ಮಂಗಳೂರು: ಅನ್ನಭಾಗ್ಯ ಯೋಜನೆಯಡಿ ದೊರಕುವ ಅಕ್ಕಿಯನ್ನು ಮಾರಾಟ ಮಾಡುವ ಫಲಾನುಭವಿಗಳನ್ನು ಗುರುತಿಸಿ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ ಸೂಚಿಸಿದ್ದಾರೆ.
ಅವರು ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಫಲಾನುಭವಿಗಳೇ ಪಡಿತರ ಅಕ್ಕಿ ಮಾರಾಟ ಮಾಡುತ್ತಿರುವ ಬಗ್ಗೆ ದೂರುಗಳು ಬಂದಿದೆ. ಈ ನಿಟ್ಟಿನಲ್ಲಿ ಆಗಿಂದಾಗ್ಗೆ ಪರಿಶೀಲನೆ ನಡೆಸಬೇಕು. ನ್ಯಾಯಬೆಲೆ ಅಂಗಡಿಯಲ್ಲಿ ಅಕ್ಕಿಯ ಮೂಟೆಗಳನ್ನು ಸ್ವಚ್ಛ ಸ್ಥಳಗಳಲ್ಲಿ ಇರಿಸಬೇಕು. ಈ ಬಗ್ಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸುವಂತೆ ಅವರು ತಿಳಿಸಿದರು.
ಗೃಹ ಜ್ಯೋತಿ, ಅನ್ನ ಭಾಗ್ಯ, ಶಕ್ತಿಯೋಜನೆ, ಯುವನಿಧಿ, ಗೃಹಲಕ್ಷ್ಮಿ ಯೋಜನೆಗಳಿಂದ ಬಡವರು ವಂಚಿತರಾಗಬಾರದು. ಪ್ರತಿಯೊಬ್ಬರೂ ಈ ಯೋಜನೆಯ ಅನುಕೂಲವನ್ನು ಪಡೆಯಬೇಕು. ಗೃಹಲಕ್ಷ್ಮಿ ಯೋಜನೆಯಡಿ ತಾಲೂಕುವಾರು ನೋಂದಣಿ ಹಾಗೂ ಮಂಜೂರಾದ ಸಹಾಯಧನ ಪಡೆದುಕೊಂಡ ಫಲಾನುಭವಿಗಳ ಪಟ್ಟಿ ಹಾಗೂ ಮೊತ್ತದ ವಿವರವನ್ನು ಗ್ರಾಮ ಪಂಚಾಯತ್‍ಗಳಲ್ಲಿ ಮುಂದಿನ ಸಭೆಯಲ್ಲಿ ನೀಡಬೇಕು ಎಂದು ಸೂಚಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…