Featured

ಪಡಿತರ ಅಕ್ಕಿ ಮಾರಾಟ ಮಾಡಿ ಸಿಕ್ಕಿಬಿದ್ದರೆ ಫಲಾನುಭವಿಗಳ ಕಾರ್ಡ್ 6 ತಿಂಗಳು ರದ್ದು -Vishwanews24

ಪಡಿತರ ಅಕ್ಕಿ ಮಾರಾಟ ಮಾಡಿ ಸಿಕ್ಕಿಬಿದ್ದರೆ ಫಲಾನುಭವಿಗಳ ಕಾರ್ಡ್ 6 ತಿಂಗಳು ರದ್ದು -Vishwanews24

ಬೆಂಗಳೂರು: ಪಡಿತರ ಕಾರ್ಡ್ ದಾರರೇ ಎಚ್ಚರ.ಅನ್ನಭಾಗ್ಯ ಯೋಜನೆಯಡಿ ಸಿಗುವ ಪಡಿತರವನ್ನು ಹಣದಾಸೆಗೆ ಮುಕ್ತ ಮಾರುಕಟ್ಟೆಯಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಸಿಕ್ಕಿಬಿದ್ದರೆ ಫಲಾನುಭವಿಗಳು ಹೊಂದಿರುವ ಕಾರ್ಡ್‌ಗಳು ರದ್ದು ಮಾಡಲಾಗುತ್ತದೆ.

ಆಹಾರ ಇಲಾಖೆ ಈ ಆದೇಶ ಜಾರಿಗೆ ತಂದಿದ್ದು, ಅನ್ನಭಾಗ್ಯ ಯೋಜನೆಯಡಿ ಸಿಗುವ ಪಡಿತರವನ್ನು ಹಣದಾಸೆಗೆ ಮುಕ್ತ ಮಾರುಕಟ್ಟೆಯಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಸಿಕ್ಕಿಬಿದ್ದರೆ ಫಲಾನುಭವಿಗಳು ಹೊಂದಿರುವ ಕಾರ್ಡ್‌ಗಳು ರದ್ದು ಮಾಡಲಾಗುತ್ತದೆ ಎಂದು ಎಚ್ಚರಿಸಿದೆ.

ನ್ಯಾಯಬೆಲೆ ಅಂಗಡಿಗಳಲ್ಲಿ ಪ್ರತಿ ತಿಂಗಳು ಉಚಿತವಾಗಿ ನೀಡುವ ಅಕ್ಕಿಯನ್ನು ಪಡಿತದಾರರು ಮಾರುಕಟ್ಟೆಯಲ್ಲಿ ಮಾರಾಟ ಮಾಡುವ ಸಂದರ್ಭದಲ್ಲಿ ಸಿಕ್ಕಿಬೀಳುವ ಫಲಾನುಭವಿಯ ಕಾರ್ಡ್‌ಗಳನ್ನು 6 ತಿಂಗಳು ಅಮಾನತು ಮಾಡಿ ಹಾಗೂ ಮಾರುಕಟ್ಟೆ ದರದಲ್ಲಿ ಅಕ್ಕಿಯನ್ನು ದಂಡದ ರೂಪದಲ್ಲಿ ವಸೂಲಿ ಮಾಡಲಾಗುತ್ತದೆ ಎಂದು ಇಲಾಖೆ ಆದೇಶದಲ್ಲಿ ಎಚ್ಚರಿಕೆ ನೀಡಿದೆ. ರಾಜ್ಯದಲ್ಲಿ 1,17,01,012 ಬಿಪಿಎಲ್, 10,92,580 ಅಂತ್ಯೋದಯ ಹಾಗೂ 21,05,000 ಎಪಿಎಲ್ ಕಾರ್ಡ್ ಸೇರಿ ಒಟ್ಟು 1,48,98,592 ಕಾರ್ಡ್‌ಗಳಿವೆ. ಪ್ರತಿ ತಿಂಗಳು 19,972 ನ್ಯಾಯಬೆಲೆ ಅಂಗಡಿಗಳಿಂದ ಪ್ರತಿ ಸದಸ್ಯನಿಗೆ 5 ಕೆಜಿ ಅಕ್ಕಿ ಹಾಗೂ ಪ್ರತಿ ಕಾರ್ಡ್‌ಗೆ 2 ಕೆಜಿ ಗೋಧಿ ನೀಡಲಾಗುತ್ತಿದೆ.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

15 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

16 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

16 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

17 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

18 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

18 hours ago