ಪಡುಬಿದ್ರಿ :ಎಕ್ಸ್ ಪ್ರೆಸ್ ಬಸ್ ಚಾಲಕ ಹಾರ್ನ್ ಹಾಕಿದ ಕಾರಣಕ್ಕೆ ಕಾರು ಚಾಲಕ ಬಸ್ಸನ್ನು ತಡೆದು ಚಾಲಕನಿಗೆ ಹಲ್ಲೆಗೈದ ಘಟನೆ ಇಂದು ಬೆಳಗ್ಗೆ ಪಡುಬಿದ್ರಿ ಪೇಟೆಯಲ್ಲಿ ನಡೆದಿದೆ.
ಪಡುಬಿದ್ರಿ ನಿವಾಸಿ ಬಸ್ ಚಾಲಕ ಶೈಲು ಯಾನೆ ಶೈಲೇಶ್ ಘಟನೆಯಲ್ಲಿ ಮುಖದ ಭಾಗಕ್ಕೆ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮೂಲ್ಕಿ ಕೊಲ್ನಾಡ್ ಪರಿಸರದ ಯುವಕ ಕೃತ್ಯ ಎಸಗಿದವನು ಎಂದು ಹೇಳಲಾಗುತ್ತಿದೆ. ಮಾಸ್ಟರ್ ಹೆಸರಿನ ಎಕ್ಸ್ ಪ್ರೆಸ್ ಬಸ್ ಉಡುಪಿಯಿಂದ ಮಂಗಳೂರು ಕಡೆಗೆ ಬರುತ್ತಿರುವಾಗ ಎರ್ಮಾಳ್ ಸಮೀಪ ಕಾರ್ ಚಾಲಕನಿಗೆ ಸೈಡ್ ಕೊಡುವಂತೆ ಹಾರ್ನ್ ಹಾಕಿ ಓವರ್ ಟೇಕ್ ಮಾಡಿದ್ದ, ಬಳಿಕ ಹಿಂಬಾಲಿಸಿಕೊಂಡು ಬಂದ ಕಾರು ಚಾಲಕ ಬಸ್ಸನ್ನು ತಡೆದು ಚಾಲಕ ಶೈಲು ಎಂಬವರ ಮೇಲೆ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.
ಈ ಬಗ್ಗೆ ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…