ಬಾಳೆಹೊನ್ನೂರು: ತಾನು ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದು, ಪಕ್ಷ ಅವಕಾಶ ನೀಡಿದರೆ ಸ್ಪರ್ಧಿಸಲು ಸಿದ್ಧ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲವು ಸಮಯದಿಂದ ಉಡುಪಿ ಜಿಲ್ಲೆಯಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದೇನೆ. ಟಿಕೆಟ್ ನೀಡಲಿ, ಬಿಡಲಿ ಪಕ್ಷದ ಪರ ಕೆಲಸ ಮಾಡುತ್ತೇನೆ. ಕಾಂಗ್ರೆಸ್ ಸರಕಾರದಲ್ಲಿ ಕ್ಯಾಬಿನೆಟ್ ಸಚಿವನಾಗಿ ಕೆಲಸ ಮಾಡಿದ್ದೇನೆ. ಮೋದಿ ನಾಯಕತ್ವವನ್ನು ಮೆಚ್ಚಿ ಬಿಜೆಪಿಗೆ ಸೇರಿದ್ದು, ರಾಜ್ಯ ಮತ್ತು ರಾಷ್ಟ್ರ ಮಟ್ಟದ ಚುನಾವಣೆಯಲ್ಲಿ ಜವಾಬ್ದಾರಿ ನಿಭಾಯಿಸಿದ್ದೇನೆ ಎಂದರು.
ಹಾಲಿ ಸಂಸದರು ಜನ ಸಾಮಾನ್ಯರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ ಎಂಬ ಆರೋಪದ ಬಗ್ಗೆ ನಾನು ಮಾತ ನಾಡುವುದಿಲ್ಲ. ಪ್ರವಾಸೋದ್ಯಮ ಅಭಿ ವೃದ್ಧಿಯಾದಲ್ಲಿ ಹಲವಾರು ಜನರಿಗೆ ಉದ್ಯೋಗ ಸೃಷ್ಟಿಯಾಗಲಿದೆ. ಒತ್ತುವರಿ, ಕಸ್ತೂರಿ ರಂಗನ್ ವರದಿ ಜಾರಿ, ಹುಲಿ ಯೋಜನೆ, ಬಫರ್ ಝೋನ್, ಅಡಿಕೆ ಎಲೆಚುಕ್ಕಿ ರೋಗ ಮುಂತಾದವುಗಳನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ. ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ಪ್ರಾಮಾಣಿಕ ವಾಗಿ ನಿಭಾಯಿಸಬಲ್ಲೆ ಎಂದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…