ಬೆಂಗಳೂರು: ಪಡಿತರ ಕಾರ್ಡ್ ದಾರರೇ ಎಚ್ಚರ.ಅನ್ನಭಾಗ್ಯ ಯೋಜನೆಯಡಿ ಸಿಗುವ ಪಡಿತರವನ್ನು ಹಣದಾಸೆಗೆ ಮುಕ್ತ ಮಾರುಕಟ್ಟೆಯಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಸಿಕ್ಕಿಬಿದ್ದರೆ ಫಲಾನುಭವಿಗಳು ಹೊಂದಿರುವ ಕಾರ್ಡ್‌ಗಳು ರದ್ದು ಮಾಡಲಾಗುತ್ತದೆ.
ಆಹಾರ ಇಲಾಖೆ ಈ ಆದೇಶ ಜಾರಿಗೆ ತಂದಿದ್ದು, ಅನ್ನಭಾಗ್ಯ ಯೋಜನೆಯಡಿ ಸಿಗುವ ಪಡಿತರವನ್ನು ಹಣದಾಸೆಗೆ ಮುಕ್ತ ಮಾರುಕಟ್ಟೆಯಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಸಿಕ್ಕಿಬಿದ್ದರೆ ಫಲಾನುಭವಿಗಳು ಹೊಂದಿರುವ ಕಾರ್ಡ್‌ಗಳು ರದ್ದು ಮಾಡಲಾಗುತ್ತದೆ ಎಂದು ಎಚ್ಚರಿಸಿದೆ.
ನ್ಯಾಯಬೆಲೆ ಅಂಗಡಿಗಳಲ್ಲಿ ಪ್ರತಿ ತಿಂಗಳು ಉಚಿತವಾಗಿ ನೀಡುವ ಅಕ್ಕಿಯನ್ನು ಪಡಿತದಾರರು ಮಾರುಕಟ್ಟೆಯಲ್ಲಿ ಮಾರಾಟ ಮಾಡುವ ಸಂದರ್ಭದಲ್ಲಿ ಸಿಕ್ಕಿಬೀಳುವ ಫಲಾನುಭವಿಯ ಕಾರ್ಡ್‌ಗಳನ್ನು 6 ತಿಂಗಳು ಅಮಾನತು ಮಾಡಿ ಹಾಗೂ ಮಾರುಕಟ್ಟೆ ದರದಲ್ಲಿ ಅಕ್ಕಿಯನ್ನು ದಂಡದ ರೂಪದಲ್ಲಿ ವಸೂಲಿ ಮಾಡಲಾಗುತ್ತದೆ ಎಂದು ಇಲಾಖೆ ಆದೇಶದಲ್ಲಿ ಎಚ್ಚರಿಕೆ ನೀಡಿದೆ. ರಾಜ್ಯದಲ್ಲಿ 1,17,01,012 ಬಿಪಿಎಲ್, 10,92,580 ಅಂತ್ಯೋದಯ ಹಾಗೂ 21,05,000 ಎಪಿಎಲ್ ಕಾರ್ಡ್ ಸೇರಿ ಒಟ್ಟು 1,48,98,592 ಕಾರ್ಡ್‌ಗಳಿವೆ. ಪ್ರತಿ ತಿಂಗಳು 19,972 ನ್ಯಾಯಬೆಲೆ ಅಂಗಡಿಗಳಿಂದ ಪ್ರತಿ ಸದಸ್ಯನಿಗೆ 5 ಕೆಜಿ ಅಕ್ಕಿ ಹಾಗೂ ಪ್ರತಿ ಕಾರ್ಡ್‌ಗೆ 2 ಕೆಜಿ ಗೋಧಿ ನೀಡಲಾಗುತ್ತಿದೆ.
ಉಡುಪಿ ಮಲಬಾರ್ ಗೋಲ್ಡ್ ನಲ್ಲಿ `ಆನಿಕಾ' ವಜ್ರಾಭರಣ ಅನಾವರಣ ಉಡುಪಿ : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ…
ಮಡಿಕೇರಿ : ದುಬಾರೆ ಶಿಬಿರದಲ್ಲಿ ಆನೆಗಳ ನಡುವೆ ಕಾಳಗ; ಸಾಕಾನೆ ಮೈಮೇಲೆ ಬಿದ್ದು ಪ್ರವಾಸಿ ಮಹಿಳೆ ಮೃತ್ಯು ಮಡಿಕೇರಿ :…
ದೇಶ ಆರ್ಥಿಕ ಸಂಕಷ್ಟದಲ್ಲಿದೆ ಅಂತ ರಾಹುಲ್ ಗಾಂಧಿ ಮೊದಲೇ ಹೇಳಿದ್ದರು: ಪ್ರಿಯಾಂಕ್ ಖರ್ಗೆ ಕಲಬುರಗಿ: ದೇಶದ ಆರ್ಥಿಕ ಸಂಕಷ್ಟದಲ್ಲಿದೆ ಅಂತ…
ಕಾರ್ಕಳ : ಚರಂಡಿಗೆ ಮಗುಚಿ ಬಿದ್ದ ಕಾರು ; ಪ್ರಯಾಣಿಕರು ಅಪಾಯದಿಂದ ಪಾರು ಕಾರ್ಕಳ: ಧರ್ಮಸ್ಥಳದಿಂದ ಶಿವಮೊಗ್ಗ ಕಡೆಗೆ ತೆರಳುತ್ತಿದ್ದ…
ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ: ಕರಾವಳಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ಮಂಗಳೂರು: ಕರಾವಳಿಯಲ್ಲಿ ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗುವ…
ಪ್ಯಾಸೆಂಜರ್ ರೈಲಿನಲ್ಲಿ ಆಕಸ್ಮಿಕ ಬೆಂಕಿ ಅವಘಡ :ತಪ್ಪಿದ ಭಾರೀ ಅನಾಹುತ ಪಾಟ್ನಾ: ಬಿಹಾರದ ಸಸಾರಾಮ್ ರೈಲು ನಿಲ್ದಾಣದಲ್ಲಿ ಪಾಟ್ನಾಗೆ ತೆರಳಲು…