ಪಠ್ಯದಲ್ಲಿ ನಾರಾಯಣಗುರು ಪಠ್ಯ ಕೈಬಿಟ್ಟಿದ್ದಾರೆ ಎಂಬುದು ಸುಳ್ಳು : ಶ್ರೀನಿವಾಸ್ ಪೂಜಾರಿ – Vishwanews24
ನಾರಾಯಣಗುರು ಪಠ್ಯ ಕೈಬಿಡುವ ಪ್ರಶ್ನೆಯೇ ಇಲ್ಲ..
ಪ್ರತಿಪಕ್ಷಗಳು ವಿನಾಕಾರಣ ಆರೋಪ ಮಾಡಬಾರದು
ಯಾವುದೇ ಪಠ್ಯವನ್ನು ಕೈಬಿಟ್ಟಿಲ್ಲ ಶ್ರೀನಿವಾಸ್ ಪೂಜಾರಿ ಸ್ಪಷ್ಟನೆ
ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢಶಾಲೆ ಪಠ್ಯದಲ್ಲಿ ನಾರಾಯಣಗುರು ಪಠ್ಯ ಕೈಬಿಟ್ಟಿದ್ದಾರೆ ಎಂಬುದು ಸುಳ್ಳು. ಸ್ಪಷ್ಟವಾಗಿ ಹೇಳ್ತೇನೆ ನಾರಾಯಣಗುರು ಪಠ್ಯ ಕೈಬಿಡುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಾಥಮಿಕ ಮತ್ತು ಪ್ರೌಢಶಾಲೆ ಪಠ್ಯದಲ್ಲಿ ನಾರಾಯಣಗುರು ಪಠ್ಯ ಕೈಬಿಟ್ಟಿದ್ದಾರೆ ಎಂಬ ಆರೋಪದ ಬಗ್ಗೆ ಸಿಎಂ ಹಾಗೂ ಶಿಕ್ಷಣ ಸಚಿವರ ಭೇಟಿ ಮಾಡಿ ಚರ್ಚೆ ಮಾಡಿದ್ದೇನೆ. ಪ್ರತಿಪಕ್ಷಗಳು ವಿನಾಕಾರಣ ಆರೋಪ ಮಾಡಬಾರದು. ಯಾವುದೇ ಪಠ್ಯವನ್ನು ಕೈಬಿಟ್ಟಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
