Featured

ಪಡಿತರ ಚೀಟಿ ಹೊಂದಲು ಯಾರು ಅನರ್ಹರು? : ಸರ್ಕಾರದಿಂದ ಖಡಕ್​ ಸೂಚನೆ – vishwanews24

ಪಡಿತರ ಚೀಟಿ ಹೊಂದಲು ಯಾರು ಅನರ್ಹರು? : ಸರ್ಕಾರದಿಂದ ಖಡಕ್​ ಸೂಚನೆ

ಬೆಂಗಳೂರು: ಮಾನದಂಡಗಳಿಗೆ ವಿರುದ್ಧವಾಗಿ ಅಂತ್ಯೋದಯ ಅನ್ನ ಯೋಜನೆ ಮತ್ತು ಬಿಪಿಎಲ್ ಪಡಿತರ ಚೀಟಿ ಹೊಂದಿದ್ದಿದ್ದರೇ, ಅವುಗಳನ್ನು ಕೂಡಲೆ ತಾಲೂಕು ಕಚೇರಿಯ ಆಹಾರ ಶಾಖೆಗೆ ಹಿಂದುರುಗಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಒಂದು ವೇಳೆ ವಾಪಸ್ ನೀಡದೆ ಇದ್ದರೆ ಕಾನೂನು ಕ್ರಮದ, ಜೊತೆಗೆ ದಂಡ ಸಹ ವಿಧಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.

ರಾಜ್ಯ ಸರ್ಕಾರ ಅಂತ್ಯೋದಯ, ಬಿಪಿಎಲ್ ಕಾರ್ಡ್ ಪರಿಷ್ಕರಣಿಗೆ ಮುಂದಾಗಿದೆ. ಇದರ ಭಾಗವಾಗಿ ಅಕ್ರಮವಾಗಿ ಪಡಿತರ ಚೀಟಿ ಪಡೆದವರ ಅಥವಾ ಸರ್ಕಾರದ ಮಾನದಂಡಗಳ ವಿರುದ್ಧವಾಗಿ ಪಡಿತರ ಚೀಟಿ ಹೊಂದಿದವರಿಗೆ ಆಯಾ ತಾಲೂಕುಗಳಲ್ಲಿ ತಹಶಿಲ್ದಾರರು ನೋಟಿಸ್ ಜಾರಿ ಮಾಡಿದ್ದಾರೆ. ಸರ್ಕಾರ ಕಳೆದ ತಿಂಗಳು ಅನರ್ಹ ಪಡಿತರದಾರರ ಪಟ್ಟಿ ಬಿಡುಗಡೆ ಮಾಡಿತ್ತು. ಚಿಕ್ಕಮಗಳೂರು ಜಿಲ್ಲೆಯೊಂದರಲ್ಲೇ 52 ಸಾವಿರ ಕಾರ್ಡ್ ರದ್ದಾಗುವ ಸಾಧ್ಯತೆ.

ಪಡಿತರ ಚೀಟಿ ಹೊಂದಲು ಯಾರು ಅನರ್ಹರು
ಸರ್ಕಾರ ಅಥವಾ ಸರ್ಕಾರದಿಂದ ಅನುದಾನವನ್ನು ಪಡೆಯುತ್ತಿರುವ ಸಂಸ್ಥೆಗಳು ಅಥವಾ ಸರ್ಕಾರಿ ಪ್ರಾಯೋಜಿತ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು/ ಮಂಡಳಿಗಳು/ನಿಗಮಗಳು/ಸ್ವಾಯತ್ತ ಸಂಸ್ಥೆಗಳಿಂದ ವೇತನ ಪಡೆಯುತ್ತಿರುವವರು ಪಡಿತರ ಚೀಟಿ ಹೊಂದಲು ಅನರ್ಹರು. ಆದಾಯ ತೆರಿಗೆ, ಸೇವಾ ತೆರಿಗೆ, ವ್ಯಾಟ್, ವೃತ್ತಿ ತೆರಿಗೆ ಪಾವತಿಸುವವರು ಪಡಿತರ ಚೀಟಿ ಹೊಂದಲು ಅನರ್ಹರು.ಗ್ರಾಮೀಣ ಪ್ರದೇಶದಲ್ಲಿ ಮೂರು ಹೆಕ್ಟೇರ್ ಒಣಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು ಅಥವಾ ಗ್ರಾಮೀಣ ಪ್ರದೇಶವನ್ನು ಹೊರತುಪಡಿಸಿ, ನಗರ ಪ್ರದೇಶಗಳಲ್ಲಿ 1000 ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಬಗಳು ಪಡಿತರ ಚೀಟಿ ಹೊಂದಲು ಅನರ್ಹ.

ಜೀವನೋಪಾಯಕ್ಕಾಗಿ ಸ್ವತಃ ಓಡಿಸುವ ಒಂದು ವಾಣಿಜ್ಯ ವಾಹನವನ್ನು ಅಂದರೆ ಟ್ರ್ಯಾಕ್ಟರ್, ಮ್ಯಾಕ್ಸಿ ಕ್ಯಾಬ್, ಟ್ಯಾಕ್ಸಿ ಇತ್ಯಾದಿಗಳನ್ನು ಹೊಂದಿದ ಕುಟುಂಬವನ್ನು ಹೊರತುಪಡಿಸಿ, ನಾಲ್ಕು ಚಕ್ರದ ವಾಹನಗಳನ್ನು ಹೊಂದಿರುವ ಎಲ್ಲಾ ಕುಟುಂಬಗಳು ಪಡಿತರ ಚೀಟಿ ಹೊಂದಲು ಅನರ್ಹ.
ಕುಟುಂಬದ ವಾರ್ಷಿಕ ಆದಾಯವು ರೂ.1.20 ಲಕ್ಷಗಳಿಗಿಂತಲೂ ಹೆಚ್ಚು ಇರುವ ಕುಟುಂಬಗಳು ಪಡಿತರ ಚೀಟಿ ಹೊಂದಲು ಅನರ್ಹ, ಸರ್ಕಾರ ನಿಗದಿಪಡಿಸಿರುವ ಈ ಮಾನದಂಡಗಳಿಗೆ ವಿರುದ್ಧವಾಗಿ ಅಂತ್ಯೋದಯ ಅಥವಾ ಆದ್ಯತಾ (ಬಿಪಿಎಲ್) ಪಡಿತರ ಚೀಟಿ ಹೊಂದಿರುವವರು ತಕ್ಷಣವೆ ತಾಲೂಕು ಕಚೇರಿಯ ಆಹಾರ ಶಾಖೆಗೆ ಪಡಿತರ ಚೀಟಿಯನ್ನು ಒಪ್ಪಿಸುವಂತೆ ಸರ್ಕಾರ ಮಾಧ್ಯಮ ಪ್ರಕಟಣೆ ಹೊಡಿಸಿದೆ.

ಅಕ್ರಮ ಪಡಿತರ ಚೀಟಿ ಹೊಂದಿರುವವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ 1955 ಮತ್ತು ಕರ್ನಾಟಕ ಅನಧಿಕೃತ ಪಡಿತರ ಚೀಟಿ ಹೊಂದುವುದರ ತಡೆ ಆದೇಶ 1977ರ ಹಾಗೂ ಐ.ಪಿ.ಸಿ. ಕಲಂಗಳಡಿಯಲ್ಲಿ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago