Featured

ಪಠ್ಯದಿಂದ ಟಿಪ್ಪು ಪಾಠ ತೆಗೆಯುವುದು ಇತಿಹಾಸಕ್ಕೆ ಮೋಸ ಮಾಡಿದಂತೆ : ಇತಿಹಾಸ ತಜ್ಞೆ ಡಾ.ವಸುಂಧರಾ ಫಿಲಿಯೋಜಾ -Vishwanews24

ಮೈಸೂರು: ‘ಪಠ್ಯದಿಂದ ಟಿಪ್ಪು ಪಾಠ ತೆಗೆಯುವುದು ಇತಿಹಾಸಕ್ಕೆ ಮೋಸ ಮಾಡಿದಂತೆ’ ಎಂದು ಇತಿಹಾಸ ತಜ್ಞೆ ಡಾ.ವಸುಂಧರಾ ಫಿಲಿಯೋಜಾ ತಿಳಿಸಿದರು.

ಕರ್ನಾಟಕ ಇತಿಹಾಸ ಅಕಾಡೆಮಿಯು ಮೈಸೂರಿನ ಸ್ವಗೃಹದಲ್ಲಿ ಸೋಮವಾರ ನೀಡಿದ ‘ಇತಿಹಾಸ ಸಂಸ್ಕೃತಿ ಶ್ರೀ’ ಪ್ರಶಸ್ತಿ ಹಾಗೂ ₹ 1 ಲಕ್ಷ ನಗದು ಸ್ವೀಕರಿಸಿ ಮಾತನಾಡಿದರು.

‘ಹಂಪಿಯನ್ನು 1790ರ ಆಸುಪಾಸಿನಲ್ಲಿ ಬ್ರಿಟಿಷರು ಯಾವ ರಾಜ್ಯಕ್ಕೆ ಸೇರ್ಪಡೆಗೊಳಿಸಬೇಕು ಎಂಬ ವಿಷಯ ಪ್ರಸ್ತಾಪಿಸಿದಾಗ, ಮರಾಠಿಗರು ಮಹಾರಾಷ್ಟ್ರಕ್ಕೆ ಸೇರ್ಪಡೆಗೊಳಿಸುವಂತೆ, ಹೈದರಾಬಾದಿನ ನಿಜಾಮರು ತಮ್ಮ ರಾಜ್ಯಕ್ಕೆ ಸೇರ್ಪಡೆಗೊಳಿಸಿ ಎಂದು ಪ್ರಬಲ ಹಕ್ಕೊತ್ತಾಯ ಮಂಡಿಸಿದ್ದರು. ಆಗ ಶ್ರೀರಂಗಪಟ್ಟಣದ ಅರಸನಾಗಿದ್ದ ಟಿಪ್ಪು ಸುಲ್ತಾನ್, ಹಂಪಿ ಕರ್ಣಾಟಕ ರಾಜ್ಯಕ್ಕೆ ಸೇರಬೇಕು ಎಂದು ಪ್ರಬಲ ಹಕ್ಕೊತ್ತಾಯದ ಜತೆಗೆ ಹಟ ಹಿಡಿದ ಪರಿಣಾಮ ಶತಮಾನಗಳಿಂದಲೂ ಹಂಪಿ ಕರ್ನಾಟಕದಲ್ಲೇ ಉಳಿದುಕೊಳ್ಳಲು ಸಾಧ್ಯವಾಯಿತು. ಇದನ್ನು ಬ್ರಿಟಿಷ್ ಲೇಖಕರು ತಮ್ಮ ಕೃತಿಗಳಲ್ಲಿ ದಾಖಲಿಸಿದ್ದಾರೆ’ ಎಂದು ತಿಳಿಸಿದರು.

‘ಟಿಪ್ಪು ಅರಸನಾಗುವ ಮುನ್ನ ಶ್ರೀರಂಗಪಟ್ಟಣದಲ್ಲಿ ಬ್ರಿಟಿಷರು ಮೆರೆದ ಅಟ್ಟಹಾಸ, ದೌರ್ಜನ್ಯಕ್ಕೆ ಲೆಕ್ಕವಿಲ್ಲ. ಇದನ್ನು ಕೊನೆಗಾಣಿಸಿದವ ಟಿಪ್ಪು. ಆದರೆ, ಎಲ್ಲಿಯೂ ಬ್ರಿಟಿಷರ ಕ್ರೂರತೆ ದಾಖಲಾಗಿಲ್ಲ. ಟಿಪ್ಪು ಅನೇಕ ಒಳ್ಳೆಯ ಕೆಲಸ ಮಾಡಿದ್ದಾನೆ, ಕೆಟ್ಟದ್ದನ್ನೂ ಮಾಡಿದ್ದಾನೆ. ಈ ಎರಡನ್ನೂ ದಾಖಲಿಸುವುದು, ನೈಜ ಇತಿಹಾಸವನ್ನು ಮುಂದಿನ ಪೀಳಿಗೆಗೆ ನೀಡುವುದು ಇತಿಹಾಸಕಾರರ ಆದ್ಯ ಕರ್ತವ್ಯವಾಗಬೇಕಿದೆ’ ಎಂದು ನುಡಿದರು.

 

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

8 hours ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

13 hours ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

13 hours ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

13 hours ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

2 days ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

2 days ago