Featured

ಪಡುಬಿದ್ರಿ: ಅಂಡಾಲ ದೇವಿ ಪ್ರಸಾದ ಆಳ್ವ ಹಾಗೂ ಸುರೇಶ ಕುಪ್ಪೆಪದವು ಅವರಿಗೆ ಈ ವರ್ಷದ ಪೂಲ ಪ್ರಶಸ್ತಿ ವಿಠ್ಠಲ ಶೆಟ್ಟಿ ಪ್ರಶಸ್ತಿ – vishwanews24

ಪಡುಬಿದ್ರಿ: ಅಂಡಾಲ ದೇವಿ ಪ್ರಸಾದ ಆಳ್ವ ಹಾಗೂ ಸುರೇಶ ಕುಪ್ಪೆಪದವು ಅವರಿಗೆ ಈ ವರ್ಷದ ಪೂಲ ಪ್ರಶಸ್ತಿ ವಿಠ್ಠಲ ಶೆಟ್ಟಿ ಪ್ರಶಸ್ತಿ

ಪಡುಬಿದ್ರಿ: ಶ್ರೀ ಕಟೀಲು ಮೇಳದ ಭಾಗವತ ಅಂಡಾಲ ದೇವಿ ಪ್ರಸಾದ ಆಳ್ವ ಹಾಗೂ ಬಣ್ಣದ ವೇಷಧಾರಿ ಸುರೇಶ ಕುಪ್ಪೆಪದವು ಅವರಿಗೆ ಈ ವರ್ಷದ ಪೂಲ ವಿಠ್ಠಲ ಶೆಟ್ಟಿ ಪ್ರಶಸ್ತಿ ಯನ್ನು ನೀಡಲಾಗುವುದು. ಜನವರಿ 11 ಶನಿವಾರ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ನಡೆಯಲಿರುವ ಪಡುಬಿದ್ರಿ ಕಲ್ಲಟೆಗುತ್ತು ಮೂಲ ಕುಟುಂಬಸ್ಥರಾದ ರಾಧಾ ವಿಠ್ಠಲ ಶೆಟ್ಟಿ ಮತ್ತು ಮಕ್ಕಳ ಶ್ರೀ ಕಟೀಲು ಮೇಳದ 28 ನೇ ವರ್ಷದ ಸೇವೆ ಬಯಲಾಟದ ವೇದಿಕೆಯಲ್ಲಿ ಸನ್ಮಾನ ನಡೆಯಲಿದೆ.

ದೇವೀ ಪ್ರಸಾದ ಅವರು ಕಳೆದು ಮೂರುವರೆ ದಶಕಗಳಿಂದ ಯಕ್ಷಗಾನ ರಂಗದಲ್ಲಿ ಪ್ರಸಂಗ ರಚನೆ ಹಾಗೂ ಭಾಗವತಿಕೆ ಯಲ್ಲಿ ಸಿದ್ದಿ ಪ್ರಸಿದ್ದಿ ಪಡೆದವರು.ತೆಂಕು ಹಾಗೂ ಬಡಗು ತಿಟ್ಟಿನ ಟೆಂಟ್ ಮೇಳಗಳಲ್ಲೂ ಅವರ ಪ್ರಸಂಗಗಳು ಯಶಸ್ವಿ ಪ್ರದರ್ಶನ ಕಂಡಿವೆ.

ಕಟೀಲು ಮೇಳದಲ್ಲೇ ಬಣ್ಣದ ವೇಷಧಾರಿ ಯಾಗಿ ರೂಪುಗೊಂಡು ಕಳೆದ 35 ವರ್ಷಗಳಿಂದ ಕಲಾ ಸೇವೆಗೈಯ್ಯುತ್ತಿರುವ ಸುರೇಶ ಕುಪ್ಪೆಪದವು ಅವರು ಮಹಿಷಾಸುರ ಪಾತ್ರ ನಿರ್ವಹಣೆಯಲ್ಲಿ ಸಿದ್ದಿ ಪ್ರಸಿದ್ದಿ ಪಡೆದಿದ್ದಾರೆ.

ಕಂಬಳ ಕೋಣಗಳ ಮಾಲಕರಾಗಿ ಖ್ಯಾತಿ ಪಡೆದಿದ್ದ ಮುಂಬೈ ಘಾಟಿಕೋಪರ್ ನ ಭಾರತ್ ಕೆಫೆ ಸಂಸ್ಥಾಪಕ ಪೂಲ ವಿಠ್ಠಲ ಶೆಟ್ಟಿ ಅವರ ಸ್ಮರಣಾರ್ಥ ಹಿರಿಯ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.

ಕದ್ರಿ ನವನೀತ ಶೆಟ್ಟಿ, ಐಕಳ ವಿಶ್ವನಾಥ ಶೆಟ್ಟಿ, ಎರ್ಮಾಳ್ ವಿಶುಕುಮಾರ್ ಅವರನ್ನೊಳಗೊಂಡ ಸಮಿತಿಯು ಪ್ರತೀ ವರ್ಷ ಪ್ರಶಸ್ತಿ ವಿಜೇತರ ಆಯ್ಕೆ ಮಾಡುತ್ತಿದೆ ಎಂದು ಸತೀಶ್ ವಿಠ್ಠಲ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶ್ರೀ ಕಟೀಲು ಮೇಳದವರಿಂದ “ರಾಮ – ಕೃಷ್ಣ – ಗೋವಿಂದ” ಯಕ್ಷಗಾನ ಬಯಲಾಟ ಪ್ರದರ್ಶನವಿದೆ.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

17 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

17 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

17 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

20 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

20 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

20 hours ago