ನ್ಯಾಯಬೆಲೆ ಅಂಗಡಿಗಳಲ್ಲಿ ಇದುವರೆಗೂ ವಿತರಿಸಲಾಗುತ್ತಿದ್ದ ಗೋಧಿ ಇನ್ನು ಪಡಿತರ ಚೀಟಿದಾರರಿಗೆ ಸದ್ಯಕ್ಕೆ ಸಿಗುವುದಿಲ್ಲ. ಮಾರ್ಚ್ ತಿಂಗಳೇ ಗೋಧಿ ವಿತರಣೆ ಕೊನೆಯಾಗಲಿದೆ. ಇದರ ಬದಲು ಏಪ್ರಿಲ್‌ನಿಂದ ಹೆಚ್ಚುವರಿಯಾಗಿ ಪ್ರತಿ ಸದಸ್ಯನಿಗೆ 1 ಕೆ.ಜಿ.ಅಕ್ಕಿ ವಿತಣೆಯಾಗಲಿದೆ.
ಇದುವರೆಗೂ ಕೇಂದ್ರ ಮತ್ತು ರಾಜ್ಯ ಸರಕಾರದ ಕೋಟಾದಲ್ಲಿಪ್ರತಿ ಸದಸ್ಯನಿಗೆ 10 ಕೆ.ಜಿ. ಹಾಗೂ ಒಂದು ಪಡಿತರ ಕಾರ್ಡ್‌ಗೆ 2 ಕೆ.ಜಿ. ಗೋಧಿ ವಿತರಣೆ ಮಾಡಲಾಗುತ್ತಿತ್ತು. ಆದರೆ ಏಪ್ರಿಲ್ ತಿಂಗಳಿಂದ ಕೊರೊನಾ ಕಾರಣ ಕೇಂದ್ರ ಸರಕಾರ ವಿತರಣೆ ಮಾಡುತ್ತಿದ್ದ ತಲಾ 5 ಕೆ.ಜಿ. ಅಕ್ಕಿ ವಿತರಣೆಯ ಬಾಬತ್ತು ಮುಗಿಯಲಿದೆ.
ಪ್ರತಿ ಸದಸ್ಯನಿಗೆ 1 ಕೆ.ಜಿ. ಅಕ್ಕಿ!
ಪಡಿತರದಾರರಿಗೆ ಏಪ್ರಿಲ್‌ನಿಂದ ಪ್ರತಿ ಸದಸ್ಯನಿಗೆ ತಲಾ 5 ಕೆ.ಜಿ. ಅಕ್ಕಿ ಹಾಗೂ ಗೋಧಿ ಬದಲು ಪ್ರತಿ ಸದಸ್ಯನಿಗೆ 1 ಕೆ.ಜಿ. ಸೇರಿ 6 ಕೆ.ಜಿ. ಲಭ್ಯವಾಗಲಿದೆ. ಆದರೆ ಇನ್ಮುಂದೆ ಗೋಧಿ ವಿತರಣೆ ಇರುವುದಿಲ್ಲಎಂದು ಹೇಳಲಾಗಿದೆ. ಮುಂದಿನ ದಿನಗಳಲ್ಲಿ ಈಗ ಬೆಂಬಲ ಬೆಲೆ ದರದಲ್ಲಿ ಖರೀದಿಸಿರುವ ರಾಗಿಯನ್ನು ಪ್ರತಿ ಸದಸ್ಯನಿಗೆ 1 ಕೆ.ಜಿ.ಯಂತೆ ವಿತರಿಸುವ ಸಾಧ್ಯತೆಯೂ ಇದೆ. ಹೀಗಾಗಿ ನ್ಯಾಯಬೆಲೆ ಅಂಗಡಿಗಳಲ್ಲಿ ಇನ್ನು ಅಕ್ಕಿಯಷ್ಟೇ ಪಡಿತರದಾರರಿಗೆ ಸಿಗಲಿದೆ.
ಸರಕಾರದ ನಿರ್ಧಾರ!
ರಾಜ್ಯ ಸರಕಾರದಿಂದ ಆದೇಶ ಬಂದಿದ್ದರೂ ಇನ್ನೂ ನ್ಯಾಯಬೆಲೆ ಅಂಗಡಿಗಳಿಗೆ ಈ ವಿಷಯ ತಲುಪಿಲ್ಲ. ಆದರೆ ಮೌಖಿಕವಾಗಿ ಈಗಾಗಲೇ ನ್ಯಾಯಬೆಲೆ ಅಂಗಡಿಗಳಲ್ಲಿ ಮುಂದಿನ ತಿಂಗಳಿಂದ ಗೋಧಿ ಸಿಗಲ್ಲ. ಗೋಧಿ ಬದಲು ಪ್ರತಿ ಸದಸ್ಯನಿಗೆ 1 ಕೆ.ಜಿ. ಹೆಚ್ಚುವರಿಯಾಗಿ ವಿತರಿಸಲಿದ್ದಾರೆ ಎಂದು ತಿಳಿಸಲಾಗಿದೆ. ಆದರೆ ಸರಕಾರದ ನಿರ್ಧಾರಕ್ಕೆ ಆಗಲೇ ಪಡಿತರದಾರರಿಗೆ ಆಕ್ಷೇಪ ವ್ಯಕ್ತವಾಗಿದೆ.
\
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…