ಪಡುಬಿದ್ರಿ: ಪಡುಬಿದ್ರಿ ಪೊಲೀಸ್ ಠಾಣೆ ವ್ಯಾಪ್ತಿಯ ಬಂಟರ ಸಂಘದ ಎದುರು ಗುರುವಾರ ಸಂಜೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರು ಢಿಕ್ಕಿ ಹೊಡೆದು ಪಡುಬಿದ್ರಿ ಕೆಳಗಿನ ಪೇಟೆಯ ಫ್ಯಾನ್ಸಿ ಅಂಗಡಿಯ ಮಾಲಕ ಶೇಖರ ಶೆಟ್ಟಿಗಾರ್ (65) ಮೃತಪಟ್ಟಿದ್ದಾರೆ.
ಮಂಗಳೂರು ಕಡೆಯಿಂದ ಉಡುಪಿಯತ್ತ ಸಾಗುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ. ಕಾರು ಪಕ್ಕದ ಚರಂಡಿಗೆ ಮಗುಚಿ ಬಿದ್ದಿದೆ. ಶೇಖರ ಅವರು ನಡೆದುಕೊಂಡು ಹೋಗುತ್ತಿದ್ದರು. ತೀವ್ರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಸಾಗಿಸುವ ಹಾದಿಯಲ್ಲಿ ಮೃತಪಟ್ಟಿದ್ದಾರೆ. ಕಾರು ಚಾಲಕ ಸಣ್ಣ ಪುಟ್ಟ ಗಾಯದೊಂದಿಗೆ ಪಾರಾಗಿದ್ದಾನೆ.
ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…