Featured

ಪಕ್ಷ ಹೇಳಿದ್ರೆ ನಾನೂ ಸ್ಪರ್ಧೆಯಿಂದ ಹಿಂದೆ ಸರಿಯುತ್ತೇನೆ : ನಿಖಿಲ್ ಕುಮಾರಸ್ವಾಮಿ – Vishwanews24

ಪಕ್ಷ ಹೇಳಿದ್ರೆ ನಾನೂ ಸ್ಪರ್ಧೆಯಿಂದ ಹಿಂದೆ ಸರಿಯುತ್ತೇನೆ : ನಿಖಿಲ್ ಕುಮಾರಸ್ವಾಮಿ

ರಾಮನಗರ: ಅನಿತಾ ಕುಮಾರಸ್ವಾಮಿ ಮತ್ತೆ ಸ್ಪರ್ಧೆ ಮಾಡಲ್ಲ, ಪಕ್ಷ ಹೇಳಿದ್ರೆ ನಾನೂ ಸ್ಪರ್ಧೆಯಿಂದ ಹಿಂದೆ ಸರಿಯುತ್ತೇನೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ  ತಿಳಿಸಿದರು.

ಶಾಸಕಿ ಅನಿತಾ ಕುಮಾರಸ್ವಾಮಿ ಮತ್ತೆ ಚುನಾವಣೆಗೆ ಸ್ಪರ್ಧೆ ಮಾಡ್ತಾರೆ ಎಂಬ ಚರ್ಚೆ ವಿಚಾರದ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅನಿತಾ ಕುಮಾರಸ್ವಾಮಿಯವರು ಈಗಾಗಲೇ ಚುನಾವಣಾ ರಾಜಕೀಯದಿಂದ ಹಿಂದೆ ಸರಿದಿದ್ದಾರೆ. ಹಿಂದೆ ಮಧುಗಿರಿ ಹಾಗೂ ರಾಮನಗರದಲ್ಲಿ ಅನಿರೀಕ್ಷಿತವಾಗಿ ಸ್ಪರ್ಧೆ ಮಾಡಿದ್ದರು ಎಂದರು.

ಕಳೆದ ಬಾರಿ ರಾಮನಗರದಿಂದ ಸ್ಪರ್ಧೆಗೆ ನನಗೂ ಒತ್ತಡ ಇತ್ತು. ಆಗ ನಾನು ಸಿನಿಮಾದಲ್ಲಿ ಬ್ಯುಸಿ ಆಗಿದ್ದೆ. ಹಾಗಾಗಿ ಅನಿವಾರ್ಯ ಕಾರಣಗಳಿಂದ ಸ್ಪರ್ಧೆ ಮಾಡಿ ಗೆದ್ದರು. ಬಳಿಕ ಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿ ಕೆಲಸವನ್ನೂ ಮಾಡಿದ್ದಾರೆ. ಮತ್ತೆ ಅವರು ಯಾವುದೇ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಅಲ್ಲ, ಅವರಿಗೆ ಆಸಕ್ತಿಯೂ ಇಲ್ಲ ಎಂದು ಹೇಳಿದರು.

ಎಲ್ಲಾ ಪಕ್ಷದಲ್ಲೂ ಗೊಂದಲಗಳು ಇದ್ದೇ ಇರುತ್ತೆ. ಹಾಸನ ಟಿಕೇಟ್ ವಿಚಾರವಾಗಿ ವರಿಷ್ಠರು ಅಂತಿಮ ನಿರ್ಧಾರ ಮಾಡ್ತಾರೆ. ದೇವೇಗೌಡರು ಜೆಡಿಎಸ್ ಪಕ್ಷವನ್ನು ಕಟ್ಟಿ ಬೆಳೆಸಿದ್ದಾರೆ. ಹೋರಾಟದ ಹಿನ್ನೆಲೆಯಲ್ಲಿ ಬಂದ ಪಕ್ಷ ಜೆಡಿಎಸ್ ಪಕ್ಷವನ್ನು ಉಳಿಸಿಕೊಳ್ಳಲು ನಾವೆಲ್ಲರೂ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ. ಒಂದು ವೇಳೆ ಪಕ್ಷ ಹೇಳಿದ್ರೆ ನಾನೇ ಸ್ಪರ್ಧೆಯಿಂದ ಹಿಂದೆ ಸರಿಯುತ್ತೇನೆ. ಕಾರ್ಯಕರ್ತರು, ಮುಖಂಡರು ತೀರ್ಮಾನ ಮಾಡಿದ್ರೆ ನಾನು ಸ್ಪರ್ಧೆಯಿಂದ ಹಿಂದೆ ಸರಿಯುತ್ತೇನೆ ಎಂದು ಸ್ಪಷ್ಟಪಡಿಸಿದರು.

Vishwa News 24

Recent Posts

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

13 hours ago

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

21 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

21 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

21 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

21 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

21 hours ago