ಪಡುಬಿದ್ರಿ : ಒವರ್ ಟೇಕ್ ಭರಾಟೆಯಿಂದ ಮುನ್ನುಗ್ಗಿ ಬಂದ ಕಾರೊಂದು ನಿಯಂತ್ರಣ ತಪ್ಪಿ ಮತ್ತೊಂದು ಕಾರಿಗೆ ಡಿಕ್ಕಿಯಾಗಿ ಎರಡೂ ಕಾರುಗಳು ಗದ್ದೆಗೆ ಉರುಳಿದ ಘಟನೆ ಪಡುಬಿದ್ರಿಯ ಅಲಂಗಾರು ಬಳಿ ನಡೆದಿದೆ.
ಕುಂದಾಪುರ ಮೂಲದ ಐ ಟೆನ್ ಕಾರು ಹಾಗೂ ಕೋಟ ಮೂಲದ ಶಿಪ್ಟ್ ಕಾರು ಅಪಘಾತಕ್ಕೆ ತುತ್ತಾಗಿದ್ದು, ಎರಡೂ ಕಾರುಗಳಲ್ಲೂ ಚಾಲಕರು ಮಾತ್ರ ಇದ್ದು ಶಿಪ್ಟ್ ಕಾರಿನ ಚಾಲಕ ಗಾಯಗೊಂಡು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ.
ಈ ಭಾಗದಲ್ಲಿ ಹೆದ್ದಾರಿ ಬಹಳ ಅಪಾಯಕಾರಿ ತಿರುವು ಹೊಂದಿದ್ದು, ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಮೊದಲು ಸಿಂಗಲ್ ರಸ್ತೆ ಇರುವಾಗಲೂ ಈ ತಿರುವಿನಲ್ಲಿ ಬಹಳಷ್ಟು ಅಪಘಾತಗಳು ಸಂಭವಿಸಿ ಪ್ರಾಣಹಾನಿ ಸಂಭವಿಸಿದೆ.
ರಸ್ತೆ ಚತುಷ್ಪಥಗೊಳ್ಳುವ ಸಂದರ್ಭದಲ್ಲೂ ಹೆದ್ದಾರಿ ನೇರಗೊಳಿಸುವ ಪ್ರಕ್ರಿಯೆ ನಡೆಸದ ಕಾರಣ ಈಗಲೂ ಆ ತಿರುವು ಬಹಳಷ್ಟು ಅಪಘಾತಗಳಿಗೆ ನಾಂದಿಯಾಗುತ್ತಿದೆ. ಈ ಭಾಗದಲ್ಲಿ ವೇಗವಾಗಿ ಬರುವ ವಾಹನಗಳು ನಿಯಂತ್ರಣ ತಪ್ಪಿ ಪಕ್ಕದ ಗದ್ದೆಗೆ ಉರುಳುತ್ತಿದ್ದರೂ ಹೆದ್ದಾರಿ ಇಲಾಖೆ ತನಗೆ ಸಂಬಂಧವೇ ಇಲ್ಲದಂದೆ ವರ್ತಿಸುತ್ತಿದ್ದಾರೆ ಎಂಬುವುದು ಸಾರ್ವಜನಿಕರ ಆರೋಪ. ಹೆಜಮಾಡಿ ಟೋಲ್ ಸಿಬ್ಬಂದಿಗಳು ವಾಹನಗಳ ತೆರವು ಕಾರ್ಯ ನಡೆಸಿದರು. ಪಡುಬಿದ್ರಿ ಪೊಲೀಸರು ಪರಿಶೀಲನೆ ನಡೆಸಿ ವಾಹನಗಳನ್ನು ಠಾಣೆಗೆ ಸಾಗಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…