ತದೆ ಎಂದು ತಿಳಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…