Missing red rubber stamp vector isolated
ಪಡುಬಿದ್ರಿ: ಕುಡಿತದ ಚಟ ಹೊಂದಿದ್ದ ಇನ್ನಾ ಗ್ರಾಮದ ಗಾಂದೊಟ್ಯ ಹೌಸ್ ನಿವಾಸಿ ಸುಜಿತ್ ಎಸ್. ಶೆಟ್ಟಿ (28) ಕಾಂಜರಕಟ್ಟೆಯ ಬಾರಿನಲ್ಲಿ ಹಿಡಿದಿಟ್ಟುಕೊಂಡಿರುವ ತನ್ನ ಪರ್ಸ್ ಹಾಗೂ ಎಟಿಎಂ ಕಾರ್ಡ್‌ಗಳನ್ನು ತರುವುದಾಗಿ ಮನೆಯಲ್ಲಿ ತಿಳಿಸಿ ಜೂ. 1ರಂದು ಹೊರಗೆ ಹೋದವರು ಹಿಂದಿರುಗಿ ಮನೆಗೆ ಬಾರದೇ ನಾಪತ್ತೆಯಾಗಿರುವುದಾಗಿ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಪ್ರಕರಣ ದಾಖಲಾಗಿದೆ.
ಜೂ. 3ರಂದು ರಾತ್ರಿ ಈತನನ್ನು ರಿಕ್ಷಾ ಚಾಲಕರೊಬ್ಬರು ನೋಡಿದ್ದು ಮನೆಗೆ ಬಿಡುವೆನೆಂದರೂ ಬಾರದೇ ತನಗೆ ಬೇರೆ ವಾಹನವು ಬರುವುದಾಗಿ ಸುಜಿತ್ ತಿಳಿಸಿದ್ದರೆಂದೂ ಪೊಲೀಸರಿಗಿತ್ತ ದೂರಿನಲ್ಲಿ ತಿಳಿಸಲಾಗಿದೆ. ಸಂಬಂಧಿಕರಲ್ಲಿಯೂ ವಿಚಾರಿಸಿದ ಬಳಿಕ ಇದೀಗ ಪೊಲೀಸರಿಗೆ ದೂರು ನೀಡಲಾಗಿದೆ.
5.5 ಅಡಿ ಎತ್ತರ, ದೃಢಕಾಯ, ಬಿಳಿ ಮೈಬಣ್ಣ, ಕೈಯಲ್ಲಿ ಟ್ಯಾಟು ಇದ್ದು ತುಳು, ಕನ್ನಡ, ಹಿಂದಿ, ಇಂಗ್ಲೀಷ್ ಮಾತಾಡಬಲ್ಲವರಾಗಿದ್ದಾರೆ. ಕಪ್ಪು ಟಿ ಶರ್ಟ್ ಹಾಗೂ ಕಪ್ಪು ಪ್ಯಾಂಟು ಧರಿಸಿರುವ ಸುಜಿತ್ ಶೆಟ್ಟಿ ಕುರಿತಾಗಿ ಯಾರಿಗಾದರೂ ತಿಳಿದುಬಂದಲ್ಲಿ ಪಡುಬಿದ್ರಿ ಪೊಲೀಸ್ ಠಾಣೆ (08202555452)ಯನ್ನು ಸಂಪರ್ಕಿಸಬೇಕಾಗಿ ಪೊಲೀಸರು ತಿಳಿಸಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…