ಮಡಿಕೇರಿ : ಟಿಪ್ಪು ಸುಲ್ತಾನ್ ಸ್ವಾತಂತ್ರ್ಯ ಹೋರಾಟಗಾರನಲ್ಲ, ಆದರೆ, ಪಠ್ಯ ಪುಸ್ತಕಗಳಲ್ಲಿ ಟಿಪ್ಪು ಸ್ವಾತಂತ್ರ್ಯ ಹೋರಾಟಗಾರ ಎಂದು ವೈಭವೀಕರಿಸಲಾಗಿದೆ ಹೀಗಾಗಿ ಪಠ್ಯ ಪುಸ್ತಕದಿಂದ ಟಿಪ್ಪು ಪಾಠವನ್ನು ಕೈಬಿಡುವಂತೆ ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಗೆ ಪತ್ರ ಬರೆದಿರುವ ಅಪ್ಪಚ್ಚು ರಂಜನ್, ಟಿಪ್ಪು ಸುಲ್ತಾನ್ ಫ್ರೆಂಚ್ ರೊಂದಿಗೆ ಕೈ ಜೋಡಿಸಿದ್ದ. ತನ್ನ ಸಾಮ್ರಾಜ್ಯ ವಿಸ್ತರಿಸಿಕೊಳ್ಳಲು ಫ್ರೆಂಚ್ಸಹಾಯ ಪಡೆಯುತ್ತಿದ್ದನು. ಅಲ್ಲದೇ ಆತ ಹಿಂದೂ ಮತ್ತು ಕ್ರಿಶ್ಚಿಯನ್ ವಿರೋಧಿಯಾಗಿದ್ದ ಮಂಗಳೂರಿನಲ್ಲಿ 50 ಸಾವಿರಕ್ಕೂ ಅಧಿಕ ಕ್ರೈಸ್ತರನ್ನು ಮುಸ್ಲಿಂ ಧರ್ಮಕ್ಕೆ ಮತಾಂತರ ಮಾಡಿದ್ದನು ಎಂದು ಆರೋಪಿಸಿದ್ದಾರೆ.
ಹೀಗಾಗಿ ಪಠ್ಯಪುಸ್ತಕದಿಂದ ಟಿಪ್ಪು ಕುರಿತ ಪಠ್ಯವನ್ನು ಕೈಬಿಡಬೇಕು. ಮುಂದಿನ ದಿನಗಳಲ್ಲಿ ಇತಿಹಾಸ ತಜ್ಞರ ಅಭಿಪ್ರಾಯ ಸಂಗ್ರಹಿಸಿ ಸ್ವಾತಂತ್ರ್ಯ ಹೋರಾಟಗಾರರ ಪಠ್ಯ ಸೇರಿಸಬೇಕು ಎಂದು ಪತ್ರದ ಮೂಲಕ ಅಪ್ಪಚ್ಚು ರಂಜನ್ ಆಗ್ರಹಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…