Featured

ಪಕ್ಷ ವಿರೋಧಿ ಕೆಲಸ ಮಾಡುತ್ತಿರುವ ವಿಜಯೇಂದ್ರಗೆ ನೋಟಿಸ್‌ ನೀಡಿ: ರಮೇಶ್ ಜಾರಕಿಹೊಳಿ – vishwanews24

ವಿಜಯೇಂದ್ರಪಕ್ಷ ವಿರೋಧಿ ಕೆಲಸ ಮಾಡುತ್ತಿದ್ದಾರೆ, ಹಾಗಾಗಿ ನಮಗೆ ಈ ಪರಿಸ್ಥಿತಿ  : ರಮೇಶ್ ಜಾರಕಿಹೊಳಿ

ನವದೆಹಲಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಪಕ್ಷ ವಿರೋಧಿ ಕೆಲಸ ಮಾಡುತ್ತಿದ್ದು, ಮೊದಲು ಅವರಿಗೆ ನೋಟಿಸ್ ನೀಡಬೇಕು. ವಿಜಯೇಂದ್ರ ಪರ ಕೆಜೆಪಿ ನಾಯಕರು ಮಾತ್ರ ಮಾತನಾಡುತ್ತಿದ್ದು, ಬಿಜೆಪಿ ನಾಯಕರು ಮಾತನಾಡುತ್ತಿಲ್ಲ ಎಂದು ಶಾಸಕ ರಮೇಶ್ ಜಾರಕಿಹೊಳಿ ಆರೋಪಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ವಕ್ಫ್‌ ಭೂಕಬಳಿಕೆ ವಿರುದ್ಧ ಮಾಡಿದ ಹೋರಾಟದ ವರದಿ ಸಲ್ಲಿಸಲು ದೆಹಲಿಗೆ ಬಂದಿದ್ದು, ಸಹಜವಾಗಿ ಬೇರೆ ವಿಚಾರಗಳ ಬಗ್ಗೆ ಮಾತನಾಡುತ್ತೇವೆ. ವಿಜಯೇಂದ್ರ ಅವರು ಅಧ್ಯಕ್ಷರಾಗಿ ಪಕ್ಷ ವಿರೋಧಿ ಕೆಲಸ ಮಾಡುತ್ತಿದ್ದಾರೆ. ಹಾಗಾಗಿ ನಮಗೆ ಈ ಪರಿಸ್ಥಿತಿ ಬಂತು. ಪಕ್ಷದ ಹಿತದೃಷ್ಟಿಯಿಂದ ವಕ್ಫ್‌ ಹೋರಾಟ ಮಾಡಿದೆವು ಎಂದು ಸ್ಪಷ್ಟನೆ ನೀಡಿದರು.

ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರಿಗೆ ನೋಟಿಸ್ ಕೊಡ್ತಾರಂತೆ ಗೊತ್ತಿತ್ತು. ಯತ್ನಾಳ್ ಅವರು ನೋಟಿಸ್‌ಗೆ ಉತ್ತರ ಕೊಡುತ್ತಾರೆ. ವಿಜಯೇಂದ್ರ ಅವರಿಗೆ ಯಾವಾಗ ನೋಟಿಸ್‌ ಕೊಡುತ್ತೀರಿ? ಎಂದು ಪ್ರಶ್ನಿಸಿದರು.

 

Vishwa News 24

Recent Posts

ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ ಗೊತ್ತಿಲ್ಲ : ಶೋಭಾ ಕರಂದ್ಲಾಜೆ – vishwanews24

ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು: ಸಿದ್ದರಾಮಯ್ಯ  ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ…

46 minutes ago

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ – vishwanews24

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ…

1 hour ago

ಕಾಪು ಶ್ರೀ ಹಳೇ ಮಾರಿಯಮ್ಮ ದೇವಿಗೆ ವಿಶೇಷ ಲಕ್ಷಪುಷ್ಪಾರ್ಚನೆ – vishwanews24

ಕಾಪು ಹಳೇ ಮಾರಿಯಮ್ಮ ದೇವಿಗೆ ಲಕ್ಷಪುಷ್ಪಾರ್ಚನೆ 135 ಕೆಜಿ ಕೆಂಪು ಕೇಪುಳ ಹೂ, 1,200ಕ್ಕೂ ಅಧಿಕ ಚೆಂಡು ಮಲ್ಲಿಗೆ ಸಮರ್ಪಣೆ…

1 hour ago

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ – vishwanews24

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ…

2 hours ago

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು – vishwanews24

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್‌ಸ್ಟಾಗ್ರಾಮ್…

3 hours ago

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ – vishwanews24

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…

4 hours ago