ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬರ್ಜರಿ ಗೆಲವು ಸಾಧಿಸಿದ್ದು, ಡಬಲ್ ಇಂಜಿನ್ ಸರ್ಕಾರದಲ್ಲಿದ್ದ ಬಿಜೆಪಿ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋತಿದೆ. ಈ ವಿಚಾರದ ಕುರಿತಾಗಿ ಸಂಸದ ಪ್ರತಾಪ್ ಸಿಂಹ ಸೋಶಿಯಲ್ ಮೀಡಿಯಾ ಮೂಲಕವಾಗಿ ಬೇಸರ ವ್ಯಕ್ತಪಡಿಸಿದ್ದಾರೆ.
ಟ್ವೀಟ್ನಲ್ಲಿ ಏನಿದೆ?:
ನಮ್ಮ ಪರವಾಗಿ ಮತ ಕೇಳುವ, ಮನೆ ಮಠ ಬಿಟ್ಟು ಪಕ್ಷಕ್ಕಾಗಿ ದುಡಿಯುವ, ಗೆದ್ದಾಗ ಹೊತ್ತು ಮೆರೆಯುವ ಕಾರ್ಯಕರ್ತನಿಗೆ ಪಕ್ಷ ಸೋತಾಗ ನಮ್ಮ ಮೇಲಿನ ಸಿಟ್ಟನ್ನು ತೀಕ್ಷ್ಣವಾಗಿ ಹೊರಹಾಕುವ ಹಕ್ಕು ಇರುತ್ತದೆ. ಪಕ್ಷ ಸೋತು ಅನಾಥವಾದಾಗ ಅಪಾಯಕ್ಕೆ ಸಿಲುಕಿರುವುದು ಕಾರ್ಯಕರ್ತನೇ ಹೊರತು ಯಾವ ನಾಯಕನೂ ಅಲ್ಲ. ದಯವಿಟ್ಟು ನಮ್ಮನ್ನು ಕ್ಷಮಿಸಿ ಎಂದು ಟ್ವಿಟ್ಟರ್ನಲ್ಲಿ ಬರೆಯುವ ಮೂಲಕವಾಗಿ ಬೇಸರ ಹೊರಹಾಕಿದ್ದಾರೆ.
ಯಾರದ್ದೋ ವೈಯ್ಯಕ್ತಿಕ ಮಹತ್ವಾಕಾಂಕ್ಷೆಯಿಂದ ಸೃಷ್ಟಿಯಾಗುವ ಷಡ್ಯಂತ್ರಕ್ಕೆ ಬಲಿಯಾಗುವುದು, ಯಾರ‌್ಯಾರನ್ನೋ ತೆಗಳುವುದು ಬೇಡ ಕಾರ್ಯಕರ್ತರೇ ಎಂದು ಟ್ವೀಟ್ ಮಾಡಿ ಮನವಿ ಮಾಡಿದ್ದಾರೆ.
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…