Featured

ಪಡುಬಿದ್ರಿ ಸಮುದ್ರ ತೀರದಲ್ಲಿ ಮತ್ತೆ ತೀವ್ರಗೊಂಡ ಕಡಲ್ಕೊರೆತ -Vishwanews24

ಪಡುಬಿದ್ರಿಯಲ್ಲಿ ಸಮುದ್ರ ತೀರದಲ್ಲಿ ಮತ್ತೆ ತೀವ್ರಗೊಂಡ ಕಡಲ್ಕೊರೆತ -Vishwanews24

ಪಡುಬಿದ್ರಿ : ಪಡುಬಿದ್ರಿಯಲ್ಲಿ ಮತ್ತೆ ಕಡಲ್ಕೊರೆತ ತೀವ್ರಗೊಂಡಿದ್ದು,ಇಲ್ಲಿನ ಕಾಡಿಪಟ್ಣ ಸಮುದ್ರ ತೀರದಲ್ಲಿರುವ ವೀಕ್ಷಣಾ ಗೋಪುರ,ವಿಶ್ರಾಂತಿ ಗೃಹ ಕಡಲೊಡಲು ಸೇರುವ ಎಲ್ಲಾ ಸಾಧ್ಯತೆಗಳಿವೆ.

ಕಳೆದ ಬಾರಿಯು ಈ ಪ್ರದೇಶದಲ್ಲಿ ಕಡಲ್ಕೊರೆತ ಉಂಟಾಗಿ ಪ್ರವಾಸೋದ್ಯಮ ಇಲಾಖೆಯಿಂದ ನಿರ್ಮಾಣಗೊಂಡ ವೇದಿಕೆ, ವಿದ್ಯುತ್ ಕಂಬಗಳು,ಇಂಟರ್ಲಾಕ್ ಹಾಗು ತೆಂಗಿನ ಮರಗಳು ಸಮುದ್ರ ಪಾಲಾಗಿತ್ತು.ಆ ಸಮಯದಲ್ಲಿ ಕಡಲ್ಕೊರೆತ ಪ್ರದೇಶಗಳಿಗೆ ಕಂದಾಯ ಸಚಿವ ಆರ್ ಅಶೋಕ್ ಭೇಟಿ ನೀಡಿದ್ದು, ನಿರ್ಮಾಣ ಕಾಮಗಾರಿಗಳನ್ನು ತೆರವುಗೊಳಿಸಲು ಸೂಚಿಸಿದ್ದರು.ಆದರೂ ಈ ಭಾಗದಲ್ಲಿ ಪ್ರವಾಸೋದ್ಯಮ ಇಲಾಖೆ ಮೂಲಕ ಶೌಚಾಲಯ ನಿರ್ಮಿಸಲಾಗಿದೆ.ಈಗ ಕಡಲ್ಕೊರೆತ ಕಾಣಿಸಿಕೊಂಡಿರುವ ಅನತಿ ದೂರದಲ್ಲಿ ತಡೆಗೋಡೆ ಕಾಮಗಾರಿಯೂ ನಡೆದಿದೆ.ಅದರ ಕಲ್ಲುಗಳು ಸಮುದ್ರ ಪಾಲಾಗುತ್ತಿದೆ.ಈ ಪ್ರದೇಶದಲ್ಲಿ ಕಳೆದ ಒಂದು ವಾರಗಳಿಂದ ಕೊರೆತ ಕಾಣಿಸಿಕೊಂಡಿದ್ದು,ಹಲವು ತೆಂಗಿನ ಮರಗಳು ಸಮುದ್ರ ಪಾಲಾಗಿದೆ.ಇದೀಗ ಈ ಪ್ರದೇಶದಲ್ಲಿರುವ ವೀಕ್ಷಣಾ ಗೋಪುರ ವಿಶ್ರಾಂತಿ ಗೃಹ ಸಮುದ್ರ ಪಾಲಾಗುವ ಭೀತಿ ಎದುರಾಗಿದೆ.

ವೀಕ್ಷಣಾ ಗೋಪುರ ಉಳಿಸುವ ನಿಟ್ಟಿನಲ್ಲಿ ಬ್ಲೂ ಪ್ಲಾಗ್ ಬೀಚ್ನ ಕಾರ್ಮಿಕರು ವೀಕ್ಷಣಾ ಗೋಪುರದ ಬುಡದಲ್ಲೇ ಇದ್ದ ಮರಳನ್ನು ಪ್ಲಾಸ್ಟಿಕ್ ಚೀಲಗಳಲ್ಲಿ ತುಂಬಿಸಿ ಗೋಪುರದ ಸುತ್ತ ಹಾಕಲಾಗಿದ್ದು ಈಗಾಗಲೇ 50 ಕ್ಕೂ ಅಧಿಕ ಮರಳು ಚೀಲಗಳು ಸಮುದ್ರ ಪಾಲಾಗಿದೆ.ಈ ಬಗ್ಗೆ ಕಾಡಿಪಟ್ಣ ಮೊಗವೀರ ಮಹಾ ಸಭಾ ಅಧ್ಯಕ್ಷ ಅಶೋಕ್ ಸಾಲ್ಯಾನ್ ಮಾತನಾಡಿ ಸಂಬಂಧಿತ ಇಲಾಖೆ ಕೂಡಲೇ ಗಮನ ಹರಿಸಬೇಕೆಂದು ಒತ್ತಾಯಿಸಿದ್ದಾರೆ.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

18 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

20 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

21 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

21 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

21 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

21 hours ago