ಮಂಗಳೂರು: ರಾಜ್ಯದಲ್ಲಿ ತೀವ್ರ ವಿವಾದ ಸೃಷ್ಟಿಸಿದ್ದ ಶಾಲಾ ಪಠ್ಯಪುಸ್ತಕವನ್ನು ಕರ್ನಾಟಕ ಪಠ್ಯಪುಸ್ತಕ ಸಂಘವು ಒಟ್ಟು 8 ಅಂಶಗಳಿಗೆ ತಿದ್ದೋಲೆ ಮಾಡಿದೆ. ಜೊತೆಗೆ ಕರಾವಳಿಯಲ್ಲಿ ಹೆಚ್ಚು ಸುದ್ದಿ ಮಾಡಿದ್ದ ಬ್ರಹ್ಮರ್ಷಿ ನಾರಾಯಣ ಗುರು ಪಠ್ಯವನ್ನು ಕನ್ನಡ ಭಾಷೆಯಿಂದ ಸಮಾಜ ವಿಜ್ಞಾನಕ್ಕೆ ಸೇರಿಸುವಂತೆ ಪ್ರತ್ಯೇಕ ಸುತ್ತೋಲೆ ಹೊರಡಿಸಿದ್ದಾರೆ.
“ಪ್ರಸ್ತುತ 10 ನೇ ತರಗತಿಯ ಪ್ರಥಮ ಭಾಷೆ ಕನ್ನಡ ಪಠ್ಯದಲ್ಲಿದ್ದ ಬ್ರಹ್ಮರ್ಷಿ ನಾರಾಯಣ ಗುರು ಪಠ್ಯವನ್ನು ಯಥಾವತ್ತಾಗಿ 10 ನೇ ತರಗತಿಯ ಸಮಾಜ ವಿಜ್ಞಾನದ ಭಾಗ-1 ರ ಅಧ್ಯಾಯ 5ರ “ಸಾಮಾಜಿಕ ಮತ್ತು ಧಾರ್ಮಿಕ ಸುಧಾರಣಾ ಚಳುವಳಿ” ಯಲ್ಲಿ ಅಳವಡಿಸಿ 2022-23 ರ ಶೈಕ್ಷಣಿಕ ಸಾಲಿನ ಎಲ್ಲಾ ಮಾಧ್ಯಮಗಳಿಗೂ ಸೇರಿದಂತೆ ಬೋಧನೆ-ಕಲಿಕೆ-ಮೌಲ್ಯಮೌಪನಕ್ಕೆ ಪರಿಗಣಿಸುವುದು” ಎಂದು ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಪ್ರೌಢಶಾಲೆಗಳಿಗೆ ಜು. 13 ರಂದು ಪ್ರತ್ಯೇಕ ಸುತ್ತೋಲೆ ಹೋಗಿದೆ ಎಂದು ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯ ಹಿರಿಯ ಸಹಾಯಕ ನಿರ್ದೇಶಕ, ಡಾ.ಕೃಷ್ಣ ಮೂರ್ತಿ ಸ್ಪಷ್ಟನೆ ನೀಡಿದ್ದಾರೆ ಎಂದು ತಮಗೆ ಮಾಹಿತಿ ನೀಡಿರುವುದಾಗಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಡಳಿತ ಸಮಿತಿ ಖಜಾಂಚಿ, ಆರ್ ಪದ್ಮರಾಜ್ ತಿಳಿಸಿದ್ದಾರೆ.
ಕನ್ನಡ ಪಠ್ಯದಲ್ಲಿ ಬ್ರಹ್ಮರ್ಷಿ ನಾರಾಯಣ ಗುರು ಪಾಠವು ಭೌತಿಕವಾಗಿದ್ದರೂ ಅದನ್ನು ಸಮಾಜ ವಿಜ್ಞಾನದ ಸಾಮಾಜಿಕ ಮತ್ತು ಧಾರ್ಮಿಕ ಸುಧಾರಣಾ ಚಳುವಳಿ” ಯಲ್ಲಿ ಬೋಧಿಸಿ ಮೌಲ್ಯಮೌಪನಕ್ಕೆ ಪರಿಗಣಿಸಲು ತಿಳಿಸಲಾಗಿದೆ ಎಂದರು.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…