ಪಡುಬಿದ್ರಿ : ಕಾಪು ತಾಲೂಕಿನ ನಡ್ಸಾಲು ಗ್ರಾಮದ ಕನ್ನಂಗಾರ್ ಎಂಬಲ್ಲಿ ಸರಕಾರದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಮಾಡಿದ್ದ ಸ್ಥಳಕ್ಕೆ ದಾಳಿ ಮಾಡಿದ ಅಧಿಕಾರಿಗಳು 2,87,606 ರೂ. ಮೌಲ್ಯದ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ.
ಈ ಬಗ್ಗೆ ಖಚಿತ ಮಾಹಿತಿ ಪಡೆದ ಕಾಪುವಿನ ಆಹಾರ ನಿರೀಕ್ಷಕರಾದ ಟಿ.ಲೀಲಾನಂದ ಅವರು, ಕಾಪು ಪೊಲೀಸರ ಸಹಕಾರದೊಂಡಿಗೆ ನಡ್ಸಾಲು ಗ್ರಾಮದ ಕನ್ನಂಗಾರ್ ಎಂಬಲ್ಲಿನ ಮೊಹಮದ್ ಶಫೀಕ್ ಎಂಬವರ ಮನೆಗೆ ದಾಳಿ ನಡೆಸಿ ಪರಿಶೀಲಿಸಿದಾಗ ಮನೆಯ ಹೊರಾಂಗಣ ಮತ್ತು ಎದುರು ಇರುವ ಗೋದಾಮಿನಲ್ಲಿ 2,87,606 ರೂ. ಮೌಲ್ಯದ 13,073 ಕೆ.ಜಿ. ಅನ್ನಭಾಗ್ಯ ಯೋಜನೆಯಡಿ ಸಾರ್ವಜನಿಕರಿಗೆ ವಿತರಿಸುವ ಪಡಿತರ ಅಕ್ಕಿ ಪತ್ತೆಯಾಗಿದೆ.
ಈ ವೇಳೆ ಪೊಲೀಸರು ಹಾಗೂ ಅಧಿಕಾರಿಗಳು ಪತ್ತೆಯಾದ ಅಕ್ಕಿ ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…