ಉಡುಪಿ: ಪಡುಕರೆ ಬೀಚ್ ಪ್ರವಾಸಿ ತಾಣವಾಗಿ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಯೋಜನೆ ರೂಪಿಸಿ ಪ್ರಸ್ತಾವನೆ ಸಲ್ಲಿಸಿದಲ್ಲಿ ಮುಂದಿನ ಅಧಿವೇಶದಲ್ಲಿ ಮಂಡಿಸಿ ಕಾರ್ಯಗತಗೊಳಿಸಲು ಪ್ರಯತ್ನಿಸಲಾಗುವುದು ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಹೇಳಿದರು.
ಉಡುಪಿ ಜಿಲ್ಲಾಡಳಿತ, ಉಡುಪಿ ಮತ್ತು ಮಲ್ಪೆ ಅಭಿವೃದ್ಧಿ ಸಮಿತಿ, ಉಡುಪಿ ನಗರಸಭೆ, ಪ್ರವಾಸೋದ್ಯಮ ಇಲಾಖೆ, ದ.ಕ ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನಿನ ಸಹಯೋಗದೊಂದಿಗೆ ನಡೆದ ಮಲ್ಪೆ-ಪಡುಕರೆ ಬೀಚ್ ಸ್ವತ್ಛತಾ ಅಭಿಯಾನ ಉದ್ಘಾಟಿಸಿ ಅವರು ಮಾತನಾಡಿದರು.
ಗೋವಾ, ಕೇರಳದಂತೆ ಕರ್ನಾಟಕದ 300 ಕಿ.ಮೀ. ಉದ್ದದ ಕರಾವಳಿಯಲ್ಲಿ ಪ್ರವಾಸೋದ್ಯಮ ಬೆಳೆಸಬೇಕೆಂಬ ನಿಟ್ಟಿನಲ್ಲಿ ಈಗಾಗಲೇ ಒಂದು ಸುತ್ತಿನ ಮಾತುಕತೆ ನಡೆದಿದ್ದು, ಕೇಂದ್ರ ಸರಕಾರದಿಂದ ಎಲ್ಲ ಸಹಕಾರ ದೊರೆಯಲಿದೆ ಎಂದು ತಿಳಿಸಿದರು.
ಶಾಸಕರ ಬೇಡಿಕೆಯಂತೆ ಕೇಂದ್ರ ಸರಕಾರದ ಸಾಗರಮಾಲಾ ಯೋಜನೆಯಡಿ ಪಡುಕರೆ ಸಮೀಪದ ಐಲ್ಯಾಂಡ್’ವರೆಗೆ ಬ್ರೇಕ್ ವಾಟರ್ ನಿರ್ಮಾಣ, ಪ್ರವಾಸಿ ಬೋಟುಗಳಿಗಾಗಿ ಇಲ್ಲಿ ಮರೀನಾ ಸೌಲಭ್ಯವನ್ನು ಕಲ್ಪಿಸಲಾಗುವುದು ಎಂದು ಹೇಳಿದರು.
ಕುಂದಾಪುರ: ಹೋಂ ಸ್ಟೇ ಎನ್ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…
ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ :…
ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…
ಉಡುಪಿ: ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…