ಕಾಪು : ಕಾಪು ವಿಧಾನಸಭಾ ಕ್ಷೇತ್ರದ ಪಡುಬಿದ್ರಿ ಗ್ರಾಪಂ ವ್ಯಾಪ್ತಿಯ ನಡಿಪಟ್ನದಲ್ಲಿ ಭಾಗದಲ್ಲಿ ಕಡಲ್ಕೊರೆತ ಉಂಟಾದ ಪ್ರದೇಶಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಕಾಪು ತಹಶೀಲ್ದಾರ್ ಸೇರಿದಂತೆ ಇಲಾಖಾಧಿ ಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಳೆಗಾಲದಲ್ಲಿ ಈ ಭಾಗದಲ್ಲಿ ಕಡಲ ಕೊರೆತದ ಸಮಸ್ಯೆ ಅಧಿಕವಾಗಲಿ ರುವುದರಿಂದ ಇದಕ್ಕೆ ಬೇಕಾದ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ, ಕಡಲು ಕೊರೆತ ಕಂಡುಬಂದ ಪ್ರದೇಶಗಳಲ್ಲಿ ತುರ್ತು ನಿರ್ವಹಣೆಗೆ ಮುಂದಾಗುವಂತೆ ಅವರು ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಪಡುಬಿದ್ರಿ ಗ್ರಾಮ ಪಂಚಾಯತ್ ಸದಸ್ಯರಾದ ವಿದ್ಯಾಶ್ರೀ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಶಶಿಕಾಂತ್ ಪಡುಬಿದ್ರಿ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷೆ ನೀತಾ ಗುರುರಾಜ್ ಹಾಗೂ ಕಾಪು ತಹಶೀಲ್ದಾರರಾದ ಪ್ರತಿಭಾ, ಬಂದರು ಮತ್ತು ಮೀನುಗಾರಿಕಾ ಇಲಾಖೆಯ ಸಹಾಯಕ ಅಭಿಯಂತರ ಜಯರಾಜ್ ಉಪಸ್ಥಿತರಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…