Featured

ಪಡುಬಿದ್ರಿ: ಅದಾನಿ ಸಿಎಸ್ಆರ್ ಅನುದಾನದಡಿ  ಸ್ಯಾನಿಟರ್ ಪ್ಯಾಡ್ ಇನ್ಸಿರಿನೇಟರ್ ಘಟಕ ಲೋಕಾರ್ಪಣೆ – vishwanews24

ಪಡುಬಿದ್ರಿ: ಅದಾನಿ ಸಿಎಸ್ಆರ್ ಅನುದಾನದಡಿ  ಸ್ಯಾನಿಟರ್ ಪ್ಯಾಡ್ ಇನ್ಸಿರಿನೇಟರ್ ಘಟಕ ಲೋಕಾರ್ಪಣೆ

ಪಡುಬಿದ್ರಿ: ಎಲ್ಲೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಅದಾನಿ ಸಮೂಹದ ಅದಾನಿ ಪವರ್ ಲಿಮಿಟೆಡ್‌ನ ಸಿಎಸ್ಆರ್ ಅನುದಾನದಡಿ ಪಡುಬಿದ್ರಿ ಗ್ರಾಮದಲ್ಲಿ ರೂ. 15 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ಸ್ಯಾನಿಟರ್ ಪ್ಯಾಡ್ ಇನ್ಸಿರಿನೇಟರ್ ಘಟಕವನ್ನು ಬುಧವಾರ ಉದ್ಘಾಟಿಸಿ ಲೋಕಾರ್ಪಣೆ ಮಾಡಲಾಯಿತು. ಅದಾನಿ ಫೌಂಡೇಷನ್‌ನ ಸಿಎಸ್ಆರ್ ಯೋಜನೆಗಳಲ್ಲಿ ಒಂದಾದ ಗ್ರಾಮೀಣ ಮೂಲಭೂತ ಸೌಕರ್ಯ ಯೋಜನೆಯಡಿ ಪಡುಬಿದ್ರಿ ಗ್ರಾಮದಲ್ಲಿ ಗ್ರಾಮ ಪಂಚಾಯತಿಯು 2023-24ನೇ ವಾರ್ಷಿಕ ಸಾಲಿನಲ್ಲಿ ನೀಡಿದ ಕ್ರಿಯಾಯೋಜನೆ ಮೇರೆಗೆ ನಿರ್ಮಿಸಲಾಯಿತು. ಘಟಕವನ್ನು ಅದಾನಿ ಸಮೂಹದ ಅಧ್ಯಕ್ಷ ಹಾಗೂ ಕಾರ್ಯನಿರ್ವಾಹಕ ನಿರ್ದೇಶಕ ಕಿಶೋರ್ ಆಳ್ವ, ಪಡುಬಿದ್ರಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಕಿಶೋರ್ ಆಳ್ವ, ಸ್ಯಾನಿಟರಿ ಪ್ಯಾಡ್‌ಗಳನ್ನು ಸುಡುವ ಯಂತ್ರವನ್ನು ಸ್ಥಾಪಿಸಲು ಅದಾನಿ ಫೌಂಡೇಶನ್ ಈ ಯೋಜನೆಯನ್ನು ಅನುಷ್ಟಾನಕ್ಕೆ ತಂದಿದೆ. ಇದೊಂದು ಉತ್ತಮ ಯೋಜನೆ. ಈ ಘಟಕದಲ್ಲಿ ಘಂಟೆಗೆ ಸುಮಾರು 60 ಕಿಲೋ ಸ್ಯಾನಿಟರ್ ಪ್ಯಾಡ್‌ಗಳನ್ನು ದಹಿಸಬಹುದು. ಗ್ರಾಮೀಣ ಪ್ರದೇಶದಲ್ಲಿ ಸ್ಯಾನಿಟರಿ ನ್ಯಾಪ್ಟಿನ್ ಇನ್ನಿನರೇಟರ್ ಯಂತ್ರಗಳನ್ನು ಅಳವಡಿಸುವುದರಿಂದ ಉತ್ತಮ ನೈರ್ಮಲ್ಯ ಮತ್ತು ತ್ಯಾಜ್ಯ ನಿರ್ವಹಣೆಯನ್ನು ಉತ್ತೇಜಿ ಸಬಹುದು. ಬಳಸಿದ ಸ್ಯಾನಿಟರಿ ನ್ಯಾಪಿನ್ ಗಳನ್ನು ತೆರೆದ ಸ್ಥಳಗಳಲ್ಲಿ ಅಥವಾ ಅನೈರ್ಮಲ್ಯದ ರೀತಿಯಲ್ಲಿ ವಿಲೇವಾರಿ ಮಾಡುವುದರಿಂದ ಉಂಟಾಗುವ ಪರಿಸರ ಮತ್ತು ಆರೋಗ್ಯದ ಅಪಾಯಗಳನ್ನು ತಪ್ಪಿಸಲು ಈ ಘಟಕ ಸಹಾಯ ಮಾಡುತ್ತದೆ ಎಂದರು.
ವ್ಯಾಪಾರ ಕೇಂದ್ರವಾಗಿ ಪರಿವರ್ತನೆ: ಕಾಪು ತಾಲೂಕಿನ ಬೃಹತ್ ಗಾತ್ರದ ಪಾಂಚಾಯತ್ ಆಗಿರುವ ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹಲವಾರು ಕೈಗಾರಿಕಾ ಪ್ರದೇಶಗಳು ಸ್ಥಾಪಿತವಾಗಿದ್ದು, ಒಂದು ಸುಂದರವಾದ ವ್ಯಾಪಾರ ಕೇಂದ್ರವಾಗಿ ಪರಿವರ್ತನೆ ಗೊಂಡಿದೆ. ಸುತ್ತಮುತ್ತಲ ಗ್ರಾಮಗಳು ಅಭಿವೃದ್ಧಿ ಗೊಂಡಿದೆ ಎಂದು ಆಳ್ವ ಹರ್ಷವ್ಯಕ್ತಪಡಿಸಿದರು.

ಗ್ಯಾಸ್ ವಿತರಣೆಗೆ ಮೊದಲ ಆದ್ಯತೆ: ಅದಾನಿ ಸಮೂಹವು ಪಡುಬಿದ್ರಿ ಗ್ರಾಮ ಪಂಚಾಯಿಯನ್ನು ತನ್ನ ಸಿಟಿ ಗ್ಯಾಸ್ ವಿತರಣೆ ಯೋಜಿನಯಡಿ ಪ್ರತಿಯೊಂದು ಮನೆಗೂ ಗ್ಯಾಸ್ ವಿತರಣೆಗೆ ಮೊದಲ ಆದ್ಯತೆಯಾಗಿ ಆಯ್ಕೆ ಮಾಡಿದೆ ಎಂದು ಆಳ್ವ ಅವರು ಈ ಸಂದರ್ಭದಲ್ಲಿ ತಿಳಿಸಿದರು.
ಪಡುಬಿದ್ರಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ಮಾತನಾಡಿ, ಗ್ರಾಮಸ್ಥರ ಬೇಡಿಕೆ ಮೇರೆಗೆ ಒಂದು ಪಂಚಾಯತ್ ವ್ಯಾಪ್ತಿಯಲ್ಲಿ ಪರಿಸರ ದೃಷ್ಟಿಕೋನದಿಂ ದ ಸ್ಯಾನಿಟರಿ ಸುಡುವಯಂತ್ರವನ್ನು ಸ್ಥಾಪಿಸಬೇಕೆಂದು ಮನವಿ ಮಾಡಿದ್ದು, ಅದಾನಿ ಸಂಸ್ಥೆಯ ಸಿಎಸ್ಆರ್ ಯೋಜನೆಯಿಂದ ಆ ಬೇಡಿಕೆ ಈಡೇಡಿರಿಸಿರುವುದು ಸಂತಸ ತಂದಿದೆ ಎಂದರು.

ಪಡುಬಿದ್ರಿ ಪಂಚಾಯಿತಿ ಉಪಾಧ್ಯಕ್ಷ ಹೇಮಚಂದ್ರ, ಸದಸ್ಯರುಗಳಾದ ನವೀನ್ ಎನ್. ಶೆಟ್ಟಿ, ಗಣೇಶ್ ಕೋಟ್ಯಾನ್, ಶೋಭಾ ಶೆಟ್ಟಿ, ಅಶೋಕ್ ಪೂಜಾರಿ, ರಮೀಝ್ ಹುಸೈನ್, ನಿಯಾಝ್, ಸುನಂದ, ವಿದ್ಯಾಶ್ರೀ, ಜ್ಯೋತಿ ಮೆನನ್, ಸಂದೇಶ್ ಶೆಟ್ಟಿ, ಶಾಫಿ, ಅದಾನಿ ಪವರ್ ಲಿಮಿಟೆಡ್‌ನ ಏಜಿಎಂ ರವಿ ಆರ್. ಜೀರೆ, ಅದಾನಿ ಫೌಂಡೇಷನ್‌ನ ಅನುದೀಪ್ ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ – vishwanews24

ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…

18 hours ago

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ; ಆರೋಪಿಗಾಗಿ ಶೋಧ- vishwanews24

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…

18 hours ago

ಆರು ದಿನಗಳ ನಂತರ ಅಮರನಾಥ ಯಾತ್ರೆ ಪುನರಾರಂಭ -vishwanews24

ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…

19 hours ago

BREAKING NEWS : ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ – vishwanews24

 ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…

19 hours ago

ಕಾಮನ್‌ವೆಲ್ತ್ ಗೇಮ್ಸ್ 2026 : ಪ್ಯಾರಾ ಪವರ್‌ ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಝಂದು ಕುಮಾರ್ – vishwanews24

ಕಾಮನ್‌ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್‌: ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…

20 hours ago

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ – vishwanews24

ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…

20 hours ago