Featured

ಪಕ್ಷೇತರಳಾಗಿ ಸ್ಪರ್ಧೆ ಮಾಡುವುದಿಲ್ಲ; ದೇಶ ಮೊದಲು ,ಮೋದಿಯವರನ್ನು ಮತ್ತೆ ಪ್ರಧಾನಿ ಮಾಡಬೇಕಾದರೆ ಒಂದಾಗಿ ಕೆಲಸ ಮಾಡಬೇಕು : ತೇಜಸ್ವಿನಿ ಅನಂತ್ ಕುಮಾರ್ – Vishwanews24

ಬೆಂಗಳೂರು: ಸ್ವತಂತ್ರವಾಗಿ ನಿಲ್ಲುವ ಬೆಂಬಲಿಗರ ನಿರ್ಣಯವನ್ನು ಮಾಜಿ ಕೇಂದ್ರ ಸಚಿವ, ದಿವಂಗತ ಅನಂತ್​ ಕುಮಾರ್​ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಅವರು ತಳ್ಳಿಹಾಕಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ ಸ್ವತಂತ್ರವಾಗಿ ನಿಲ್ಲುವುದಿಲ್ಲ. ನಾವು ಪಕ್ಷದ ಜತೆಗಿದ್ದೇವೆ. ಪ್ರಚಾರದ ಜವಾಬ್ದಾರಿ ನಮ್ಮ ಮೇಲಿದೆ. ಮೋದಿಯವರು ಮತ್ತೊಮ್ಮೆ ನಮ್ಮ ಪ್ರಧಾನಿಯಾಗಬೇಕು. ಪಕ್ಷಕ್ಕಾಗಿ ನಾವು ಕೆಲಸ ಮಾಡುತ್ತೇವೆ. ಹೀಗಾಗಿ ಸಮಾಧಾನದಿಂದ ವರ್ತಿಸಬೇಕು ಎಂದು ಕಾರ್ಯಕರ್ತರಿಗೆ ಮನವಿ ಮಾಡಿದರು.

ದೇಶ ಮೊದಲು ಪಕ್ಷ ಆಮೇಲೆ ಎಂಬುದು ಮುಖ್ಯ. ನಮ್ಮ ಪ್ರಬುದ್ಧತೆಯನ್ನು ತೋರಿಸುವ ಸಂದರ್ಭ ಇದಾಗಿದ್ದು, ಪಕ್ಷದ ಮುಖಂಡರ ತೀರ್ಮಾನಕ್ಕೆ ನಾನು ಬದ್ಧಳಾಗಿರುತ್ತೇನೆ. ಬೇರೆ ರೀತಿಯಲ್ಲಿ ಯೋಚನೆ ಮಾಡುವುದು ಬೇಡ. ಯಾವುದೇ ಊಹಾಪೋಹಗಳಿಗೆ ಯಾರು ಕಿವಿಗೊಡಬೇಡಿ. ಮೋದಿಯನ್ನು ಮತ್ತೆ ಪ್ರಧಾನಿಯನ್ನಾಗಿ ಮಾಡೋಣ ಎಂದು ತಿಳಿಸಿದರು.

ಅನಂತಕುಮಾರ್ ಹಾದಿಯಲ್ಲಿ ನಾವೆಲ್ಲ ಮುನ್ನಡೆಯಬೇಕು. ಹಾಗೆ ಮಾಡಿದರೆ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದಂತಾಗುತ್ತದೆ ಎಂದು ಹೇಳಿದ ಅವರು ಕುಟುಂಬ ರಾಜಕಾರಣದಲ್ಲಿ ನಮಗೆ ನಂಬಿಕೆಯಿಲ್ಲ. ಆದರೆ, ಬಿಜೆಪಿ ಅಧಿಕಾರಕ್ಕೆ ಬರುವುದಕ್ಕೆ ನಮ್ಮ ಪ್ರಚಾರ ನಿರಂತರವಾಗಿರುತ್ತದೆ ಎಂದು ತಿಳಿಸಿದರು.

Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

17 minutes ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

2 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

2 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

3 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

3 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

3 hours ago