ಮಲ್ಪೆ: ಮಲ್ಪೆಯ ಪಡುಕರೆ ತೀರದಲ್ಲಿ ದೋಣಿ ಎಳೆಯುತ್ತಿರುವ ವೇಳೆ ಬೃಹತ್ ಅಲೆ ಅಪ್ಪಳಿಸಿದ ಪರಿಣಾಮ ಓರ್ವ ಮೃತಪಟ್ಟು, ಇನೋರ್ವ ಸಮುದ್ರ ಪಾಲಾಗಿರುವ ಬಗ್ಗೆ ಬುಧವಾರ ಬೆಳಗ್ಗೆ ವರದಿಯಾಗಿದೆ.
ಮೃತರನ್ನು ಉದ್ಯಾವರ ಪಿತ್ರೋಡಿಯ ನಿತೇಶ್ (29) ಎಂದು ಗುರುತಿಸಲಾಗಿದ್ದು, ಅವರಿಗೆ 7 ತಿಂಗಳ ಹಿಂದೆ ವಿವಾಹವಾಗಿತ್ತು. ನಿಶಾಂತ್ ಎಂಬವರು ನೀರು ಪಾಲಾಗಿದ್ದು, ನಾಪತ್ತೆಯಾಗಿದ್ದಾರೆ.
ಇಂದು ಬೆಳಗ್ಗೆ ಮೀನುಗಾರಿಕೆ ಮುಗಿಸಿ ದಡಕ್ಕೆ ಬಂದಿದ್ದು, ಸುಮಾರು 200 ಮೀ. ದೂರದಲ್ಲಿ ಎಂಬತ್ತಕ್ಕೂ ಅಧಿಕ ಮಂದಿ ದೋಣಿಯನ್ನು ದಡಕ್ಕೆ ಎಳೆಯುವ ವೇಳೆ ಬೃಹತ್ ಅಲೆ ಅಪ್ಪಳಿಸಿದೆ ಎಂದು ತಿಳಿದುಬಂದಿದೆ.
ಘಟನೆಯಿಂದ ಇಬ್ಬರು ಯುವಕರು ನೀರಿನ ಸೆಲೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದು, ಓರ್ವನ ಮೃತ ದೇಹ ಅಲ್ಲೇ ಸಮೀಪ ಪತ್ತೆಯಾಗಿದ್ದು, ಇನೋರ್ವ ನೀರಿನಲ್ಲಿ ನಾಪತ್ತೆಯಾಗಿದ್ದಾರೆ.
ಮಲ್ಪೆ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು, ತನಿಖೆ ನಡೆಸುತಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…