ಬೆಂಗಳೂರು: ಬ್ರಹ್ಮಶ್ರೀ ನಾರಾಯಣ ಗುರುಗಳ ಸಂದೇಶವನ್ನು ಒಳಗೊಂಡ ಪಾಠವನ್ನು ಕೈ ಬಿಡುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಶಿಕ್ಷಣ ಇಲಾಖೆಯ ಪಠ್ಯಪುಸ್ತಕದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಸಂದೇಶವನ್ನು ಒಳಗೊಂಡ ಪಾಠವನ್ನು ಕೈಬಿಟ್ಟ ಕುರಿತು ಊಹಾಪೋಹಗಳೆದ್ದಿದ್ದು, ಈ ಬಗ್ಗೆ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಬೆಂಗಳೂರಿನಲ್ಲಿ ಸ್ಪಷ್ಟನೆ ನೀಡಿದ್ದು, ಯಾವುದೇ ಕಾರಣಕ್ಕೂ ಶಿಕ್ಷಣ ಇಲಾಖೆಯ ಪಠ್ಯಪುಸ್ತಕದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಸಂದೇಶವನ್ನು ಒಳಗೊಂಡ ಪಾಠವನ್ನು ಕೈ ಬಿಡುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿಯಾಗಿ ಬಂದ ನಂತರ ಸ್ಪಷ್ಟನೆ ನೀಡಿದ ಸಚಿವ ಕೋಟ, ಮುಖ್ಯಮಂತ್ರಿಗಳನ್ನು ಹಾಗೂ ಶಿಕ್ಷಣ ಸಚಿವರಾದ ಶ್ರೀ ನಾಗೇಶ್ ಅವರನ್ನು ಈ ಕುರಿತು ಬೇಟಿಯಾಗಿ ನಾನು ಮಾತನಾಡಿದ್ದು, ಪಠ್ಯಪುಸ್ತಕದಲ್ಲಿ ನಾರಾಯಣಗುರುಗಳ ಸಂದೇಶವನ್ನು ಒಳಗೊಂಡ ಪಾಠವನ್ನು ಕೈಬಿಡುವ ಪ್ರಶ್ನೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ರಾಜ್ಯದಾದ್ಯಂತ ಇರುವ ಈಡಿಗ, ಬಿಲ್ಲವ ಸಮುದಾಯ ಸೇರಿದಂತೆ ಸಮಾಜ ಸುಧಾರಕ ಬ್ರಹ್ಮಶ್ರೀ ನಾರಾಯಣ ಗುರುಗಳ ಅನುಯಾಯಿಗಳು ಅಪಪ್ರಚಾರಕ್ಕೆ ಕಿವಿಗೊಡಬಾರದು ಎಂದು ವಿನಂತಿಸಿದ ಸಚಿವ ಕೋಟ, ಪ್ರಕರಣದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ ಸಮುದ್ರಪಾಲಾದ ಘಟನೆ ಉತ್ತರ…
ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…
ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…
ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…
ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…