ಪಡುಬಿದ್ರಿಯಲ್ಲಿ ನಡೆಯಿತು ಕಾಂತಾರ ಶೈಲಿಯ ಘಟನೆ – ಕೋರ್ಟ್ನಲ್ಲಿ ನೋಡಿಕೊಳ್ತೇನೆಂದ ದೂರುದಾರ ಸಾವು – Vishwanews24
@ ಪಡುಬಿದ್ರಿಯಲ್ಲಿ ನಡೆಯಿತು ಕಾಂತಾರ ಶೈಲಿಯ ಘಟನೆ –
@ ಪಡುಹಿತ್ಲು ಜಾರಂದಾಯ ದೈವಸ್ಥಾನದ ನೇಮೋತ್ಸವ ವಿಚಾರ
@ ಕೋರ್ಟ್ ಮೆಟ್ಟಿಲೇರಿದ ಮರುದಿನವೇ ಟ್ರಸ್ಟಿ ಜಯ ಪೂಜಾರಿ ಸಾವು
ಉಡುಪಿ: ಜಿಲ್ಲೆಯ ಕಾಪು ತಾಲೂಕು ಪಡುಬಿದ್ರಿಯಲ್ಲಿ ಕಾಂತಾರ ಚಿತ್ರದ ಮಾದರಿಯಲ್ಲಿ ಘಟನೆಯೊಂದು ನಡೆದಿದೆ.
ಪಡುಹಿತ್ಲು ಜಾರಂದಾಯ ದೈವಸ್ಥಾನದ ನೇಮೋತ್ಸವ ವಿಚಾರದಲ್ಲಿ ತಗಾದೆ ಇತ್ತು. 500 ವರ್ಷ ಇತಿಹಾಸ ಇರುವ ಈ ದೈವಸ್ಥಾನದಲ್ಲಿ ಸಮಸ್ತರ ಪರವಾಗಿ ಒಂದು ಭಕ್ತ ಸಮಿತಿ ಇತ್ತು. ದೈವಸ್ಥಾನಕ್ಕೆ ಸಂಬಂಧಿಸಿದಂತೆ ಭಕ್ತರ ಗುಂಪೊಂದು ಟ್ರಸ್ಟ್ ರಚನೆ ಮಾಡಿದೆ. ನಮ್ಮ ಟ್ರಸ್ಟ್ (Trust) ನೇತೃತ್ವದಲ್ಲಿ ನೇಮೋತ್ಸವ ನಡೆಯುತ್ತದೆ ಎಂದು ಘೋಷಿಸಿದೆ.

ಆದರೆ ಮತ್ತೆ ಅಧಿಕಾರ ಪಡೆಯಬೇಕೆಂಬ ಹಠದಿಂದ ಪ್ರಕಾಶ್ ಶೆಟ್ಟಿ ಪ್ರತ್ಯೇಕ ಟ್ರಸ್ಟ್ ರಚಿಸಿದ ಬಂಡಾರ ಮನೆಯ ಗುರಿಕಾರರಾದ ಜಯ ಪೂಜಾರಿಯನ್ನು ಅಧ್ಯಕ್ಷರನ್ನಾಗಿ ನೇಮಿಸುತ್ತಾರೆ. ಹೀಗೆ 9 ಜನರ ಟ್ರಸ್ಟ್ ರಚಿಸಿದ ಪ್ರಕಾಶ್ ಶೆಟ್ಟಿ, ಇದರಲ್ಲಿ ಜಯ ಪೂಜಾರಿಯನ್ನು ಅಧ್ಯಕ್ಷರನ್ನಾಗಿ ನೇಮಿಸ್ತಾರೆ. ದೈವಸ್ಥಾನ ತಮಗೆ ಸೇರಿದ್ದು ಎಂದು ಹಕ್ಕು ಸ್ಥಾಪಿಸಲು ಯತ್ನಿಸುತ್ತಾರೆ.
ವರ್ಷಂಪ್ರತಿಯಂತೆ ಈ ವರ್ಷ ನೇಮೋತ್ಸವ ನಡೆಸಲು ಜಾರಂದಾಯ ದೈವಸ್ಥಾನ ಸಮಿತಿ ತೀರ್ಮಾನಿಸಿ, ಜನವರಿ 7 ರಂದು ಕೋಲ ನಡೆಸಲು ತೀರ್ಮಾನಿಸುತ್ತದೆ. ಇದರ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರುವ ಜಯಪೂಜಾರಿ ಮತ್ತು ಪ್ರಕಾಶ್ ಶೆಟ್ಟಿ ಕೋಲಕ್ಕೆ ತಡೆಯಾಜ್ಞೆ ತರುವಲ್ಲಿ ಯಶಸ್ವಿಯಾಗುತ್ತಾರೆ. ಆಶ್ಚರ್ಯದ ಸಂಗತಿ ಎಂದರೆ ಡಿಸೆಂಬರ್ 23ಕ್ಕೆ ತಡೆಯಾಜ್ಞೆ ತಂದ ಜಯಪೂಜಾರಿ, ಡಿಸೆಂಬರ್ 24 ರಂದು ಹಠಾತ್ ಕುಸಿದು ಬಿದ್ದು ಸಾವನಪ್ಪಿದ್ದಾರೆ.
ಇದೀಗ ಜನವರಿ 7ಕ್ಕೆ ನಡೆಯಬೇಕಿದ್ದ ನೇಮೋತ್ಸವವನ್ನು ದೈವಸ್ಥಾನ ಸಮಿತಿ ಜಯ ಪೂಜಾರಿ ದೈವದೀನರಾದ ಕಾರಣಕ್ಕೆ ಮುಂದೂಡಿದೆ. ಆದರೆ ಹಠ ಬಿಡದ ಪ್ರಕಾಶ್ ಶೆಟ್ಟಿ ಮತ್ತು ತಂಡ ಜಯ ಪೂಜಾರಿಯವರ ಉತ್ತರಕ್ರಿಯೆಯ ದಿನವಾದ ಜ.7 ರಂದೇ ಕಾಲಾವಧಿ ನೇಮೋತ್ಸವ ಮಾಡಲು ಹೊರಟಿದೆ. ಕೋರ್ಟ್ನಲ್ಲಿ ತಡೆಯಾಜ್ಞೆ ತೆರವಾಗಿದ್ದರೂ ಊರವರ ವಿರುದ್ಧ ಹೊರಟಿರುವ ಪ್ರಕಾಶ್ ಶೆಟ್ಟಿ ಮತ್ತು ತಂಡದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಇದೀಗ ಊರ ಸಮಸ್ತರು ಸಭೆ ಸೇರಿ 500 ವರ್ಷಗಳ ಇತಿಹಾಸ ಇರುವ ಜಾರಂದಾಯ ಬಂಟ ಸೇವಾ ಸಮಿತಿ ಮಾಡುವ ನಿರ್ಣಯಕ್ಕೆ ಬದ್ಧ ಎಂಬ ತೀರ್ಮಾನಕ್ಕೆ ಬಂದಿದ್ದಾರೆ.
ಬಿಜೆಪಿಯ ಹಾಲಿ ಶಾಸಕರಿಗೆ ಟಿಕೆಟ್ ಟೆಕ್ಷನ್ : ಹೈಕಮಾಂಡ್ ಕೈ ಸೇರಿದೆ 16 ಜಿಲ್ಲೆಗಳ ಶಾರ್ಟ್ ಲಿಸ್ಟ್ – Vishwanews24
