Featured

ಪಡುಬಿದ್ರಿ : ಎಲ್ಲೂರು, ಸಾಂತೂರಿನ 942 ಎಕ್ರೆಯಲ್ಲಿ ಹೊಸ ಕೈಗಾರಿಕಾ ಪ್ರದೇಶಗಳ ವಿಸ್ತರಣಾ ಪ್ರಕ್ರಿಯೆ : ಉಡುಪಿ ಡಿಸಿ ಸ್ವರೂಪ ಟಿ.ಕೆ – vishwanews24

ಪಡುಬಿದ್ರಿ : ಎಲ್ಲೂರು, ಸಾಂತೂರಿನ 942 ಎಕ್ರೆಯಲ್ಲಿ ಹೊಸ ಕೈಗಾರಿಕಾ ಪ್ರದೇಶ: ಉಡುಪಿ ಡಿಸಿ ಸ್ವರೂಪ ಟಿ.ಕೆ

ಉಡುಪಿ,: ಕಾಪು ತಾಲೂಕು ಪಡುಬಿದ್ರಿ ಬಳಿಯ ಎಲ್ಲೂರು ಹಾಗೂ ಸಾಂತೂರುಗಳ ಸುಮಾರು 941.98 ಎಕರೆ ಪ್ರದೇಶದಲ್ಲಿ ಹೊಸ ಕೈಗಾರಿಕೆ ಪ್ರದೇಶಗಳ ವಿಸ್ತರಣಾ ಪ್ರಕ್ರಿಯೆ ನಡೆಯುತ್ತಿದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಹೇಳಿದ್ದಾರೆ.

ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ  ನಡೆದ ಕೈಗಾರಿಕಾ ಸ್ಪಂದನ ಸಮಿತಿ ಸಭೆ, ಜಿಲ್ಲಾ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ, ರಫ್ತು ಉತ್ತೇಜನ ಸಮಿತಿ ಸಭೆ, ಪ್ರಧಾನಮಂತ್ರಿಯವರ ಉದ್ಯೋಗ ಸೃಜನ ಯೋಜನೆಯ ಡಿ.ಎಲ್.ಎಂ.ಸಿ ಸಭೆ ಹಾಗೂ ಪಿ.ಎಂ.ವಿಶ್ವಕರ್ಮ ಯೋಜನೆಯ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಇದೇ ವೇಳೆ ಹೊಸದಾಗಿ ಕೈಗಾರಿಕಾ ಪ್ರದೇಶ ನಿರ್ಮಾಣಗೊಳ್ಳುವ ಹೆಬ್ರಿ ತಾಲೂಕು ಶಿವಪುರದಲ್ಲಿ 74.84 ಎಕರೆ, ಕೆರೆಬೆಟ್ಟುನಲ್ಲಿ 38.75 ಎಕರೆ, ನಿಟ್ಟೆಯಲ್ಲಿ 50.42 ಎಕರೆ ಸೇರಿದಂತೆ ಒಟ್ಟು 165.98 ಎಕರೆ ಜಮೀನಿನ ಗಡಿ ಗುರುತಿಸುವ ಕಾರ್ಯವನ್ನು ಆದ್ಯತೆ ಮೇಲೆ ಕೈಗೊಳ್ಳಬೇಕು ಎಂದು ಅವರು ಕೆಐಎಡಿಬಿ ಅಭಿಯಂತರರಿಗೆ ಸೂಚನೆಗಳನ್ನು ನೀಡಿದರು.

ಕೈಗಾರಿಕೆಗಳ ಸ್ಥಾಪನೆಗೆ ನಿವೇಶನ ಮಂಜೂರಾಗಿರುವ ಕೈಗಾರಿಕೋದ್ಯಮಿ ಗಳು ಘಟಕಗಳನ್ನು ಕೂಡಲೇ ಸ್ಥಾಪಿಸಬೇಕು.ಅವರಿಗೆ ಹೆಚ್ಚುವರಿ ಕಾಲಾವಕಾಶ ವನ್ನು ಕಲ್ಪಿಸಲಾಗುವುದಿಲ್ಲ. ಘಟಕ ಪ್ರಾರಂಭಿಸಲಿದ್ದರೆ ನಿವೇಶನ ವನ್ನು ಮರುಹಂಚಿಕೆ ಮಾಡಲಾಗುವುದು ಎಂದು ಸ್ವರೂಪ ಟಿ.ಕೆ ತಿಳಿಸಿದರು.

ಘಟಕ ಸ್ಥಾಪಿಸಿ: ಜಿಲ್ಲೆಯಲ್ಲಿ ಹೊಸ ಕೈಗಾರಿಕಾ ಘಟಕಗಳನ್ನು ಪ್ರಾರಂಭಿಸಲು ನಿವೇಶನವನ್ನು ನೀಡಿದ್ದರೂ ಸಹ ಕೈಗಾರಿಕಾ ಯೋಜನೆಗಳ ಅನುಷ್ಠಾನವನ್ನು ಕಾಲಮಿತಿ ಯೊಳಗೆ ಅನೇಕರು ಪ್ರಾರಂಭಿಸುತ್ತಿಲ್ಲ. ಘಟಕಗಳ ಸ್ಥಾಪನೆಗೆ ಸಮರ್ಪಕ ಕಾರಣಗಳು ಕಂಡುಬರದೇ ಇದ್ದಲ್ಲಿ ಅಂತಹ ನಿವೇಶನಗಳನ್ನು ಕೈಗಾರಿಕೆ ಪ್ರಾರಂಭಿಸಲು ನಿವೇಶನ ಕೋರಿ ಹೊಸದಾಗಿ ಅರ್ಜಿ ಸಲ್ಲಿಸಿರುವ ಇತರರಿಗೆ ಮರು ಹಂಚಿಕೆ ಮಾಡಲು ಕ್ರಮ ವಹಿಸಬೇಕೆಂದು ಅವರು ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೆಳಪು ಕೈಗಾರಿಕಾ ಪ್ರದೇಶದ ಸಂಪರ್ಕ ರಸ್ತೆ ವಿಸ್ತರಣೆಗೆ ಅಗತ್ಯವಿರುವ ಭೂಮಿಯ ಭೂಸ್ವಾಧೀನ ಪ್ರಕ್ರಿಯೆ ಆದ್ಯತೆಯ ಮೇಲೆ ಕೈಗೊಂಡು ರಸ್ತೆ ಕಾಮಗಾರಿಯನ್ನು ಅಭಿವೃದ್ಧಿಪಡಿಸಬೇಕು ಎಂದ ಜಿಲ್ಲಾಧಿಕಾರಿಗಳು, ಮಿಯ್ಯಾರು ಗ್ರಾಮದ ನೆಲ್ಲಿಗುಡ್ಡೆಯ ಕೈಗಾರಿಕಾ ಪ್ರದೇಶದ ನಿವೇಶನಗಳ ನಮೂನೆ 9/11 ದಾಖಲೆಗಳನ್ನು ಈಗಾಗಲೇ 16 ಘಟಕಗಳಿಗೆ ನೀಡಿದ್ದು, ಬಾಕಿ ಉಳಿದ 8 ಘಟಕಗಳಿಗೆ ಕೂಡಲೇ ಅವುಗಳನ್ನು ಮಾಡಿಕೊಡುವಂತೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ನಿರ್ದೇಶಿಸಿದರು.

ಕಾರ್ಕಳ ತಾಲೂಕಿನ ಸಾಣೂರಿನಲ್ಲಿ ಕೈಗಾರಿಕಾ ಪ್ರದೇಶಗಳಿಗೆ ವಿದ್ಯುತ್ ಸರಬರಾಜಿಗೆ ಅಳವಡಿಸಿರುವ 100 ಕೆ.ವಿ. ವಿದ್ಯುತ್ ಪರಿವರ್ತಕವನ್ನು 250 ಕೆ.ವಿ.ಗೆ ಹೆಚ್ಚಿಸುವ ಟ್ರಾನ್ಸ್‌ಫಾರ್ಮ್ ಅಳವಡಿಸುವ ಕಾರ್ಯವನ್ನು ಮುಂದಿನ ಒಂದು ವಾರದ ಒಳಗೆ ಕೈಗೊಳ್ಳಬೇಕೆಂದು ಮೆಸ್ಕಾಂ ಇಲಾಖೆಯ ಅಭಿಯಂತರರಿಗೆ ಅವರು ಸೂಚಿಸಿದರು.

ವಿಶ್ವಕರ್ಮ ಯೋಜನೆ: ಕೌಶಲ್ಯಾಭಿವೃದ್ಧಿ ಇಲಾಖೆಯಿಂದ ಪಿ.ಎಂ ವಿಶ್ವಕರ್ಮ ಯೋಜನೆಯ 6,274 ಫಲಾನುಭವಿ ಗಳಿಗೆ ಈಗಾಗಲೇ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಾಗಿದೆ. 3,916 ಫಲಾನುಭವಿಗಳಿಗೆ ಆರ್ಥಿಕ ನೆರವು ನೀಡಲು ಸಾಲ ಸೌಲಭ್ಯ ಮಂಜೂರಾಗಿದ್ದು, 3,573 ಫಲಾನುಭವಿಗಳ ಖಾತೆಗೆ ಆರ್ಥಿಕ ಸಹಾಯಧನವನ್ನು ಪಾವತಿಸಲಾಗಿದೆ ಎಂದು ವಿವರಿಸಿದ ಡಿಸಿ, ಈ ಯೋಜನೆಯಡಿ ಆಯ್ಕೆಯಾದವರಿಗೆ ಕೌಶಲ್ಯ ತರಬೇತಿಗಳನ್ನು ಕೌಶಲ್ಯಾಭಿವೃದ್ಧಿ ಇಲಾಖೆ ವತಿಯಿಂದ ನೀಡುವ ಜೊತೆಗೆ ಬ್ಯಾಂಕ್‌ಗಳು ಆರ್ಥಿಕ ಸೌಲಭ್ಯವನ್ನು ಸಹ ಒದಗಿಸಬೇಕು ಎಂದರು.

ಸಭೆಯಲ್ಲಿ ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ್ ನಾಯಕ್, ಸಣ್ಣ ಕೈಗಾರಿಕಾ ಸಂಘದ ಜಿಲ್ಲಾ ಅಧ್ಯಕ್ಷ ವಸಂತ ಕಿಣಿ, ಜಿಲ್ಲಾ ಕೈಗಾರಿಕಾ ಕೇಂದ್ರದ ಉಪನಿರ್ದೇಶಕ ಸೀತಾರಾಮ ಶೆಟ್ಟಿ, ನಗರಸಭೆ ಆಯುಕ್ತ ಮಂಹಾತೇಶ ಹಂಗರಗಿ, ಖಾಸಿಯಾ ಪ್ರತಿನಿಧಿ ಹರೀಶ್ ಕುಂದರ್, ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು, ಜಿಲ್ಲೆಯ ಸಣ್ಣ ಕೈಗಾರಿಕಾ ಉದ್ದಿಮೆದಾರರು, ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

‘ಜಿಲ್ಲೆಯಲ್ಲಿ ರಫ್ತು ಉದ್ಯಮವನ್ನು ಉತ್ತೇಜಿಸಲು ಅಗತ್ಯವಿರುವ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವುದರೊಂದಿಗೆ ರಫ್ತನ್ನು ಹೆಚ್ಚಿಸಲು ಸಹ ಕ್ರಮಕೈಗೊಳ್ಳಬೇಕು. ಮರೈನ್ ಪ್ರೊಡಕ್ಟ್ (ಸಮುದ್ರ ಉತ್ಪನ್ನ) ಗಳ ರಫ್ತಿಗೆ ಇರುವ ಸಮಸ್ಯೆಗಳನ್ನು ಪರಿಹರಿಸಲು ಸೆಂಟ್ರಲೈಸ್ಡ್ ಸೀ ಫುಡ್ ಪಾರ್ಕ್‌ಗಳ ನಿರ್ಮಾಣ ಹಾಗೂ ಎಕ್ಸ್‌ಪೋರ್ಟ್ ಇನ್ಸ್‌ಪೆಕ್ಷನ್ ಏಜೆನ್ಸಿಗಳನ್ನು ಹೆಚ್ಚುವರಿಯಾಗಿ ನೇಮಿಸಲು ಕ್ರಮವಹಿಸಬೇಕು.’

-ಸ್ವರೂಪ ಟಿ.ಕೆ., ಜಿಲ್ಲಾಧಿಕಾರಿ

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

12 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

13 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

13 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

14 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

15 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

15 hours ago