Featured

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ

ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ) ಸ್ಪಷ್ಟನೆ ನೀಡಿದೆ. ಪುಸ್ತಕದ ಹೆಸರಿಗೂ ಧರ್ಮಕ್ಕೂ ಯಾವುದೇ ಸಂಬಂಧ ಇಲ್ಲ. ‘ಕೃಷ್ಣ’ ಎಂಬುದು ಕೃಷ್ಣಾ ನದಿಯ ಹೆಸರಾಗಿದೆ ಎಂದು ತಳಿಸಿದೆ.

ಇತ್ತೀಚೆಗೆ ಬಿಡುಗಡೆಯಾದ 6ನೇ ತರಗತಿಯ ಕನ್ನಡ (ಆರ್-3) ಪಠ್ಯಪುಸ್ತಕಕ್ಕೆ(Text Book) ‘ಕೃಷ್ಣ’ (Krishna)ಎಂದು ಹೆಸರು ಇಟ್ಟಿರುವುದಕ್ಕೆ ವಿರೋಧ ವ್ಯಕ್ತವಾಗಿತ್ತು. ಜೊತೆಗೆ, ಪಠ್ಯಪುಸ್ತಕದಲ್ಲಿ ಸಸ್ಯಾಹಾರವನ್ನು ಮಾತ್ರ ಪ್ರೋತ್ಸಾಹಿಸಲಾಗಿದೆ ಮತ್ತು ಮಾಂಸಾಹಾರವನ್ನು ಕಡೆಗಣಿಸಲಾಗಿದೆ ಎಂಬ ಆರೋಪವೂ ಕೇಳಿಬಂದಿತ್ತು. ಈ ಆರೋಪಗಳಿಗೆ ಪ್ರತಿಕ್ರಿಯಿಸಿದ ಎನ್‌ಸಿಇಆರ್‌ಟಿ, ಎಲ್ಲ ಆರ್-3 ಭಾಷಾ ಪಠ್ಯಪುಸ್ತಕಗಳಿಗೆ ಭಾರತದ ನದಿಗಳ ಹೆಸರನ್ನೇ ಇಡಲಾಗಿದೆ ಎಂದು ತಿಳಿಸಿದೆ.

ಹಿಂದಿ ಪಠ್ಯಪುಸ್ತಕಕ್ಕೆ ‘ಗಂಗಾ’, ಇಂಗ್ಲಿಷ್ ಪಠ್ಯಪುಸ್ತಕಕ್ಕೆ ‘ಕಾವೇರಿ’ ಹಾಗೂ ಉರ್ದು ಪಠ್ಯಪುಸ್ತಕಕ್ಕೆ ‘ಜಮುನಾ’ ಎಂದು ಹೆಸರು ಇಡಲಾಗಿದೆ. ಅದೇ ಮಾದರಿಯಲ್ಲಿ ಕನ್ನಡ ಪಠ್ಯಪುಸ್ತಕಕ್ಕೆ ‘ಕೃಷ್ಣ’ ಎಂದು ಹೆಸರಿಡಲಾಗಿದೆ ಎಂದು ಸ್ಪಷ್ಟಪಡಿಸಿದೆ.

ಕೃಷ್ಣಾ ನದಿ ಕರ್ನಾಟಕದ ಸಂಸ್ಕೃತಿ, ಭೌಗೋಳಿಕತೆ ಹಾಗೂ ಜನಜೀವನದೊಂದಿಗೆ ನಿಕಟ ಸಂಬಂಧ ಹೊಂದಿರುವ ಕಾರಣ ಈ ಹೆಸರನ್ನು ಆಯ್ಕೆ ಮಾಡಲಾಗಿದೆ ಎಂದು ಎನ್‌ಸಿಇಆರ್‌ಟಿ ತಿಳಿಸಿದೆ.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

4 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

4 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

5 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

5 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

5 hours ago

ಉಡುಪಿ: ಎಸ್.ಟಿ ಮೋರ್ಚಾದ ನೂತನ ಪದಾಧಿಕಾರಿಗಳಿಗೆ ನಿಯುಕ್ತಿ ಪತ್ರ ವಿತರಣೆ – vishwanews24

ಉಡುಪಿ: ಎಸ್.ಟಿ ಮೋರ್ಚಾದ ನೂತನ ಪದಾಧಿಕಾರಿಗಳಿಗೆ ನಿಯುಕ್ತಿ ಪತ್ರ ವಿತರಣೆ ಉಡುಪಿ: ಭಾರತೀಯ ಜನತಾ ಪಾರ್ಟಿಯ ಎಸ್.ಟಿ ಮೋರ್ಚಾ ಜಿಲ್ಲಾ…

5 hours ago