ಪಡುಬಿದ್ರಿ: ಅಪ್ರಾಪ್ತ ವಯಸ್ಕ ಬಾಲಕಿ ಮೇಲೆ ಅತ್ಯಾಚಾರ ಹಾಗೂ ಲೈಂಗಿಕ ಕಿರುಕುಳ ನೀಡಿದ್ದ ಹೆಜಮಾಡಿ ಯುವಕನೋರ್ವನನ್ನು ಪೋಕ್ಸೊ ಪ್ರಕರಣದಡಿ ಪಡುಬಿದ್ರಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಹೆಜಮಾಡಿ ಆಲಡೆ ಬಳಿಯ ನಿವಾಸಿ ಅಬ್ದುಲ್ ರೆಹಮಾನ್ ಅವರ ಮಗ ಯಾಸಿನ್ (19) ಎಂದು ಗುರುತಿಸಲಾಗಿದೆ. ಆರೋಪಿಯನ್ನು ಉಡುಪಿಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆರೋಪಿಗೆ ಸಹಕಾರ ನೀಡಿದ್ದ ಅಪ್ರಾಪ್ತ ವಯಸ್ಕ ಬಾಲಕನನ್ನೂ ವಶಪಡಿಸಿಕೊಂಡಿರುವ ಪೊಲೀಸರು ಆತನನ್ನು ಬಾಲಮಂದಿರಕ್ಕೆ ಸೇರಿಸಿದ್ದಾರೆ.
ಆರೋಪಿ ಯಾಸಿನ್, ಎರಡು ಬಾರಿ ಅಪಾರ್ಟ್‌ಮೆಂಟ್‌ಗೆ ಕರೆತಂದು ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ. ಬಾಲಕಿಯನ್ನು ಬಸ್‌ನಲ್ಲಿ ಬರಲು ಹೇಳಿದ್ದ ಆರೋಪಿಯು ಬಸ್ಸಿಳಿದು ರಿಕ್ಷಾ ಮೂಲಕ ಹೆಜಮಾಡಿಯ ತಾನು ವಾಸವಿರುವ ಆಪಾರ್ಟ್‌ಮೆಂಟ್‌ಗೆ ಕರೆಸಿದ್ದನು. ಬಾಲಕಿಯನ್ನು ಮೇಲ್ಮಹಡಿಯ ಟೆರೇಸ್‌ನಲ್ಲಿರಿಸಿ ಲೈಂಗಿಕ ಕಿರುಕುಳ ನೀಡಿದ್ದ. ಈ ಕುರಿತಾಗಿ ಸ್ಥಳೀಯರು ಅನುಮಾನ ದಿಂದ ಪಡುಬಿದ್ರಿ ಪೊಲೀಸರಿಗೆ ಮಾಹಿತಿಯನ್ನು ನೀಡಿದ್ದಾರೆ. ಪೊಲೀಸರು ಸಕಾಲದಲ್ಲಿ ದಾಳಿ ನಡೆಸಿ ಬಾಲಕಿಯನ್ನು ರಕ್ಷಿಸಿದ್ದಾರೆ. ವಿಚಾರಣೆ ನಡೆಸಿದ ಬಳಿಕ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿ ವಿರುದ್ಧ ಬಾಲಕಿಯ ತಂದೆ ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…