ಬೆಂಗಳೂರು : ಮುಂಬರುವ 2023ರ ವಿಧಾನಸಭೆ ಚುನಾವಣೆಯಲ್ಲಿ ಸ್ವಂತ ಬಲದ ಮೇಲೆ ಅಧಿಕಾರ ಹಿಡಿಯುವ ನಿಟ್ಟಿನಲ್ಲಿ ಬಿಜೆಪಿ ಇಂದು ಮಹತ್ವದ ಚಿಂತನಾ ಸಭೆ ನಡೆಸಿದೆ. ಪ್ರತಿಪಕ್ಷ ಕಾಂಗ್ರೆಸ್ ಆ.3ರಂದು ದಾವಣಗೆರೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯನವರ ಹುಟ್ಟುಹಬ್ಬದ ಪ್ರಯುಕ್ತ ಹಮ್ಮಿಕೊಂಡಿರುವ ಬೃಹತ್ ಸಮಾವೇಶಕ್ಕೆ ಪರ್ಯಾಯವಾಗಿ ಬಿಜೆಪಿ ಕೂಡ ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಿ ಸಮಾವೇಶ ನಡೆಸಬೇಕೆಂಬ ಅಭಿಪ್ರಾಯ ಸಭೆಯಲ್ಲಿ ಕೇಳಿಬಂದಿದೆ.
ದೇವನಹಳ್ಳಿ ಸಮೀಪ ಇರುವ ಜೆಡಬ್ಲ್ಯು ಮ್ಯಾರಿಯೆಟ್ ಪ್ರೆಸ್ಟೀಜ್ ಗಾಲ್ ಶೈರ್ ರೆಸಾರ್ಟ್‍ನಲ್ಲಿ ಬಿಜೆಪಿ ನಾಯಕರು ಮತ್ತು ಆರ್‍ಎಸ್‍ಎಸ್ ಪ್ರಮುಖರನ್ನೊಳಗೊಂಡ ಸಭೆಯಲ್ಲಿ , ಪಕ್ಷ ಸಂಘಟನೆ ಹಾಗೂ ಚುನಾವಣೆಯಲ್ಲಿ ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಬಗ್ಗೆ ಮಾತುಕತೆ ನಡೆಸಲಾಗಿದೆ.
ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ , ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್, ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್, ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಆರ್‍ಎಸ್‍ಎಸ್ ಸಹ ಕಾರ್ಯವಾಹಕ ಮುಕುಂದ್, ಕ್ಷೇತ್ರೀಯ ಸಂಘ ಚಾಲಕ ವಿ.ನಾಗರಾಜ್, ಕ್ಷೇತ್ರೀಯ ಪ್ರಚಾರಕ ಸುೀರ್, ಕ್ಷೇತ್ರೀಯ ಕಾರ್ಯವಾಹ ತಿಪ್ಪೇಸ್ವಾಮಿ ಭಾಗವಹಿಸಿದ್ದರು.
ಸರ್ಕಾರದ ಮೇಲೆ ಕೇಳಿಬಂದಿರುವ ಕೆಲವು ಗಂಭೀರ ಆರೋಪಗಳ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗಿದ್ದು, ಪಕ್ಷ ಸಂಘಟನೆ ಹಾಗೂ ಸರ್ಕಾರದ ವರ್ಚಸ್ಸು ಹೆಚ್ಚಿಸುವ ಯೋಜನೆಗಳನ್ನು ಅನುಷ್ಠಾನ ಮಾಡಬೇಕೆಂದು ಸಂಘ ಪರಿವಾರದ ಹಿರಿಯ ನಾಯಕರು ಸಲಹೆ ಮಾಡಿದ್ದಾರೆ.
ಪಕ್ಷ ಹಾಗೂ ಸರ್ಕಾರದ ನಡುವಿನ ಸಮನ್ವಯತೆ, ಸರ್ಕಾರದ ಯೋಜನೆ ಜನರಿಗೆ ತಲುಪಿಸುವಲ್ಲಿ ಕಾರ್ಯಕರ್ತರ ಪಾತ್ರ, ಇತ್ತೀಚಿನ ಚುನಾವಣಾ ಫಲಿತಾಂಶದ ಪರಿಣಾಮ, ಭವಿಷ್ಯದ ಚುನಾವಣೆಗಳಿಗೆ ಪಕ್ಷ ಸನ್ನದ್ದಗೊಳಿಸುವುದು ಸೇರಿದಂತೆ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಮಹತ್ವದ ಸಮಾಲೋಚನೆ ನಡೆಸಿದ್ದಾರೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…