ಪಡುಬಿದ್ರಿ: ಕಾರು ಹಾಗೂ ಬಸ್ಸು ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೋರ್ವಳು ಮೃತಪಟ್ಟ ಘಟನೆ ಸೋಮವಾರ ಸಂಜೆ ಉಡುಪಿ ಪಡುಬಿದ್ರಿ ಬೀಡು ಬಳಿ ನಡೆದಿದೆ.
ಮೃತ ಯುವತಿಯನ್ನು ಮಂಗಳೂರು ಕುಪ್ಪೆ ಪದವು ಮೂಲದ ನಿಕ್ಷಿತಾ (21) ಎಂದು ಗುರುತಿಸಲಾಗಿದೆ.
ಉಡುಪಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಲಾಗಿರುವ ವಾಮಂಜೂರು ನಿವಾಸಿ ಗುರುಕಿರಣ್ ತೀವ್ರ ಗಾಯಗೊಂಡಿದ್ದು, ಮುಲ್ಕಿ ಕಿಲ್ಪಾಡಿ ಗೇರುಕಟ್ಟೆ ಅಮೃತಾನಂದ ನಗರದ ನಿವಾಸಿ ಧನುಷ್ (23), ಮುಲ್ಕಿ ಬಪ್ಪನಾಡಿನ ಆಲಿತೋಟ ನಿವಾಸಿ ಹರ್ಷಿಣಿ (17) ಗಾಯಗೊಂಡು ಮುಕ್ಕದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಾರು ಅತೀವ ವೇಗದಿಂದ ಮುಲ್ಕಿ ಕಡೆಯಿಂದ ಉಡುಪಿಯತ್ತ ಸಂಚರಿಸುತಿದ್ದು, ಪಡುಬಿದ್ರಿ ಬೀಡು ಬಳಿವಿನ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲಿಂದ ಹಾರಿ ಉಡುಪಿ ಕಡೆಯಿಂದ ಸಂಚರಿಸುತಿದ್ದ ಬಸ್ಸಿಗೆ ಢಿಕ್ಕಿ ಹೊಡೆದಿತ್ತು. ಢಿಕ್ಕಿಯಾದ ರಭಸಕ್ಕೆ ಕಾರು ಹಾಗೂ ಬಸ್ಸಿನ ಮುಂಭಾಗ ಜಖಂಗೊಂಡಿದೆ.
ಘಟನೆ ನಡೆದ ತಕ್ಷಣ ಗಾಯಗಳುಗಳನ್ನು ಕಾರಿನಿಂದ ಹೊರ ತೆಗೆದು ಆಸ್ಪತ್ರೆಗೆ ಸಾಗಿಸಲು ಸಾರ್ವಜನಿಕರು ಸಹಕರಿಸಿದರು. ಪಡುಬಿದ್ರಿ ಠಾಣಾಧಿಕಾರಿ ಮತ್ತು ಪೊಲೀಸರು ಅಪಘಾತ ಸ್ಥಳಕ್ಕೆ ಧಾವಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆಯನ್ನು ಮಾಡಿಕೊಟ್ಟರು.
ಪಡುಬಿದ್ರೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…