ಪಡುಬಿದ್ರಿ: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿರುವ ಬಗ್ಗೆ ಪಡುಬಿದ್ರೆ ಠಾಣೆಯಲ್ಲಿ ದೂರು ದಾಖಲಾಗಿದೆ.
ಈ ಬಗ್ಗೆ ಗೋವಿಂದ ರಾಜ್ ಎಂಬವರು ಪೊಲೀಸರಿಗೆ ದೂರು ನೀಡಿದ್ದು, ಇವರು ಮಾ.2 ರಂದು ಕಾಪುವಿನ ನಂದಿಕೂರು ಗ್ರಾಮದ ಕೈಗಾರಿಕಾ ಪ್ರದೇಶದ ಶ್ರೀ ಚಕ್ರ ಇಂಡಸ್ಟ್ರಿ ಬಳಿ ಗಾರೆ ಕೆಲಸ ಮಾಡುತ್ತಿರುವಾಗ ಐವಾನ್ ಡಿಸೋಜ ರವರು ಪೋನ್ ಮಾಡಿ ಗ್ಯಾರೇಜಿಗೆ ಬರಲು ತಿಳಿಸಿದ್ದರು. ಅದರಂತೆ ಮಧ್ಯಾಹ್ನದ ವೇಳೆ ಕೈಗಾರಿಕಾ ಪ್ರದೇಶದಿಂದ ಹೋಗುತ್ತಿರುವಾಗ ನಿಟ್ಟೆಯ ಫಾರೂಕ್ ಹಾಗೂ ಆತನ ರೈಟರ್ ಅಲ್ಲಿಗೆ ಬಂದು ಇವರನ್ನು ತಡೆದು ನಿಲ್ಲಿಸಿ ಅವಾಚ್ಯ ಶಬ್ದಗಳಿಂದ ಬೈದು ನೆಲಕ್ಕೆ ದೂಡಿ ಬೀಳಿಸಿ, ತುಳಿದು, ಕಲ್ಲಿನಲ್ಲಿ ಹೊಡೆದು ಹಲ್ಲೆ ಮಾಡಿದ್ದಾರೆ. ಮಾತ್ರವಲ್ಲದೆ ಚೂರಿಯನ್ನು ತೋರಿಸಿ ಕೊಲ್ಲುವುದಾಗಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ.
ಹಾಗೂ ಹಲ್ಲೆಯಿಂದ ಕೈಗೆ ತರಚಿದ ಗಾಯವಾಗಿದ್ದು, ಈ ಬಗ್ಗೆ ಕಾರ್ಕಳದ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದಿರುವುದಾಗಿದೆ ನೀಡಿದ ದೂರಿನಂತೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…