ಉಡುಪಿ

ಪಡುಬಿದ್ರಿ : ಅಂತರಾಷ್ಟ್ರೀಯ ಬ್ಲೂ ಫ್ಲಾಗ್ ಸರ್ಟಿಫಿಕೇಶನ್ ನ ಮಾನ್ಯತೆ ಪಡೆದಿರುವ ಪಡುಬಿದ್ರಿ ಬ್ಲೂ ಫ್ಲಾಗ್ ಬೀಚ್ ಡಿ. 28 ರಂದು ಉದ್ಘಾಟನೆ -Vishwanews24

ಪಡುಬಿದ್ರಿ : ಅಂತರಾಷ್ಟ್ರೀಯ ಬ್ಲೂ ಫ್ಲಾಗ್ ಸರ್ಟಿಫಿಕೇಶನ್ ನ ಮಾನ್ಯತೆ ಪಡೆದಿರುವ ಪಡುಬಿದ್ರಿ ಬ್ಲೂ ಫ್ಲಾಗ್ ಬೀಚ್ ಡಿ. 28 ರಂದು ಉದ್ಘಾಟನೆ -Vishwanews24

ಪಡುಬಿದ್ರಿ :ಅಂತರಾಷ್ಟ್ರೀಯ ಬ್ಲೂ ಫ್ಲಾಗ್ ಸರ್ಟಿಫಿಕೇಶನ್ ನ ಮಾನ್ಯತೆ ಪಡೆದಿರುವ ಪಡುಬಿದ್ರಿ ಬ್ಲೂ ಫ್ಲಾಗ್ ಬೀಚ್ ಡಿ. 28 ರಂದು ಉದ್ಘಾಟನೆಗೊಳ್ಳಲಿದೆ.

ಮಿನಿಸ್ಟ್ರಿ ಆಫ್ ಎನ್ವಿರಾನ್ಮೆಂಟ್, ಫಾರೆಸ್ಟ್ ಆಂಡ್ ಕ್ಲೈಮೇಟ್‌ ಚೇಂಜ್‌, ಸೊಸೈಟಿ ಫಾರ್ ಇಂಟಿಗ್ರೇಟೆಡ್ ಕೋಸ್ಟಲ್ ಮ್ಯಾನೆಜ್‌ಮೆಂಟ್‌ ಇದರ ಸಹಯೋಗದೊಂದಿಗೆ ಉಡುಪಿ ಜಿಲ್ಲಾಡಳಿತ ಮತ್ತು ಪ್ರವಾಸೋದ್ಯಮ ಇಲಾಖೆಯ ಉಸ್ತುವಾರಿಯಲ್ಲಿ ಈ ಬ್ಲೂ ಫ್ಲಾಗ್ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನ ಗೊಳಿಸಲಾಗಿದೆ.

ಪ್ರವಾಸಿಗರಿಗೆ ಅನುಕೂಲಕರ ವಾಗುವಂತೆ ಎಲ್ಲಾ ವ್ಯವಸ್ಥೆಯನ್ನು ಮಾಡಲಾಗಿದೆ. ಬೀಚ್ ನ 100 ಮೀ. ಏರಿಯಾವನ್ನು ಸರ್ವೆ ಮಾಡಿ ಸೇಫ್ ಝೋನ್ ಆಗಿ ಪರಿಗಣಿಸಿ ಈ ಝೋನ್ ವ್ಯಾಪ್ತಿಯಲ್ಲಿ ನೆಟ್ ಗಳನ್ನು ಹಾಕಲಾಗುತ್ತದೆ. ಈ 100 ಮೀಟರ್ ವ್ಯಾಪ್ತಿಯಲ್ಲಿ ಪ್ರಾಸಿಗರು ನೀರಿಗಿಳಿದು ಆಟವಾಡಬಹುದಾಗಿದೆ. ಆದರೆ ಈ ವ್ಯಾಪ್ತಿಯಲ್ಲಿ ಅಳವಡಿಸಿರುವ ನೆಟ್ ನ್ನು ಯಾವುದೇ ಕಾರಣಕ್ಕೂ ಕ್ರಾಸ್ ಮಾಡುವಂತಿಲ್ಲ. ಅಲ್ಲದೆ, ಈ ಸೇಫ್ ಝೋನ್ ಹೊರತು ಪಡಿಸಿ ಉಳಿದ ಯಾವುದೇ ಕಡೆಗಳಲ್ಲಿ ಪ್ರವಾಸಿಗರು ನೀರಿಗೆ ಇಳಿಯುವಂತಿಲ್ಲ.

ಈ ಬೀಚ್ ನಲ್ಲಿ ಸ್ವಚ್ಚತೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಬೀಚ್ ಕ್ಲೀನ್ ಮೂಲಕ ಶೇಖರಣೆಯಾದ ತ್ಯಾಜ್ಯವನ್ನು ವಿಲೇವಾರಿ ಮಾಡಲು ಎಸ್ ಎಲ್ ಆರ್ ಎಂ ಘಟಕ ಇದ್ದು ಇದರ ಮೂಲಕ ತ್ಯಾಜ್ಯ ವಿಲೇವಾರಿ ಮಾಡಿ ಪಂಚಾಯತ್ ಗೆ ವರ್ಗಾಯಿಸಲಾಗುತ್ತದೆ. ಇದರೊಂದಿಗೆ ವಿಶಾಲವಾದ ಗಾರ್ಡನ್, ಸಿಟೌಟ್ ಅಂಬ್ರಲ್ಲಾ, ಮರದ ಜೋಕಾಲಿಗಳು, ಶುದ್ಧ ಕುಡಿಯುವ ನೀರಿನ ಘಟಕ, ಪ್ರವಾಸಿಗರಿಗಾಗಿ ವ್ಯವಸ್ಥಿತವಾದ ಶೌಚಾಲಯಗಳು, ಡ್ರೆಸ್ಸಿಂಗ್ ರೂಮ್ ಗಳ ಸೌಲಭ್ಯನೂ ಇದೆ. ಬೀಚ್ ಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆ ಹಾಗೂ,ಮುಂಜಾಗೃತಾ ಕ್ರಮವಾಗಿ ಎಲ್ಲೆಡೆ ಸಿಸಿ ಕ್ಯಾಮೆರಾವನ್ನು ಅಳವಡಿಸಲಾಗಿದೆ.

ಈ ಅಂತರಾಷ್ಟ್ರೀಯ ಬ್ಲೂ ಫ್ಲಾಗ್ ಮಾನ್ಯತೆಗೆ ದೇಶದ 13 ಬೀಚ್ ಅಭಿವೃದ್ಧಿಪಡಿಸಲಾಗಿತ್ತು. ಈ ಪೈಕಿ ಎಲ್ಲಾ ಅಗತ್ಯ ನಿಯಮಗಳ ಪಾಲನೆ ಮತ್ತು ಗುಣಮಟ್ಟ ಹೊಂದಿರುವ 8 ಬೀಚ್ ಗಳನ್ನು ರಾಷ್ಟ್ರೀಯ ಆಯ್ಕೆ ಸಮಿತಿ ಆಯ್ಕೆ ಮಾಡಿ ಅಂತರರಾಷ್ಟ್ರೀಯ ಜ್ಯೂರಿಗೆ ಕಳುಹಿಸಲಾಗಿತ್ತು. ಇಲ್ಲಿ ಆಯ್ಕೆಯಾದ 8 ಬೀಚ್ ಗಳಲ್ಲಿ ಪಡುಬಿದ್ರೆ ಬ್ಲೂ ಫ್ಲಾಗ್ ಬೀಚ್ ಸಹ ಸೇರಿದೆ ಎಂಬುದು ಜಿಲ್ಲೆಯ ಜನತೆಗೆ ಹೆಮ್ಮೆಯ ವಿಚಾರ. ಉಡುಪಿ ಜಿಲ್ಲೆಯ ಹೆಮ್ಮೆಯ ಪಡುಬಿದ್ರೆ ಬ್ಲೂ ಫ್ಲಾಗ್ ಬೀಚ್ ನಲ್ಲಿ 33 ಮಾನದಂಡಗಳನ್ನು ಆಧರಿಸಿ ಬ್ಲೂ ಫ್ಲಾಗ್ ಯೋಜನೆಯನ್ನು ಅನುಷ್ಠಾನಕ್ಕೆ ತರಲಾಗಿದೆ.

Vishwa News 24

Recent Posts

ಉಡುಪಿ: ಸಂತೆಕಟ್ಟೆ ಅಂಡರ್‌ಪಾಸ್‌ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ – vishwanews24

ಉಡುಪಿ: ಸಂತೆಕಟ್ಟೆ ಅಂಡರ್‌ಪಾಸ್‌ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ…

26 minutes ago

ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು – vishwanews24

ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು ಉಡುಪಿ: ಮುಂಬರುವ ಗುಡ್‌ಫ್ರೈಡೇ ಹಾಗೂ ಈಸ್ಟರ್ ಪ್ರಯುಕ್ತ ಜನರ ವಿಶೇಷ ಒತ್ತಡವನ್ನು…

44 minutes ago

ಉಡುಪಿ: ಏ.1ರಂದು ಪಿಂಕ್​ ಸೂಪರ್​ ಮೂನ್​ ವೀಕ್ಷಣೆಗೆ ಅವಕಾಶ – vishwanews24

ಉಡುಪಿ: ಏ.1ರಂದು ಪಿಂಕ್​ ಸೂಪರ್​ ಮೂನ್​ ವೀಕ್ಷಣೆಗೆ ಅವಕಾಶ ಉಡುಪಿ: ಆಕಾಶಕಾಯದಲ್ಲಿ ದಿನವೂ ಬೆಳ್ಳಗೆ ಗೋಚರಿಸುವ ಚಂದ್ರ ಏ.1ರಂದು ಸಂಜೆ…

60 minutes ago

ಜನಗಣತಿ: ಆನ್ ಲೈನ್ ನಲ್ಲಿ ಮನೆ ಲಿಂಕ್ ಮಾಡಲು ತಹಸೀಲ್ದಾರ್ ಕರೆ – vishwanews24

ಜನಗಣತಿ: ಆನ್ ಲೈನ್ ನಲ್ಲಿ ಮನೆ ಲಿಂಕ್ ಮಾಡಲು ತಹಸೀಲ್ದಾರ್ ಕರೆ ಮಂಗಳೂರು: ಭಾರತದ ರಿಜಿಸ್ಟ್ರಾರ್ ಮತ್ತು ಜನಗಣತಿ ಆಯುಕ್ತರ…

1 hour ago

ಮಂಗಳೂರು :  2025ನೇ ಸಾಲಿನ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರ – vishwanews24

ಮಂಗಳೂರು :  2025ನೇ ಸಾಲಿನ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರ ಮಂಗಳೂರು : ಕರ್ನಾಟಕ…

1 hour ago

ಮಂಗಳೂರು: ಕಟ್ಟಡದ 12ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ – vishwanews24

ಮಂಗಳೂರು: ಕಟ್ಟಡದ 12ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ ಮಂಗಳೂರು: ನಗರದ ಅತ್ತಾವರದಲ್ಲಿರುವ ಕಾಸ ಗ್ರ್ಯಾಂಡ್ ಕಟ್ಟಡದಲ್ಲಿ 12ನೇ ಮಹಡಿಯಿಂದ…

1 hour ago