ಬೆಂಗಳೂರು: ರಾಜ್ಯದಲ್ಲಿ ಮುಂದೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ಖಚಿತ. ಮುಖ್ಯಮಂತ್ರಿ ಯಾರು ಆಗಬೇಕು ಅಂತ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಕೇಂದ್ರದ ಮಾಜಿ ಸಚಿವ ಕೆ.ಎಚ್. ಮುನಿಯಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷರು ಡಿ.ಕೆ. ಶಿವಕುಮಾರ್ ಇದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಲ್ ಪಿ ನಾಯಕರು. ನೀವು ಮುಖ್ಯಮಂತ್ರಿ ಆಗಿದ್ದವರು ಎಲ್ಲರನ್ನು ನೀವೆ ಒಗ್ಗಟ್ಟನಿಂದ ತೆಗೆದುಕೊಂಡು ಹೋಗಬೇಕು. ಅಧ್ಯಕ್ಷರ ಜೊತೆಗೆ ಕೈ ಜೋಡಿಸಿ ಎಲ್ಲರೂ ಪಕ್ಷವನ್ನು ಅಧಿಕಾರಕ್ಕೆ ತರುವುದಕ್ಕೆ ಕೆಲಸ ಮಾಡಬೇಕು ಎಂದು ನಾನು ಸಿದ್ದರಾಮಯ್ಯ ಅವರಿಗೆ ಸಭೆ ಒಂದರಲ್ಲಿ ತಿಳಿಸಿದ್ದೆ ಎಂದು ಹೇಳಿದರು.
ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ಹಲವಾರು ಕೆಲಸ ಮಾಡಿದ್ದಾರೆ. ನಮ್ಮಲ್ಲಿ ಈಗ ಸಿಎಂ ವಿಚಾರ ಅಪ್ರಸ್ತುತ. ಪ್ರಜಾಪ್ರಭುತ್ವದಲ್ಲಿ ನಾವು ಕೆಲವೊಂದು ವಿಚಾರಕ್ಕೆ ತಲೆ ಬಾಗಲೇಬೇಕು. ಸಿದ್ದರಾಮಯ್ಯ ಅವರು ಸಿಎಂ ವಿಚಾರ ಎಲ್ಲೂ ಪ್ರಸ್ತಾಪ ಮಾಡಿಲ್ಲ. ಕೆಲವರು ಹೀಗೆ ಮಾತಾಡುತ್ತಿದ್ದಾರೆ. ಅದೆಲ್ಲ ಆಗಬಾರದು ಅಂತ ನಾನು ಹೇಳುತ್ತೇನೆ ಎಂದರು.
ಪಕ್ಷ ಅಧಿಕಾರಕ್ಕೆ ತರುವುದು ನಮ್ಮ ಕೆಲಸ. ಪಕ್ಷ ದೊಡ್ಡದು, ವ್ಯಕ್ತಿ ದೊಡ್ಡವರಲ್ಲ. ಪಕ್ಷದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಲ್ಲಿ ಕಮಿಟಿ ಇದೆ. ಯಾರು ಇಷ್ಟ ಬಂದ ಹಾಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡುವಹಾಗೆ ಇಲ್ಲ. ಪಕ್ಷದಲ್ಲಿ ಎಲ್ಲರಿಗೂ ಪ್ರಾಶಸ್ತ್ಯ ನೀಡಬೇಕು. ಹೈಕಮಾಂಡ್ ಆದೇಶದಮೇಲೆ ನಡೆಯಿರಿ ಎಂದು ಹೇಳಿದ್ದೇನೆ. ಡಿ.ಕೆ. ಶಿವಕುಮಾರ್ ಅವರಿಗೆ ಹಿರಿಯರ ಸಭೆ ಕರೆಯಲು ಹೇಳುತ್ತೇನೆ ಎಂದು ತಿಳಿಸಿದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…