ಪಡುಬಿದ್ರಿ: ಕಂಟೈನರ್ ಲಾರಿಯನ್ನು ಅದರ ಚಾಲಕ ನಿರ್ಲಕ್ಷ್ಯದಿಂದ ಹೆದ್ದಾರಿಯಲ್ಲೇ ನಿಲ್ಲಿಸಿದ ಕಾರಣ ಮಂಗಳವಾರ ಸಂಜೆಯ ವೇಳೆ ಸುರಿಯುತ್ತಿದ್ದ ಮಳೆ ನಡುವೆ ಕೊಲ್ಲೂರಿನಿಂದ ಮಂಗಳೂರಿನತ್ತ ಸಾಗುತ್ತಿದ್ದ ಖಾಸಗಿ ತಡೆರಹಿತ ಬಸ್ಸೊಂದು ಕಂಟೈನರ್ ಹಿಂಬದಿಗೆ ಢಿಕ್ಕಿಯಾದ ಪರಿಣಾಮ ಬಸ್ಸಲ್ಲಿ ಪ್ರಯಾಣಿಸುತ್ತಿದ್ದ ಸುಮಾರು 20 ಮಂದಿಗೆ ಗಾಯಗಳಾಗಿವೆ. ಓರ್ವರಿಗೆ ಮೂಳೆ ಮುರಿತವುಂಟಾಗಿದ್ದು ಎಲ್ಲರೂ ಮುಕ್ಕದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ.
ಮಳೆಗಾಲದಲ್ಲಿ ತೀರಾ ಅಪಾಯಕಾರಿ ಎನಿಸಿರುವ ಹೆಜಮಾಡಿಯ ಬಿಟ್ಟು ದಾಭಾದೆದುರಿನ ರಾಷ್ಟ್ರೀಯ ಹೆದ್ದಾರಿ 66ರ ತಿರುವೊಂದರಲ್ಲಿ ಈ ಅಪಘಾತವು ಸಂಭವಿಸಿದೆ.
ಉಡುಪಿ-ಮಂಗಳೂರು ದ್ವಿಪಥ ಹೆದ್ದಾರಿಯಲ್ಲಿ ರಸ್ತೆಯ ಎಡಭಾಗದಲ್ಲೇ ಚಲಿಸುತ್ತಿದ್ದ ಬಸ್ಸಿನ ಬಲಭಾಗದಲ್ಲೂ ಈ ಅಪಘಾತವು ಸಂಭವಿಸಿದ ವೇಳೆ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಇತರೇ ವಾಹನಗಳಿದ್ದವು. ಹಾಗಾಗಿ ಕಂಟೈನರ್ ಲಾರಿ ಚಾಲಕನು ಯಾವುದೇ ಮುನ್ಸೂಚನೆಗಳಿಲ್ಲದೇ ನಿಲ್ಲಿಸಿದಾಗ ಈ ಘಟನೆಯು ಸಂಭವಿಸಿದೆ.
ಹೆದ್ದಾರಿಯಿಂದ ರಸ್ತೆ ಬದಿಗೆ ಸರಿಸದೇ ಹೆದ್ದಾರಿಯಲ್ಲೇ ಲಾರಿಯನ್ನು ನಿಲ್ಲಿಸಿದ್ದರಿಂದ ಹಿಂಬದಿಯಲ್ಲಿದ್ದ ಬಸ್ಸನ್ನು ನಿಲ್ಲಿಸಲು ಬ್ರೇಕ್ ಹಾಕಿದಾಗಲೂ ಮಳೆಗೆ ಬಸ್ಸು ನಿಯಂತ್ರಣಕ್ಕೆ ಬಂದಿರಲಿಲ್ಲ. ತನ್ನ ಬಲಗಡೆಗೆ ತೆಗೆದುಕೊಳ್ಳಲೂ ಆಗದ ಸ್ಥಿತಿಯಲ್ಲಿ ಬಸ್ಸು ಕಂಟೈನರ್ ಹಿಂಬದಿಗೆ ಢಿಕ್ಕಿಯಾಗಿದೆ.
ಸ್ಥಳಕ್ಕೆ ಪಡುಬಿದ್ರಿ ಠಾಣಾ ಪಿಎಸ್‌ಐ ಪ್ರಸನ್ನ ಹಾಗೂ ಸಿಬಂದಿಗಳು ಭೇಟಿ ನೀಡಿದ್ದಾರೆ. ಕಂಟೈನರ್ ಚಾಲಕನ ವಿರುದ್ಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣವು ದಾಖಲಾಗಿದೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…