ಉಡುಪಿ: ಪಕ್ಕದ ಮನೆ ಕೋಳಿ ತಮ್ಮ ಮನೆ ಮುಂದೆ ಬಂತೆಂಬ ಕ್ಷುಲ್ಲಕ ಕಾರಣಕ್ಕೆ ಬಡಿಗೆಯಿಂದ ಪರಸ್ಪರ ಬಡಿದಾಡಿದ ಘಟನೆ ಉಡುಪಿ ಜಿಲ್ಲೆ ಕಾಪು ತಾಲೂಕಿನಲ್ಲಿ ನಡೆದಿದೆ.
ಉಡುಪಿ ಜಿಲ್ಲೆ ಕಾಪು ತಾಲೂಕಿನ ಪಡುಬಿದ್ರೆ ಸಮೀಪದ ಉಳ್ಳೂರು ಗ್ರಾಮದಲ್ಲಿ ಗಲಾಟೆ ನಡೆದಿದೆ. ರವಿರಾಜ್ ಶೆಟ್ಟಿ ಎಂಬಾತ ದೊಣ್ಣೆ ತೆಗೆದುಕೊಂಡು ವಾರಿಜಾ ಶೆಟ್ಟಿ ಮೇಲೆ ಹಲ್ಲೆ ಮಾಡಿದ್ದಾನೆ. ರವಿರಾಜ್ ಮನೆಯ ಕೋಳಿ ವಾರಿಜಾ ಅವರ ಅಂಗಳಕ್ಕೆ ಹೋಗಿದೆ. ಅದನ್ನು ವಾರಿಜ ಓಡಿಸಿದ್ದಾರೆ. ಅಲ್ಲದೆ ಕೋಳಿ ಪದೇಪದೇ ಬರುತ್ತದೆ ಎಂದು ವಾರಿಜಾ ಬೈದಿದ್ದಾರೆ. ಇದೇ ವಿಚಾರ ರಂಪಾಟಕ್ಕೆ ಕಾರಣವಾಗಿದೆ.
ಮಾತಿಗೆ ಮಾತು ಬೆಳೆದು ಜಗಳ ಮಿತಿ ಮೀರಿ ದೊಣ್ಣೆ ತೆಗೆದುಕೊಂಡು ಮಹಿಳೆಯರ ಮೇಲೆ ರವಿರಾಜ್ ಹಲ್ಲೆ ಮಾಡಿದ್ದಾನೆ. ಮಹಿಳೆಯರನ್ನು ಎಳೆದಾಡಿ ಅವಾಚ್ಯವಾಗಿ ಬೈದಿದ್ದಾನೆ. ಆತನಿಗೆ ಮಹಿಳೆಯೊಬ್ಬರು ಬೆಂಬಲ ನೀಡಿದ್ದು, ವಾರಿಜಾ ಅವರ ಬೆಂಬಲಕ್ಕೆ ಬಂದ ಮಹಿಳೆಯ ಮೇಲೂ ಹಲ್ಲೆಯಾಗಿದೆ.
ಈ ಕೋಳಿ ಜಗಳದ ಹಿಂದೆ ಹಳೆಯ ವೈಷಮ್ಯ ಜಮೀನಿನ ತಗಾದೆ ಇರಬಹುದು ಎನ್ನಲಾಗಿದೆ. ನಂತರ ಪಡುಬಿದ್ರಿ ಪೊಲೀಸರು ಎರಡೂ ಕುಟುಂಬದವರನ್ನು ಠಾಣೆಗೆ ಕರೆಸಿ ಮುಚ್ಚಳಿಕೆ ಬರೆದು, ಎಚ್ಚರಿಕೆ ಕೊಟ್ಟು ಕಳುಹಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…