ಪಡುಬಿದ್ರಿ: ಕುಡಿಯಲು ನೀರು ಕೇಳುವ ನೆಪದಲ್ಲಿ ಎಲ್ಲೂರು ಗ್ರಾಮದ ದಳಂತ್ರ ಕೆರೆ ಸಮೀಪದ ಕೃಷ್ಣರಾಜ ಹೆಗಡೆ ಅವರ ಮನೆಗೆ ಎ. 12ರಂದು ಸಂಜೆ ಬಂದ ಪಾಲಡ್ಕ ನಿವಾಸಿ ಶರತ್ ಎಂಬಾತನು ಮನೆ ಮಾಲಕಿಯ ಆಭರಣ ದೋಚಲು ಯತ್ನಿಸಿದ್ದು, ಆತನನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಯು ಇದೇ ಮನೆಯಲ್ಲಿ ಈ ಹಿಂದೆ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಶುಕ್ರವಾರ ಸಂಜೆ ಮನೆಗೆ ಬಂದು ಕುಡಿಯಲು ನೀರು ಕೇಳಿದ್ದ. ಮನೆ ಮಾಲಕಿ ಸುನೀತಿ ಹೆಗಡೆ ನೀರು ತರಲು ಒಳಗೆ ಹೋದಾಗ ಆರೋಪಿಯು ಹಿಂಬಾಲಿಸಿಕೊಂಡು ಹೋಗಿದ್ದ. ಮಹಿಳೆಯನ್ನು ಅಡುಗೆ ಮನೆಯಿಂದ ಸ್ನಾನದSet featured image ಕೋಣೆಯವರೆಗೆ ತಳ್ಳಿಕೊಂಡು ಹೋಗಿ ಅಲ್ಲಿ ಬೀಳಿಸಿದ್ದ. ಬಳಿಕ ಬಾತ್‌ಟವೆಲ್‌ನಲ್ಲಿ ಉಸಿರುಗಟ್ಟಿಸಲು ಯತ್ನಿಸಿ ಕುತ್ತಿಗೆಯಲ್ಲಿದ್ದ ಬಂಗಾರದ ಕರಿಮಣಿ ಸರವನ್ನು ಕಸಿಯಲು ಮುಂದಾಗಿದ್ದ. ಈ ಸಂದರ್ಭದಲ್ಲಿ ಕೃಷ್ಣರಾಜ ಹೆಗಡೆ ಹೊರಗೆ ಹೋಗಿದ್ದರು.
ಮಹಿಳೆಯು ಬೊಬ್ಬೆ ಹಾಕಿದ್ದು, ಅದನ್ನು ಕೇಳಿಸಿ ಕೃಷ್ಣರಾಜ ಹೆಗಡೆ ಓಡಿ ಬಂದಾಗ ಆರೋಪಿಯು ಪರಾರಿಯಾಗಿದ್ದ. ಪಡುಬಿದ್ರಿ ಪೊಲೀಸರು ಈತನನ್ನು ಕೇವಲ 12 ತಾಸುಗಳಲ್ಲಿ ಮುದರಂಗಡಿಯಲ್ಲಿ ಬಂಧಿಸುವಲ್ಲಿ ಸಫಲರಾಗಿದ್ದಾರೆ. ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…