Categories: Featuredದೇಶ

ಪಟಾಕಿಗಳು ತುಂಬಿದ್ದ ಅನಾನಸನ್ನು ಗರ್ಭಿಣಿ ಆನೆಯೊಂದಕ್ಕೆ ನೀಡಿದ್ದು, ಅದು ಸ್ಫೋಟಗೊಂಡ ಪರಿಣಾಮ ಗರ್ಭಿಣಿ ಆನೆ ಮೃತಪಟ್ಟ ಘಟನೆ ಕೇರಳದಲ್ಲಿ ನಡೆದಿದೆ.vishwanews24

ಕೊಚ್ಚಿ ( ವಾಭಾ): ಸ್ಥಳೀಯ ಜನರು ಪಟಾಕಿಗಳು ತುಂಬಿದ್ದ ಅನಾನಸನ್ನು ಗರ್ಭಿಣಿ ಆನೆಯೊಂದಕ್ಕೆ ನೀಡಿದ್ದು, ಅದು ಸ್ಫೋಟಗೊಂಡ ಪರಿಣಾಮ ಗರ್ಭಿಣಿ ಆನೆ ಮೃತಪಟ್ಟ ಘಟನೆ ಕೇರಳದಲ್ಲಿ ನಡೆದಿದೆ. ಆನೆ ಅನಾನಸು ತಿನ್ನುತ್ತಿದ್ದಾಗ ಪಟಾಕಿ ಸ್ಫೋಟಗೊಂಡಿದ್ದು, ಗಂಭೀರ ಗಾಯಗಳಾಗಿತ್ತು ಎಂದು ತಿಳಿದುಬಂದಿದೆ.

ಮಲಪ್ಪುರಂ ಜಿಲ್ಲೆಯ ಅರಣ್ಯಾಧಿಕಾರಿಯೊಬ್ಬರು ಈ ಬಗ್ಗೆ ಫೇಸ್ ಬುಕ್ ಪೋಸ್ಟ್ ಹಾಕಿದ ನಂತರ ಘಟನೆ ಬೆಳಕಿಗೆ ಬಂದಿದೆ.

ಆಹಾರ ಅರಸಿ ಕಾಡಿನಿಂದ ಬಂದಿದ್ದ ಗರ್ಭಿಣಿ ಆನೆ ಸ್ಥಳೀಯ ಗ್ರಾಮಕ್ಕೆ ಬಂದಿತ್ತು. ಅದು ಗ್ರಾಮದ ಬೀದಿಯಲ್ಲಿ ನಡೆಯುತ್ತಿರುವಾಗ ಕೆಲ ಕಿಡಿಗೇಡಿಗಳು ಪಟಾಕಿ ತುಂಬಿದ್ದ ಅನಾನಸು ನೀಡಿದ್ದರು.

‘ಆಕೆ ಎಲ್ಲರನ್ನೂ ನಂಬಿದ್ದಳು. ಆಕೆ ಅನಾನಸು ತಿಂದಾಗ ಅದು ಸ್ಫೋಟಗೊಂಡಿತ್ತು. ಆಕೆ ತನ್ನ ಬಗ್ಗೆ ಯೋಚಿಸಿ ಆಘಾತಗೊಂಡಿರಲಿಕ್ಕಿಲ್ಲ. ಆದರೆ ಜನ್ಮ ನೀಡಬೇಕಿದ್ದ 18 -20 ತಿಂಗಳ ಮಗುವನ್ನು ನೆನೆದು ಆಘಾತಗೊಂಡಿರಬಹುದು’ ಎಂದು ಅರಣ್ಯಾಧಿಕಾರಿ ಮೋಹನ್ ಕೃಷ್ಣನ್ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.

ಸ್ಫೋಟದ ತೀವ್ರತೆಗೆ ಆನೆಯ ಬಾಯಿ ಮತ್ತು ನಾಲಗೆಗೆ ಗಂಭೀರ ಗಾಯಗಳಾಗಿತ್ತು. ಹಸಿವು ಮತ್ತು ನೋವಿನಿಂದ ಆನೆ ಗ್ರಾಮವಿಡೀ ನಡೆದಿತ್ತು. ಗಂಭೀರ ಗಾಯಗಳ ಕಾರಣ ಏನನ್ನೂ ತಿನ್ನಲು ಕೂಡ ಸಾಧ್ಯವಾಗುತ್ತಿರಲಿಲ್ಲ.

‘ನೋವಿನಿಂದ ಚಡಪಡಿಸಿ ಆಕೆ ಗ್ರಾಮವಿಡೀ ಓಡಿದರೂ ಯಾರಿಗೂ ಹಾನಿ ಮಾಡಿಲ್ಲ. ಯಾವುದೇ ಮನೆಗಳ ಮೇಲೆ ದಾಳಿ ಮಾಡಿಲ್ಲ’ ಎಂದವರು ಹೇಳಿದ್ದಾರೆ.

ನಂತರ ವೆಲ್ಲಿಯಾರ್ ನದಿಗಿಳಿದ ಆನೆ ನೀರಿನಲ್ಲಿ ನಿಂತಿದ್ದು, ಅದರ ಫೋಟೊಗಳು ವೈರಲ್ ಆಗಿವೆ. ನೋವಿನಿಂದ ಸ್ವಲ್ಪವಾದರೂ ಮುಕ್ತಿ ಪಡೆಯಲು ಆನೆ ಈ ರೀತಿ ಮಾಡಿರಬಹುದು ಎನ್ನಲಾಗಿದೆ. ಗಾಯಗಳ ಮೇಲೆ ಕ್ರಿಮಿ, ಕೀಟಗಳ ದಾಳಿಯಿಂದ ಪಾರಾಗಲು ಈ ರೀತಿ ಮಾಡಿದೆ ಎಂದು ಅರಣ್ಯಾಧಿಕಾರಿ ಹೇಳುತ್ತಾರೆ.

ನದಿ ನೀರಿನಿಂದ ಆನೆಯನ್ನು ಹೊರತರಲು ಇನ್ನೆರಡು ಆನೆಗಳನ್ನು ಸ್ಥಳಕ್ಕೆ ಕರೆತರಲಾಯಿತು. ಆದರೆ ಏನನ್ನೂ ಮಾಡಲು ಗಾಯಾಳು ಆನೆ ಬಿಡಲಿಲ್ಲ. ಹಲವು ಗಂಟೆಗಳ ಕಾರ್ಯಾಚರಣೆ ನಡೆಸಿದರೂ ಮೇ 27ರಂದು ಸಂಜೆ 4 ಗಂಟೆಗೆ ಗರ್ಭಿಣಿ ಆನೆ ನದಿ ನೀರಲ್ಲಿ ನಿಂತಲ್ಲೇ ಪ್ರಾಣ ಕಳೆದುಕೊಂಡಿತು.

ನಂತರ ಆನೆಯ ಮೃತದೇಹವನ್ನು ಟ್ರಕ್ ನಲ್ಲಿ ಸಾಗಿಸಿ ಅಂತ್ಯಕ್ರಿಯೆ ನಡೆಸಲಾಗಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago