Featured

ಪಡುಬಿದ್ರಿ : ಅಂತಾರಾಷ್ಟ್ರೀಯ ಮಾನ್ಯತೆ ಪಡೆದ ಬ್ಲೂ ಫ್ಲಾಗ್ ಬೀಚ್ ಉದ್ಘಾಟಿಸಿದ ಸಂಸದೆ ಶೋಭಾ ಕರಂದ್ಲಾಜೆ ; ಜಿಲ್ಲೆಯ ಪ್ರವಾಸೋದ್ಯಮದ ಅಭಿವೃದ್ಧಿಗಾಗಿ  2500 ಕೋಟಿ ರೂ -Vishwanews24

ಪಡುಬಿದ್ರಿ : ಅಂತಾರಾಷ್ಟ್ರೀಯ ಮಾನ್ಯತೆ ಪಡೆದ ಬ್ಲೂ ಫ್ಲಾಗ್ ಬೀಚ್ ಉದ್ಘಾಟಿಸಿದ ಸಂಸದೆ ಶೋಭಾ ಕರಂದ್ಲಾಜೆ ; ಜಿಲ್ಲೆಯ ಪ್ರವಾಸೋದ್ಯಮದ ಅಭಿವೃದ್ಧಿಗಾಗಿ  2500 ಕೋಟಿ ರೂ. -Vishwanews24

ಪಡುಬಿದ್ರಿ  : ಉಡುಪಿ ಜಿಲ್ಲೆಯಲ್ಲಿ ಪ್ರವಾಸೋದ್ಯಮದ ಅಭಿವೃದ್ಧಿ ಗಾಗಿ ಕೇಂದ್ರ ಸರಕಾರಕ್ಕೆ 2000ರಿಂದ 2500 ಕೋಟಿ ರೂ.ಗಳ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಸದಸ್ಯೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ಸೋಮವಾರ ಪಡುಬಿದ್ರಿಯ ಅಂತಾರಾಷ್ಟ್ರೀಯ ಬ್ಲೂ ಫ್ಲ್ಯಾಗ್ ಮಾನ್ಯತೆ ಪಡೆದ ಪಡುಬಿದ್ರಿ ಎಂಡ್‌ಪಾಯಿಂಟ್ ಕಡಲ ತೀರದಲ್ಲಿ ‘ನೀಲಿಧ್ವಜ’ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡುತಿದ್ದರು. ಈ ಬೀಚ್‌ನ್ನು ಕೇಂದ್ರ ಸರಕಾರದ ಎಂಟು ಕೋಟಿ ರೂ. ಹಾಗೂ ರಾಜ್ಯ ಸರಕಾರದ 2.68 ಕೋಟಿ ರೂ. ಅನುದಾನ ಸೇರಿದಂತೆ ಒಟ್ಟು 10.28 ಕೋಟಿ ರೂ.ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗಿದೆ ಎಂದರು.

ಪಡುಬಿದ್ರಿಯಿಂದ ಎಂಡ್‌ ಪಾಯಿಂಟ್‌ಗೆ ಸಂಪರ್ಕ ಕಲ್ಪಿಸುವ ರಸ್ತೆ ವಿಸ್ತರಣೆ, ಪಾರ್ಕಿಂಗ್ ವ್ಯವಸ್ಥೆ, ಸಮೀಪದ ದ್ವೀಪ ಅಭಿವೃದ್ಧಿಗಾಗಿ ಒಟ್ಟು 6 ಕೋಟಿ ರೂ. ಗಳ ಪ್ರಸ್ತಾವನೆಯನ್ನು ಈಗಾಗಲೇ ಸಲ್ಲಿಸಲಾಗಿದೆ ಎಂದು ಶೋಭಾ ಕರಂದ್ಲಾಜೆ ತಿಳಿಸಿದರು.

ಸಭಾಧ್ಯಕ್ಷತೆಯನ್ನು ವಹಿಸಿದ್ದ ಕಾಪು ಶಾಸಕ ಲಾಲಾಜಿ ಮೆಂಡನ್ ಮಾತನಾಡಿ, ಈ ಬೀಚ್‌ನಲ್ಲಿ ಮೂಲಭೂತ ಸೌಕರ್ಯಗಳಿಗೆ ಒತ್ತು ನೀಡುವ ಬಗ್ಗೆ ಯೋಜನೆ ಯನ್ನು ರೂಪಿಸಲಾಗಿದೆ. ಪರಿಸರ ಸ್ನೇಹಿಯಾಗಿ ಸ್ಥಳೀಯರಿಗೆ ಯಾವುದೇ ರೀತಿಯ ತೊಂದರೆಯಾಗದ ರೀತಿಯಲ್ಲಿ ಬೀಚ್‌ಗಳು ಇನ್ನಷ್ಟು ಅಭಿವೃದ್ಧಿ ಅಭಿವೃದ್ಧಿಯಾಗಬೇಕಿದೆ ಎಂದರು.

ಕಾರ್ಯಕ್ರಮದಲ್ಲಿ ಉಡುಪಿ ಶಾಸಕ ರಘುಪತಿ ಭಟ್, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ, ಮಂಗಳೂರಿನ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಉಡುಪಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರಬಾಬು, ಕರಾವಳಿ ಪ್ರವಾ ಸೋದ್ಯಮ ಸಂಘಟನೆಯ ಅಧ್ಯಕ್ಷ ಮನೋಹರ ಶೆಟ್ಟಿ, ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್, ಉಡುಪಿ ಜಿಪಂ ಕಾರ್ಯನಿರ್ವಹಣಾಧಿಕಾರಿ ಡಾ.ವೈ. ನವೀನ್ ಭಟ್, ಉಡುಪಿ ಜಿಲ್ಲಾ ಎಸ್‌ಪಿ ಎನ್. ವಿಷ್ಣುವರ್ಧನ್, ಕಾಪು ತಹಶೀಲ್ದಾರ್ ರಶ್ಮಿ ಕಿಶೋರ್, ಕೆಆರ್‌ಐಡಿಎಲ್‌ನ ಕಾರ್ಯಕಾರಿ ಅಭಿಯಂತರ ಕೃಷ್ಣ ಹೆಬ್ಸೂರ್, ಉಪ ಕೃಷಿ ನಿರ್ದೇಶಕ ಚಂದ್ರಶೇಖರ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.

ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಸೋಮಶೇಖರ್ ಬಿ.ಕೆ. ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ. ವಿಜಯೇಂದ್ರ ಕಾರ್ಯಕ್ರಮ ನಿರ್ವಹಿಸಿದರು. ಬ್ಲೂ ಫ್ಲ್ಯಾಗ್ ಬೀಚ್ ಪ್ರಬಂಧಕ ವಿಜಯ್ ಶೆಟ್ಟಿ ವಂದಿಸಿದರು.

Vishwa News 24

Recent Posts

ಉಡುಪಿ: ಅ. 11ರಿಂದ 20ರವರೆಗೆ ಕೆಎಸ್‌ಆರ್‌ಟಿಸಿಯಿಂದ ದಸರಾ ವಿಶೇಷ ಪ್ಯಾಕೇಜ್ ಪ್ರವಾಸ – vishwanews24

ಉಡುಪಿ: ಅ. 11ರಿಂದ 20ರವರೆಗೆ ಕೆಎಸ್‌ಆರ್‌ಟಿಸಿಯಿಂದ ದಸರಾ ವಿಶೇಷ ಪ್ಯಾಕೇಜ್ ಪ್ರವಾಸ ಉಡುಪಿ : ದಸರಾ ಹಬ್ಬದ ಪ್ರಯುಕ್ತ ಸಾರ್ವಜನಿಕರು…

20 minutes ago

ಅಪಘಾತದಲ್ಲಿ ಮೃತಪಟ್ಟ ಪುತ್ರನ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು – vishwanews24

ಅಪಘಾತದಲ್ಲಿ ಮೃತಪಟ್ಟ ಪುತ್ರನ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದ ಪೋಷಕರು ಹಾಸನ: ಹೊಳೆನರಸೀಪುರದ ಚಾಕೇನಹಳ್ಳಿ ಕಟ್ಟೆ ಗ್ರಾಮದಲ್ಲಿ ಅಪಘಾತದಿಂದ…

41 minutes ago

ಬೆಂಗಳೂರು: ಸಿಲಿಂಡರ್‌ ಸ್ಫೋಟ; ಒಂದೇ ಕುಟುಂಬದ 6 ಜನರಿಗೆ ಗಾಯ, ಇಬ್ಬರು ಗಂಭೀರ – vishwanews24

ಬೆಂಗಳೂರು: ಸಿಲಿಂಡರ್‌ ಸ್ಫೋಟ; ಒಂದೇ ಕುಟುಂಬದ 6 ಜನರಿಗೆ ಗಾಯ, ಇಬ್ಬರು ಗಂಭೀರ ಬೆಂಗಳೂರು: ನಾಯಂಡಹಳ್ಳಿಯ ವಿನಾಯಕ ಲೇಔಟ್‌ನಲ್ಲಿರುವ ಮನೆಯೊಂದರಲ್ಲಿ…

49 minutes ago

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ -vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…

1 day ago

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

2 days ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

2 days ago