ಕಾಪು: ಚುನಾವಣೆಗೆ ದಿನ ಸಮೀಪಿಸುತ್ತಿರುವಂತೆಯೇ, ಕಾಪುವಿನಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ವಿವಿಧ ಮುಖಂಡರು ಕಾಂಗ್ರೆಸ್‌ಗೆ ವಲಸೆ ಹೋಗಿದ್ದಾರೆ.
ಬಿಜೆಪಿ ಮುಖಂಡರಾದ ದುಮಣಿ ಭಟ್, ನಾರಾಯಣ ಬೆಳ್ಚಡ, ಜೆಡಿಎಸ್ ಮುಖಂಡರಾದ ಅಬ್ದುಲ್ ಅತೀಫ್ ದಾವೂದ್, ಶಾಬಾನ್ ಉಚ್ಚಿಲ, ಗುರುಪ್ರಸಾದ್ ಭಟ್ ಉಚ್ಚಿಲ, ಅಬ್ದುಲ್ ಹಮೀದ್ ಸಹಿತ ಅನೇಕರು ಸೇರ್ಪಡೆಯಾದರು.
ಈ ವೇಳೆ ಮಾತನಾಡಿದ ಶಾಸಕ ವಿನಯ್ ಕುಮಾರ್ ಸೊರಕೆ, ಜಾತ್ಯತೀತ ಮನೋಭಾವದ ಎಲ್ಲರನ್ನೂ ಸೇರಿಸಿಕೊಂಡು ಪಕ್ಷ ಸಂಘಟನೆ ಜತೆಗೆ ಅಭಿವೃದ್ಧಿ ಕಾರ್ಯಗಳನ್ನು ನಡೆಸಿಕೊಂಡು ಬರಲಾಗಿದೆ. ಮುಂದೆಯೂ ಸರ್ವರ ಸಹಕಾರ ಅಗತ್ಯ ಪಕ್ಷಕ್ಕೆ ಸೇರ್ಪಡೆಗೊಂಡವರಿಗೆ ಮುಂದಿನ ದಿನ ಸೂಕ್ತ ಸ್ಥಾನಮಾನ ಕಲ್ಪಿಸಲಾಗುವುದು. ಎಲ್ಲರನ್ನೂ ಪಕ್ಷದ ಸಂಘಟನೆಯಲ್ಲಿ ಬಳಸಿ ಕೊಳ್ಳಲಾಗುವುದು ಎಂದರು.
ಕೆಪಿಸಿಸಿ ಕಾರ್ಯದರ್ಶಿ ಡಾ| ದೇವಿಪ್ರಸಾದ್ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ, ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ದಿನೇಶ್ ಕೋಟ್ಯಾನ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ವಿಶ್ವಾಸ್ ಅಮೀನ್, ಕಾಂಗ್ರೆಸ್ ಮುಖಂಡರಾದ ಇಮ್ರಾನ್, ಲೋಕೇಶ್ ಅಂಚನ್, ರಫೀಕ್, ಸಿರಾಜ್ ಉಪಸ್ಥಿತರಿದ್ದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…