Featured

ಪಡುಬಿದ್ರಿ: ಕುಡಿಯಲು ನೀರು ಕೇಳುವ ನೆಪದಲ್ಲಿ ಮನೆ ಮಾಲಕಿಯ ಕರಿಮಣಿ ದೋಚಲು ಯತ್ನ – Vishwanews24

ಪಡುಬಿದ್ರಿ: ಕುಡಿಯಲು ನೀರು ಕೇಳುವ ನೆಪದಲ್ಲಿ ಮನೆ ಮಾಲಕಿಯ ಕರಿಮಣಿ ದೋಚಲು ಯತ್ನ – ಆರೋಪಿಗೆ ನ್ಯಾಯಾಂಗ ಬಂಧನ

ಪಡುಬಿದ್ರಿ: ಕುಡಿಯಲು ನೀರು ಕೇಳುವ ನೆಪದಲ್ಲಿ ಎಲ್ಲೂರು ಗ್ರಾಮದ ದಳಂತ್ರ ಕೆರೆ ಸಮೀಪದ ಕೃಷ್ಣರಾಜ ಹೆಗಡೆ ಅವರ ಮನೆಗೆ ಎ. 12ರಂದು ಸಂಜೆ ಬಂದ ಪಾಲಡ್ಕ ನಿವಾಸಿ ಶರತ್‌ ಎಂಬಾತನು ಮನೆ ಮಾಲಕಿಯ ಆಭರಣ ದೋಚಲು ಯತ್ನಿಸಿದ್ದು, ಆತನನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಯು ಇದೇ ಮನೆಯಲ್ಲಿ ಈ ಹಿಂದೆ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಶುಕ್ರವಾರ ಸಂಜೆ ಮನೆಗೆ ಬಂದು ಕುಡಿಯಲು ನೀರು ಕೇಳಿದ್ದ. ಮನೆ ಮಾಲಕಿ ಸುನೀತಿ ಹೆಗಡೆ ನೀರು ತರಲು ಒಳಗೆ ಹೋದಾಗ ಆರೋಪಿಯು ಹಿಂಬಾಲಿಸಿಕೊಂಡು ಹೋಗಿದ್ದ. ಮಹಿಳೆಯನ್ನು ಅಡುಗೆ ಮನೆಯಿಂದ ಸ್ನಾನದSet featured image ಕೋಣೆಯವರೆಗೆ ತಳ್ಳಿಕೊಂಡು ಹೋಗಿ ಅಲ್ಲಿ ಬೀಳಿಸಿದ್ದ. ಬಳಿಕ ಬಾತ್‌ಟವೆಲ್‌ನಲ್ಲಿ ಉಸಿರುಗಟ್ಟಿಸಲು ಯತ್ನಿಸಿ ಕುತ್ತಿಗೆಯಲ್ಲಿದ್ದ ಬಂಗಾರದ ಕರಿಮಣಿ ಸರವನ್ನು ಕಸಿಯಲು ಮುಂದಾಗಿದ್ದ. ಈ ಸಂದರ್ಭದಲ್ಲಿ ಕೃಷ್ಣರಾಜ ಹೆಗಡೆ ಹೊರಗೆ ಹೋಗಿದ್ದರು.

ಮಹಿಳೆಯು ಬೊಬ್ಬೆ ಹಾಕಿದ್ದು, ಅದನ್ನು ಕೇಳಿಸಿ ಕೃಷ್ಣರಾಜ ಹೆಗಡೆ ಓಡಿ ಬಂದಾಗ ಆರೋಪಿಯು ಪರಾರಿಯಾಗಿದ್ದ. ಪಡುಬಿದ್ರಿ ಪೊಲೀಸರು ಈತನನ್ನು ಕೇವಲ 12 ತಾಸುಗಳಲ್ಲಿ ಮುದರಂಗಡಿಯಲ್ಲಿ ಬಂಧಿಸುವಲ್ಲಿ ಸಫ‌ಲರಾಗಿದ್ದಾರೆ. ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ -vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…

21 hours ago

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

2 days ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

2 days ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

2 days ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

2 days ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

2 days ago